Government Employees: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌: OPS ಸೇರಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವ ಮುನಿಯಪ್ಪ

Government Employees: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹಳೆ ಪಿಂಚಣಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸರ್ಕಾರದ ಮಟ್ಟದಲ್ಲಿ ನಡೆದಿದ್ದು, ಸರ್ಕಾರಿ ನೌಕರರಲ್ಲಿ ಶೀಘ್ರದಲ್ಲಿಯೇ ಶುಭ ಸುದ್ದಿ ಸಿಗಲಿದೆ.

ಈ ಕುರಿತು ಸಚಿವ ಮುನಿಯಪ್ಪ ಮಾತನಾಡಿ, ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ಯೋಜನೆಯೂ ಸೇರಿದಂತೆ ಸರ್ಕಾರಿ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಜೊತೆಗೆ ಚರ್ಚಿಸಲಾಗುವುದು, ಅಲ್ಲದೇ ಮುಂಬರುವ ದಿನಗಳಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಬಾಕಿ ಊಳಿದರಿವ 24ಸಾವಿರ ಬ್ಯಾಕ್ ಲಾಗ್ ಹುದ್ದೆಗಳ ಬರ್ತಿಗೆ ಕ್ರಮವಹಿಸಲಾಗುವುದು.

government employees muniyappa said that action will be taken to fulfill all demands including ops

Government Employees: ನೌಕರರ ಬೇಡಿಕೆಗಳ ಈಡೇರಿಕೆಗೆ ಕ್ರಮ

ಸರ್ಕಾರಿ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಚರ್ಚೆ ನಡೆಸಲಾಗುವುದು. ಎಸ್ಸಿ ಎಸ್ಟಿ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ನಾನು ನಮ್ಮ ಉಪಮುಖ್ಯಮಂತ್ರಿ ಪರಮೇಶ್ವರ್ ರವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತೇವೇ ಎಂದರು. ಆಂಜನೇಯ ಸಮಾಜ ಕಲ್ಯಾಣ ಸಚಿವನಿದ್ದಾಗ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ ಮಾಡಿದ ಫಲ ಇಂದು ಎಲ್ಕಾ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲು ಸಹಕಾರಿಯಾಗಿದೆ ನಾನು ಕೋಲಾರದಲ್ಲಿ ಸಂಸದನಾಗಿದ್ದಾಗ ಹೋಬಳಿಗೊಂದು ವಸತಿ ಶಾಲೆಯನ್ನು ನಿರ್ಮಿಸಿದೆ ಅದು ಇಂದು ಮಕ್ಕಳ ಗುಣಮಟ್ಟ ಶಿಕ್ಷಣವನ್ನು ಪಡೆಯಲು ಸಹಕಾರಿಯಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿವಿಧ ನಿಗಮಗಳ ಅನುದಾನದ ಹೆಚ್ಚಳದೊಂದಿಗೆ ಸಮುದಾಯದ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಭೋವಿ ಅಭಿವೃದ್ಧಿ ನಿಗಮದ ಸಭೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ರವರು ಸಮುದಾಯದ ಸಮಸ್ಯಗಳ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದರು. ಭೋವಿ ಸಮುದಾಯದಲ್ಲಿ ಜಾತಿ ಪ್ರಮಾಣ ಪತ್ರದ ಗೊಂದಲಗಳಿದ್ದು ಭೋವಿ ವಡ್ಡ ಎಂದೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲು ಇಲಾಖೆಯ ವತಿಯಿಂದ ಕ್ರಮವಹಿಸಬೇಕು ಎಂದರು,ಹಾಗೆಯೇ ಭೋವಿ ಸಮುದಾಯ ಭವನ ಗಳನ್ನು ನಿರ್ಮಿಸಲು ಕ್ರಮವಹಿಸಲು ಸಚಿವರಿಗೆ ಒತ್ತಾಯಿಸಿದರು.

ಸಮಾಜ ಕಲ್ಯಾಣ ಇಲಾಖೆಯಡಿ ನಾವು ಈಗಾಗಲೇ ಅಂಬೇಡ್ಕರ್ ಭವನ ,ಜಗಜೀವನ್ ರಾಮ್ ಭವನ ನಿರ್ಮಿಸುತ್ತಿದ್ದು ಭೋವಿ ಸಮುದಾಯದ ಗುರುಗಳಾದ ಸಿದ್ದರಾಮೇಶ್ವರ ರವರ ಹೆಸರನಡಿ 10 ಭವನಗಳನ್ನು ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು ಜಿಲ್ಲಾ ವಾರು ಸಿಎ.ನಿವೇಶನಗಳನ್ನು ಗುರುತು ಮಾಡಿ ಜಿಲ್ಲಾಧಿಕಾರಿಗಳಿಂದ ಪಟ್ಟಿ ಜರೂರಾಗಿ ತರಸಿ ಸೂಕ್ತ ಸ್ಥಳದಲ್ಲಿ ಸಿದ್ದರಾಮೇಶ್ವರ ಭೋವಿ ಸಮುದಾಯ ಭವನಗಳನ್ನು ನಿರ್ಮಿಸಲು ಬದ್ದವಾಗಿದ್ದೇವೆ ಎಂದರು.

ಹಾಗೆಯೇ ಲಂಬಾಣಿ ಸಮುದಾಯದ ಅಭಿವೃದ್ಧಿ ಗಾಗಿ ಬಂಜಾರ ಸಮುದಾಯ ಭವನಗಳನ್ನು ನಿರ್ಮಿಸಲಾಗುವುದು. ಪರಿಶಿಷ್ಟ ಜಾತಿಯ ಎಲ್ಲಾ ನೂರೊಂದು ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲಾ ಸಮುದಾಯಗಳ ಕಾರ್ಯಕ್ರಮಗಳ ಅನುಷ್ಠಾನ ಮಾಡಲಾಗುವುದು. ಈ ಸಮುದಾಯ ಭವನಗಳು ಅಧ್ಯಾಯನ ಕೇಂದ್ರಗಳಾದಾಗ ಮಾತ್ರ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಪಡೆಯಲು ಸಹಕಾರಿಯಾಗಲಿದೆ ಸಮುದಾಯ ಭವನದಲ್ಲಿ ಗ್ರಂಥಾಲಯ ವ್ಯವಸ್ಥೆ ಕಲ್ಪಿಸಿ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಈ ದೂರದೃಷ್ಟಿಯಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು ಎಂದರು. ಸರ್ಕಾರಿ ನೌಕರರು

ಭೋವಿ ಸಮುದಾಯದ ಸಮಸ್ಯೆ ಪರಿಹಾರ

ಭೋವಿ ಸಮುದಾಯದ ಎಲ್ಲಾ ಸಮಸ್ಯೆಗಳನ್ನು ಒಂದು ವಾರದಲ್ಲಿ ಬಗೆಹರಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಅಂದಿನ ದಿವಂಗತ ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ರವರ ಬಳಿ ನಾನು ಕೇಂದ್ರದಲ್ಲಿ ಸಚಿವನಿದ್ದಾಗ ನಮ್ಮ ರಾಜ್ಯದ ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ ದೃವನಾರಾಯಣ ಹಾಗೂ ಸಂಸದರ ನಿಯೋಗ ಪ್ರಣಬ್ ಮುಖರ್ಜಿ ರವರನ್ನು ಬೇಟಿ ಮಾಡಿ ಪರಿಶಿಷ್ಟ ಜಾತಿಯ ಸಮುದಾಯಗಳಿಗೆ ಗುತ್ತಿಗೆಯಲ್ಲಿ 50 ಲಕ್ಷಗಳವರೆಗೂ ಮೊದಲ ಆದ್ಯತೆಯಲ್ಲಿ ಅವರಿಗೆ ಮೀಸಲಿಡಬೇಕು ಎಂಬ ಮನವಿಯನ್ನು ಸಲ್ಲಿಸಿದಾಗ ಜಾರಿಗೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಅಂದಿನ ತೀರ್ಮಾನದಿಂದ ಈಗ ಒಂದು ಕೋಟಿಯವರೆಗೂ ಗುತ್ತಿಗೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+