Government Employees: ರಾಜ್ಯ ಸರ್ಕಾರಿ ನೌಕರರು ವಿಶೇಷ ವೇತನ ಬಡ್ತಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳಿವು
Government Employees: ಸರ್ಕಾರಿ ನೌಕರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಗಾಗ ಅಪ್ಡೇಟ್ ಮಾಹಿತಿಯನ್ನು ನೀಡುತ್ತಲೇ ಇರುತ್ತದೆ. ಇದೀಗ ರಾಜ್ಯ ಸರ್ಕಾರಿ ನೌಕರರ ವಿಶೇಷ ವೇತನ ಬಡ್ತಿ (SFN) ಮಂಜೂರು ಮಾಡಿದೆ. ಹಾಗಾದರೆ ಅರ್ಜಿ ಸಲ್ಲಿಸಲು ಸರ್ಕಾರಿ ನೌಕರರು ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ವಿಶೇಷ ವೇತನ ಬಡ್ತಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
* STERILIZATION CERTIFICATE
* ಒಂದು ಅಥವಾ ಎರಡು ಮಕ್ಕಳಿದ್ದಾರೆ ಎಂದು ಹಾಗೂ ಪತಿ/ಪತ್ನಿಯು ಕುಟುಂಬ ನಿಯಂತ್ರಣ ಭತ್ಯೆ ಪಡೆದಿಲ್ಲವೆಂದು ಛಾಪಾ ಕಾಗದದಲ್ಲಿ ಬರೆದುಕೊಟ್ಟಿರುವ ಮುಚ್ಚಳಿಕೆ ಪ್ರಮಾಣ ಪತ್ರ.
* ತಿಂಗಳ ವೇತನ ಪ್ರಮಾಣ ಪತ್ರ
* ಪತಿ ಅಥವಾ ಪತ್ನಿಯ ತಿಂಗಳ ವೇತನ ಪ್ರಮಾಣ ಪತ್ರ
* ಅರ್ಜಿದಾರರ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಪತಿ ಅಥವಾ ಪತ್ನಿಯ SSLC ಅಂಕಪಟ್ಟಿ
* ಚೆಕ್ ಲಿಸ್ಟ್: ಕುಟುಂಬ ನಿಯಂತ್ರಣ ಭತ್ಯೆ ಬಗ್ಗೆ ದಾಖಲಾತಿಗಳನ್ನು ಪರಿಶೀಲಿಸುವ ಬಗ್ಗೆ ಕಛೇರಿ ನಮೂನೆ.

ನಿವೃತ್ತಿ ವೇತನದ ಕುರಿತು ಸಂಪೂರ್ಣ ಮಾಹಿತಿ
ನಿವೃತ್ತಿ ವೇತನ ನಿಯಮಗಳ ಕುರಿತು ಕರ್ನಾಟಕ ನಾಗರೀಕ ಸೇವಾ ನಿಯಮಗಳು- 1958ರ ಭಾಗ-4ರಲ್ಲಿ ಪ್ರಸ್ತಾಪಿಸಿರುವ ಪ್ರಮುಖ ಮಾಹಿತಿಗಳ ಬಗ್ಗೆ ರಾಜ್ಯ ಸರ್ಕಾರಿ ನೌಕರರು ಗಮನಿಸಬೇಕಾದ ಪ್ರಮುಖಾಂಶಗಳು ಇಲ್ಲಿವೆ ನೋಡಿ.
* ಸಾಮಾನ್ಯ ಜನರಂತೆ ಸರ್ಕಾರಿ ನೌಕರರು ಸಹ ಶಕ್ತಿಯಿರುವವರೆಗೆ ದುಡಿಯುತ್ತಾರೆ.
* ವಯಸ್ಸು ಆದಂತೆ ಕರ್ತವ್ಯ ದಕ್ಷತೆ ಕಡಿಮೆ ಆಗುತ್ತದೆ.
* ಆರಂಭದಲ್ಲಿ ಇದ್ದ ಕೆಸಲದ ಮೇಲಿನ ಉತ್ಸಾಹ ಕೊನೆವರೆಗೂ ಇರುವುದಿಲ್ಲ. ಇದರಿಂದ ಸಾರ್ವಜನಿಕರ ಕೆಲಸಗಳು ವಿಳಂಬಿಸುತ್ತವೆ
* ಹೊಸತಲೆಮಾರಿಗೆ ಉದ್ಯೋಗದ ಅವಶ್ಯಕತೆ ಇದ್ದು, ಅದಕ್ಕಾಗಿ ನಿವೃತ್ತಿ ಅನಿವಾರ್ಯ ಆಗುತ್ತದೆ.
* ನಿವೃತ್ತಿಯ ವಯಸ್ಸು ಆಯಾ ದೇಶಗಳ ನಿಮಗಳು ಹಾಗೂ ಜೀವಿತಾವಧಿಯನ್ನು ಅವಲಂಬಿಸಿರುತ್ತದೆ. ಯುಎಸ್‌ಎನಲ್ಲಿ ಜೀವಿತಾವಧಿ ವಯಸ್ಸು 65-70, ಬ್ರಿಟನ್‌ನಲ್ಲಿ ಜೀವಿತಾವಧಿ ವಯಸ್ಸು 60-65 ವರ್ಷ ಆಗಿದ್ದರೆ, ಭಾರತದಲ್ಲಿ ಮಾತ್ರ ಜೀವಿತಾವಧಿ ವಯಸ್ಸು 55-60 ವರ್ಷ ಆಗಿದೆ.
ನಿವೃತ್ತಿ ಸೌಲಭ್ಯಗಳ ಸಿದ್ದಾಂತಗಳು
* ಪ್ರತಿಯೊಂದು ದೇಶದಲ್ಲೂ ಸಹ ಸರ್ಕಾರಿ ಸೇವೆಯಿಂದ ನಿವೃತ್ತರಾದವರಿಗೆ ಅವರ ಇಳಿವಯಸ್ಸಿನಲ್ಲಿ ಪರಿಹಾರವಾಗಿ ಮಾಸಿಕ ಹಿಡಿಗಂಟಾಗಿ ಹಣವನ್ನು ಪಾವತಿದಲಾಗುತ್ತಿದೆ. ಇದಕ್ಕಾಗಿ ಅಯವ್ಯಯದಲ್ಲಿ ಸರ್ಕಾರ ಹಣವನ್ನು ಕಾಯ್ದಿರಿಸುತ್ತದೆ.
* ಈ ರೀತಿಯ ವ್ಯವಸ್ಥೆ ಇಲ್ಲದಿದ್ದರೆ, ನೌಕರನು ಸಾಯುವತನಕ ವಿರಾಮವಿಲ್ಲದೆ ದುಡಿಯಬೇಕಿತ್ತು. ಇನ್ನು ವಯಸ್ಸಾದ ನೌಕರರ ಸಂಖ್ಯೆ ಹೆಚ್ಚಳವಾಗಿ ಆಡಳಿತ ದುರ್ಬಲವಾಗುತ್ತಿದೆ.
* ಅಲ್ಲದೆ ಈ ವ್ಯವಸ್ಥೆಗಳು ಇಲ್ಲದಿದ್ದರೆ, ನೌಕರನ ಜೀವನ ತುಂನಾ ಕಷ್ಟಕರವಾಗುತಿತ್ತು.
ನಿವೃತ್ತಿಯಾದಾಗ ದೊರೆಯುವ ಸೌಲಭ್ಯಗಳು
1.ನಿವೃತ್ತಿ ವೇತನ
2.ಸೇವಾ ಉಪದಾನ
3.ಪರಿವರ್ತಿತ ಪಿಂಚಣಿ
4.ಸೇವಾಂತ್ಯದಲ್ಲಿ ಉಳಿದಿರುವ ಗಳಿಕೆರಜೆ ನಗದೀಕರಣ ಸೌಲಭ್ಯ
5.ಸಾಮೂಹಿಕ ವಿಮಾ ಯೋಜನೆ ಉಳಿತಾಯ ನಿಧಿ ಮೊತ್ತ
6.ಸಾಮಾನ್ಯ ಭವಿಷ್ಯ ನಿಧಿ ಮೊತ್ತ
7.ನಿವೃತ್ತಿ ಸ್ಥಳಕ್ಕೆ ಪ್ರಯಾಣ ಮಾಡಿದಾಗ ಉಂಟಾಗುವ ವೆಚ್ಚಗಳು
ಸಾಮಾನ್ಯ ನಿವೃತ್ತಿ ವೇತನದ ನಿಯಮಗಳು
* ನಿವೃತ್ತಿ ವೇತನ ಎಂದರೆ ನಿವೃತ್ತಿ ವೇತನ ಹಾಗೂ ಸೇವಾ ಉಪದಾನ ಸೇರಿರುತ್ತದೆ.
* ನಿವೃತ್ತಿ ವೇತನವನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರಿ ಕಚೇರಿ ಮುಖ್ಯಸ್ಥರಾಗಿರುತ್ತಾರೆ.
* ನಿವೃತ್ತಿ ವೇತನ ಪಡೆಯಲು ಸರ್ಕಾರಿ ನೌಕರ ಒಳ್ಳೆಯ ನಡತೆಯನ್ನು ಹೊಂದಿರಬೇಕು.
* ನಿವೃತ್ತಿ ವೇತನ ಪಡೆಯುವ ನೌಕರನು ಅಪರಾಧಿ ಅಥವಾ ತಪ್ಪಿತಸ್ಥನೆಂದು ತಿಳಿದು ಬಂದರೆ ಅಂತಹವರಿಗೆ ನಿವೃತ್ತಿ ವೇತನವನ್ನು ತಡೆಯಿಡಿಯಬಹುದು ಅಥವಾ ಭಾಗಶಃ ಅಥವಾ ಸಂಪೂರ್ಣ ಹಿಂತೆಗೆದುಕೊಳ್ಳಬಹುದು.
* ದುರ್ವತ್ರನೆಗಾಗಿ ಅಥವಾ ನಿರ್ಲಕ್ಷ್ಯಕ್ಕಾಗಿ ನಿವೃತ್ತಿ ವೇತನವನ್ನು ತಡೆಯಿಡಿಯಬಹುದು.
* ಕಡ್ಡಾಯ ನಿವೃತ್ತಿ ವಯಸ್ಸನ್ನು ತಲುಪಿ ಅಥವವಾ ನಿವೃತ್ತಿ ದಿನಾಂಕದಂದು ಅಮಾನತ್ತು ಆದರೆ ಅವರಿಗೆ ತಾರ್ತ್ತೂತಿಕ ಪಿಂಚಣಿ ಮಂಜೂರು ಮಾಡಬೇಕು.












Click it and Unblock the Notifications