Government Employees: ಸರ್ಕಾರಿ ನೌಕರರ ವಿಶೇಷ ಮನವಿ: ಸಿಎಂಗೆ ಪತ್ರ ಬರೆದ ಡಿಸಿಎಂ ಪತ್ರದಲ್ಲಿ ಏನಿದೆ ?

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಕೆಲವು ನಿರ್ದಿಷ್ಟ ವಿಷಯಗಳಿಗೆ ಅನುಮೋದನೆ ನೀಡವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರು ಹಾಗೂ ಕೇಂದ್ರ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳೆರಡೂ ಸಹ ವಿವಿಧ ಸೌಲಭ್ಯಗಳನ್ನು ನೀಡುತ್ತಿವೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಡಿ.ಎ ವಿಷಯದಲ್ಲೂ ಕೆಲವು ಮಹತ್ವದ ಬದಲಾವಣೆಗಳು ಆಗಿವೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ.3ರಷ್ಟು ಹೆಚ್ಚಳ ಮಾಡಲಾಗಿದೆ. ಈ ನಡುವೆ ರಾಜ್ಯ ಸರ್ಕಾರವು ಸಹ ಸರ್ಕಾರಿ ನೌಕರರೊಂದಿಗೆ ನಿವೃತ್ತ ನೌಕರರಿಗೂ ಕೆಲವೊಂದು ವಿನಾಯಿತಿಗಳನ್ನು ನೀಡಿದೆ.

Government Employees What is in DCM s letter written to CM

ಕರ್ನಾಟಕ ರಾಜ್ಯ ನಿವೃತ್ತ ನೌಕರರಿಗೆ ವಿಶೇಷ ವಿನಾಯಿತಿಯನ್ನು ನೀಡಲಾಗಿದೆ. 01.07.2022 ರಿಂದ 31.07.2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಕೆಲವು ವಿನಾಯಿತಿಗಳನ್ನು ನೀಡುವಂತೆ ಮನವಿ ಮಾಡಲಾಗಿತ್ತು. ಇದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ದನಿಗೂಡಿಸಿದ್ದಾರೆ. ಈ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಬರೆದಿದ್ದಾರೆ.

ಡಿ.ಸಿ.ಆರ್.ಜಿ ಕಮ್ಯುಟೇಶನ್, ಗಳಿಕೆ ರಜೆ, ನಗದೀಕರಣದ ಮೊತ್ತವನ್ನು (ಲೀವ್ ಎನ್‌ಕ್ಯಾಶ್‌ಮೆಂಟ್) 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಲು ಹಾಗೂ ಸರ್ಕಾರಿ ಆದೇಶ ಸಂಖ್ಯೆ: ಆಇ21ಎಸ್ಆರ್‌ಪಿ2024ರ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದರಲ್ಲಿ ಆರ್ಥಿಕ ಸೌಲಭ್ಯವನ್ನು 01.08.2024ರ ಬದಲಾಗಿ 01.07.2022ರಿಂದ 31.07.2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಪ್ರಸ್ತಾವನೆ (ಪ್ರಾಪ್ತವಾಗತಕ್ಕದ್ದು) ಎಂದು ತಿದ್ದುಪಡಿ ಮಾಡಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು. ಅಲ್ಲದೇ ಈ ವಿಷಯವನ್ನು ಅಂಗೀಕರಿಸಿ ಪರಿಷ್ಕೃತ ಆದೇಶ ಹೊರಡಿಸುವಂತೆ ಮನವಿ ಮಾಡಲಾಗಿದೆ. ಈ ಪತ್ರವನ್ನು ಆದೇಶ ಪತ್ರದೊಂದಿಗೆ ಸೇರಿಸುತ್ತಿರುವುದಾಗಿಯೂ ಡಿ.ಕೆ ಶಿವಕುಮಾರ್‌ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿರುವ ಡಿ.ಕೆ ಶಿವಕುಮಾರ್‌ ಅವರು, ಈ ಮನವಿಯನ್ನು ಸಹಾನುಭೂತಿ ದೃಷ್ಟಿಯಿಂದ ಪರಿಗಣಿಸುವಂತೆ ಹಾಗೂ ನಿಯಮಾನುಸಾರ ಸೂಕ್ತ ಆದೇಶ ಹೊರಡಿಸುವಂತೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್‌

ಇನ್ನು ಮತ್ತೊಂದು ಕಡೆ ಕೇಂದ್ರ ಸರ್ಕಾರವು ಸಹ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. 2024ನೇ ಸಾಲಿನ ಜುಲೈ 1ರಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ.3ರಷ್ಟು ಹೆಚ್ಚಳ ಮಾಡಲಾಗಿದೆ. 1 ಕೋಟಿಗೂ ಹೆಚ್ಚು ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ದೀಪಾವಳಿ ಸಮೀಪಿಸುತ್ತಿರುವಾಗಲೇ ಈ ಸಿಹಿಸುದ್ದಿ ಸಿಕ್ಕಿದೆ.

ಈ ಸಂಬಂಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ (DA) ಹಾಗೂ ಪಿಂಚಣಿದಾರರ ತುಟ್ಟಿಭತ್ಯೆ ಪರಿಹಾರ (DR) ಅನ್ನು ಮೂಲ ವೇತನ - ಪಿಂಚಣಿಯ ಶೇ.3ರಷ್ಟು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟ ಸಭೆಯಿಂದ ಅನುಮೋದನೆ ಪಡೆದುಕೊಂಡಿರುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+