ಶಿವಮೊಗ್ಗ ಈದ್ ಮಿಲಾದ್ ಗಲಾಟೆ: ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ
ಬೆಂಗಳೂರು, ಅಕ್ಟೋಬರ್ 02: ಕರ್ನಾಟಕದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ನಡೆದ ಘಟನೆ, ಅಲ್ಲಿನ ಪ್ರಕ್ಷುಬ್ಧ ವಾತಾವರಣ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸದ್ಯ ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆಗಳು ಈ ಹಿಂದೆ ನಡೆದಿವೆ. ಇಂತಹ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ದೂರಿದರು.

ಶಿವಮೊಗ್ಗದ ಮೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂತ ಘಟನೆ ನಡೆಯುತ್ತದೆ. ಇಂತಹ ಪೊಲೀಸ್ ಸ್ಟೇಷನ್‌ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿ ಹಾಕಬೇಕು. ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ.
ಇದರಿಂದ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆ. ಇದರ ಮೂಲ ಪ್ರತಿ ಡಿಸ್ಟಿಕ್‌ನಲ್ಲಿ ಕ್ಲಬ್, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ಇದನ್ನ ಸಮಗ್ರವಾಗಿ ನಿಭಾಯಿಸಬೇಕು. ಶಾಂತಿ ಕಾಪಾಡಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು. ಅಧಿಕಾರಿಗಳನ್ನು ಯಾವುದೇ ಮುಲಾಜಿಲ್ಲದೆ ಟ್ರಾನ್ಸ್‌ಫರ್ ಮಾಡಿದ್ಲರೆ. ಇಂತ ಘಟನೆ ನಿಲ್ಲುತ್ತದೆ ಎಂದು ಹೇಳಿದರು.
ಇವರ ಮಾತಲ್ಲಿ ಮಾತ್ರ ಗಾಂಧಿ
ಗಾಂಧೀಜಿ ಕಂಡ ಕನಸು ಕರ್ನಾಟಕದಲ್ಲಿ ನನಸು ಎಂದು ಸರ್ಕಾರ ಜಾಹೀರಾತು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಇವರು ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ ನೀತಿ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುತ್ತಾರೆ ಎಂದರು.

ಕಾಂಗ್ರೆಸ್‌ನವರು ಸಿಕ್ಕಲ್ಲೆಲ್ಲಾ ಮಧ್ಯದಂಗಡಿ ಶುರು ಮಾಡಿದ್ದಾರೆ. ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮಧ್ಯದಂಗಡಿ ತೆರಯಲು ಮುಂದಾಗಿದ್ದಾರೆ. ಹೇಳಲು ಮಾತ್ರ ಗಾಂಧಿ ಶಾಂತಿ ಮಂತ್ರ ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸಗಳು ಎಂದು ಅವರು ಕಿಡಿ ಕಾರಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದ ಜಿಲ್ಲಾ ಹಿತರಕ್ಷಣ ಸಮಿತಿ ವತಿಯಿಂದ ಮಂಡ್ಯದ ವಿಶ್ವಶ್ವರಯ್ಯ ಪ್ರತಿಮೆ ಬಳಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡ ಪ್ರತಿಭಟನೆ ನಡೆಸಿದರು. ವಿವಿಧ ಮುಖಂಡರು ಪಾಲ್ಗೊಂಡಿದ್ದರು.
ಸರ್ಕಾರ ದೊಂದಲಮಯವಾಗಿದೆ: ಬೊಮ್ಮಾಯಿ
ಹಾಲಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೂ ಸರಿಯಾಗಿ ಇಲ್ಲ ಎಂಬುದು ಗೊತ್ತಾಗಿದೆ. ರಾಜ್ಯ ಸರ್ಕಾರದ ಸಂಪುಟ ಸವರು ಪ್ರತಿದಿನ ಒಬ್ಬರಲ್ಲ ಒಬ್ಬರು ಒಂದಿಲ್ಲವೊಂದು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಸರ್ಕಾರವೇ ಗೊಂದಲದ ಗೂಡಾಗಿದೆ. ಸಚಿವರ ಮಧ್ಯೆ ಸಮನ್ವಯ, ಸಹಕಾರ ಕಾಣುತ್ತಿಲ್ಲ. ಜನರಿಗೆ ಈ ಸರ್ಕಾರದ ಬಗ್ಗೆ ಉತ್ತಮ ಭಾವನೆ ಇಲ್ಲ ಎಂದರು.
ಸರ್ಕಾರದಿಂದ ರಾಜ್ಯದಲ್ಲಿ ಬರ ಎದುರಾಗಿದ್ದರೂ ಸೂಕ್ತ ನೆರ ನೀಡಿಲ್ಲ. ಕಾವೇರಿ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ನಾಲ್ಕು ತಿಂಗಳಲ್ಲಿ ಈ ಸರ್ಕಾರ ಜನರ ಪ್ರೀತಿಯನ್ನು ಕಳೆದುಕೊಂಡಿದೆ ಎಂದು ಬೊಮ್ಮಾಯಿ ವಿವರಿಸಿದರು.












Click it and Unblock the Notifications