SSLC Good News: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ, ಏನದು ನೋಡಿ!
ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಕರ್ನಾಟಕದಲ್ಲಿ ಈಚೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಗ್ರೇಸ್ ಮಾರ್ಕ್ಸ್ ನಿಲ್ಲಿಸಲಾಗಿತ್ತು. ಇದೀಗ ಕರ್ನಾಟಕದ ಎಲ್ಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬಿಗ್‌ಗುಡ್‌ನ್ಯೂಸ್ ಕೊಡಲಾಗಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಸಂತೋಷ ಪಡುವ ಸುದ್ದಿಯೊಂದನ್ನು ಇದೀಗ ರಾಜ್ಯ ಸರ್ಕಾರ ಕೊಟ್ಟಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.
2025ನೇ ಮಾರ್ಚ್ ತಿಂಗಳಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾ ರಾವರ್ತಿತ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಸೂಚನೆ ನೀಡಲಾಗಿತ್ತು. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳು ಸಹ 11.11.2024ರ ಒಳಗಾಗಿ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ, ಕೆಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಗೆ ಮನವಿ ಬಂದಿದ್ದವು.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ನೋಂದಣಿ (ರಿಜಿಸ್ಟ್ರೇಷನ್) ಮಾಡುವ ದಿನಾಂಕವನ್ನು ಪುನ: ವಿಸ್ತರಿಸಲು ಮನವಿಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ನೋಂದಣಿಗಾಗಿ ದಿನಾಂಕಗಳನ್ನು ಮತ್ತೆ ವಿಸ್ತರಿಸಲಾಗಿದೆ.
ವಿವರ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ವೆಬ್‌ಸೈಟ್‌ನಲ್ಲಿ ಶಾಲಾ ಲಾಗಿನ್ ಮೂಲಕ CCERF, CCEPF, CCERR ಮತ್ತು CCEPR ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಲು ನಿಗದಿಪಡಿಸಿದ್ದ ದಿನಾಂಕ 11-11-2024 ಆಗಿತ್ತು. ಇದೀಗ ಅದನ್ನು 20-11-2024 ಕ್ಕೆ ವಿಸ್ತರಿಸಲಾಗಿದೆ.
ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಲು ನಿಗದಿ ಮಾಡಿದ್ದ ದಿನಾಂಕವನ್ನು ಸಹ ವಿಸ್ತರಿಸಲಾಗಿದೆ. ಈ ಹಿಂದೆ ಇದಕ್ಕೆ 12-11-2024 ರಿಂದ 16-11-2024ರ ವರೆಗೆ ಕಾಲಾವಕಾಶ ನಿಗದಿ ಮಾಡಲಾಗಿತ್ತು. ಇದೀಗ ಈ ಅವಧಿಯನ್ನು 21-11-2024 ರಿಂದ 26-11-2024ರ ವರೆಗೆ ವಿಸ್ತರಿಸಲಾಗಿದೆ. ಮಂಡಳಿ ಜಾಲತಾಣದ ಶಾಲಾಲಾಗಿನ್ ಮೂಲಕ CCEPF, CCERR ಮತ್ತು CCEPR ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ಅವಕಾಶ ಇರಲಿದೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಮಯ ವಿಸ್ತರಿಸಲಾಗಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಹೇಳಿದೆ.
ಗ್ರೇಸ್ ಮಾರ್ಕ್ಸ್ ಇಲ್ಲ
ಇನ್ನು ಕರ್ನಾಟಕದಲ್ಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನೀಡುವ ಅಂಕಗಳ ವಿಷಯದಲ್ಲೂ ಈ ಬಾರಿ ಮಹತ್ವ ಬದಲಾವಣೆಗಳನ್ನು ಮಾಡಲಾಗಿದೆ. ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಳೆದ ವರ್ಷ ನೀಡಲಾಗಿದ್ದ ಗ್ರೇಸ್ ಮಾರ್ಕ್ಸ್ ತಡೆಹಿಡಿಯಲಾಗಿದೆ. ಮುಂದಿನ ವರ್ಷದಿಂದ ಅಂದರೆ 2025ನೇ ಸಾಲಿನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡದೆ ಇರುವುದಕ್ಕೆ ಈಗಾಗಲೇ ನಿರ್ಧರಿಸಲಾಗಿದೆ. ಅಂದರೆ ಪ್ರಸಕ್ತ (ಈಗ) ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಮಾರ್ಕ್ಸ್ ಅನ್ವಯವಾಗಲಿದೆ.
ಕಳೆದ ಬಾರಿ ಗ್ರೇಸ್ ಮಾರ್ಕ್ಸ್ ನೀಡಿದ್ದ ನೀಡಿದ್ದಕ್ಕೆ ಶಿಕ್ಷಣ ತಜ್ಞರಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಈ ವಿಚಾರವಾಗಿ ಗರಂ ಆಗಿದ್ದರು. ಅದರ ಬೆನ್ನಲ್ಲೇ ಈ ನಿಯಮವನ್ನು ಕೈಬಿಡಲಾಗಿದೆ.












Click it and Unblock the Notifications