ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪದವಿ ವಿದ್ಯಾರ್ಥಿಗಳಿಗೆ ಬಂಪರ್ ಉಡುಗೊರೆ ನೀಡಿದ ಮೈತ್ರಿ ಸರ್ಕಾರ

|
Google Oneindia Kannada News

ಬೆಂಗಳೂರು, ಜೂನ್ 15: ರಾಜ್ಯದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸರ್ಕಾರವು ಬಂಪರ್ ಉಡುಗೊರೆ ನೀಡಲು ಸಜ್ಜಾಗಿದೆ.

ಸರ್ಕಾರಿ ಕಾಲೇಜಿನ ಎಲ್ಲ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಾಗೂ ಎರಡನೇ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧಿಸಿದೆ.

ಮೇಕೆದಾಟು ಯೋಜನೆಗೆ ಅನುಮತಿ ಕೊಡಿ: ಕೇಂದ್ರ ಸಚಿವರಿಗೆ ಎಚ್‌ಡಿಕೆ ಮನವಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿ: ಕೇಂದ್ರ ಸಚಿವರಿಗೆ ಎಚ್‌ಡಿಕೆ ಮನವಿ

ಈ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ಲ್ಯಾಪ್‌ಟಾಪ್ ಖರೀದಿಸಲು 311 ಕೋಟಿ ವೆಚ್ಚ ಮಾಡಲಾಗುತ್ತಿದ್ದು, 1.09 ಲಕ್ಷ ವಿದ್ಯಾರ್ಥಿಗಳಿಗೆ ಇದರಿಂದ ಸಹಾಯವಾಗಲಿದೆ ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.

Government giving lap top to government first and second year degree students

ಕಳೆದ ಅವಧಿಯಲ್ಲಿ ಕೇವಲ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಮಾತ್ರವೇ ಲ್ಯಾಪ್‌ಟಾಪ್ ನೀಡಲಾಗುತ್ತಿತ್ತು, ಅದನ್ನು ಎಲ್ಲ ವಿದ್ಯಾರ್ಥಿಗಳಿಗೆ ವಿಸ್ತರಿಸಲಾಗಿದೆ ಎಂದು ಕೃಷ್ಣಬೈರೇಗೌಡ ಹೇಳಿದರು.

ಮೋದಿ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿಮೋದಿ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ

ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವುದು ಮೊದಲಿಗೆ ತಮಿಳುನಾಡಿನಲ್ಲಿ ಜಾರಿಗೆ ಬಂದಿತ್ತು, ಅಲ್ಲಿ ಜಯಲಲಿತಾ ಅವರು ತಮ್ಮದೇ ಚಿತ್ರವುಳ್ಳ ಲ್ಯಾಪ್‌ಟಾಪ್‌ಗಳನ್ನು ವಿದ್ಯಾರ್ಥಿಗಳಿಗೆ ನೀಡಿದ್ದರು.

ರೈತರ ಬಗ್ಗೆ ಮೃದು ಧೋರಣೆ ಇರಲಿ: ಬ್ಯಾಂಕರುಗಳಿಗೆ ಕುಮಾರಸ್ವಾಮಿ ಸಲಹೆ ರೈತರ ಬಗ್ಗೆ ಮೃದು ಧೋರಣೆ ಇರಲಿ: ಬ್ಯಾಂಕರುಗಳಿಗೆ ಕುಮಾರಸ್ವಾಮಿ ಸಲಹೆ

ಇದೇ ಸಭೆಯಲ್ಲಿ ಹಲವು ರಸ್ತೆ ಅಭಿವೃದ್ಧಿ ಕಾರ್ಯಕ್ಕೂ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಲಾಯಿತು.

English summary
Coalition government giving laptops to Government college first and second year degree students. Government spending 3.09 crore rupees too buy laptops.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X