ಫೆಬ್ರವರಿಯಲ್ಲಿ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ

Written By: Ramesh
Subscribe to Oneindia Kannada

ಬೆಂಗಳೂರು, ನವೆಂಬರ್ . 18 : ರಾಜ್ಯ ಮಟ್ಟದ ಒಲಿಂಪಿಕ್ ಕ್ರೀಡಾಕೂಟವನ್ನು ಫೆಬ್ರವರಿ ಮೊದಲ ವಾರ ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕ್ರೀಡಾಕೂಟಕ್ಕೆ ಕೈಗೊಳ್ಳಬೇಕಾದ ಸಿದ್ಧತೆ, ಉದ್ಘಾಟನೆ ಮತ್ತು ಸಮಾರೋಪ ಸಮಾರಂಭಕ್ಕೆ ಗಣ್ಯರನ್ನು ಆಹ್ವಾನಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

The government has decided to hold the State-level Olympics in Hubballi-Dharwad

ಕ್ರೀಡಾಕೂಟ ಅಚ್ಚುಕಟ್ಟಾಗಿ ನಡೆಯಬೇಕು. ಭಾಗವಹಿಸುವ ಕ್ರೀಡಾಪಟುಗಳಿಗೆ ಅಗತ್ಯ ಸೌಕರ್ಯ ಕಲ್ಪಿಸುವಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚಿಸಿದರು.

ಕ್ರೀಡಾಕೂಟದ ಪೂರ್ವ ಸಿದ್ಧತೆಗೆ ರಚಿಸಲಾಗುವ ಸಮಿತಿಗಳ ಕುರಿತು ರಾಜ್ಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದರಾಜು ಅವರು ಸಭೆಗೆ ಮಾಹಿತಿ ನೀಡಿದರು.

ಇಂದನ ಸಚಿವ ಡಿ.ಕೆ. ಶಿವಕುಮಾರ್, ಕ್ರೀಡಾ ಮತ್ತು ಯುವಜನ ಖಾತೆ ಸಚಿವ ಪ್ರಮೋದ್ ಮಧ್ವರಾಜ್, ಧಾರವಾಡ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The government has decided to hold the State-level Olympics in Hubballi-Dharwad in February first week. The decision was taken by Chief Minister Siddaramaiah at a meeting in Bengaluru on Thursday. The meeting was attended by, among others, Karnataka Olympics Association president K. Govindaraju.
Please Wait while comments are loading...