Government Employees: ಈ ನಿಯಮಗಳ ಪಾಲಿಸುವುದು ರಾಜ್ಯ ಸರ್ಕಾರಿ ನೌಕರಿಗೆ ಕಡ್ಡಾಯ : ಸರ್ಕಾರ ಆದೇಶ
ಬೆಂಗಳೂರು, ಫೆಬ್ರವರಿ 03: ರಾಜ್ಯ ಸರ್ಕಾರದಿಂದ ಕರ್ನಾಟಕದ ಸರ್ಕಾರಿ ನೌಕರರಿಗೆ ಪ್ರಮುಖವಾದ ಮಾಹಿತಿಯೊಂದು ಇಲ್ಲಿದೆ. ಸರಕಾರಿ ಇಲಾಖೆಗಳಲ್ಲಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಚಾಟಿ ಬೀಸಲು ಮುಂದಾಗಿರುವ ರಾಜ್ಯ ಸರಕಾರ ಇದೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಹಾಜರಾತಿ ಜಾರಿಗೆ ಮುಂದಾಗಿದೆ. ಅಲ್ಲದೇ ಕೆಲವು ನಿಯಮಗಳನ್ನಸರ್ಕಾರಿ ನೌಕರರು ಪಾಲಿನೆ ಮಾಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ನೌಕರರು ಕಚೇರಿಯ ವೇಳೆಯಲ್ಲಿ ಈ ಮುಖ್ಯ ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆಗಿ ಆದೇಶ ಮಾಡಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನ ಮಾಡದಿರುವುದು,

ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಸೂಚನಗಳನ್ನು ಪಾಲಿಸಲು ಸೂಚಿಸಿದ್ದಾರೆ. ಈ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ಈ ನಿಯಮಗಳ ಪಾಲಿನೆ ಕಡ್ಡಾಯ
1. ನಿಯಮಗಳ ಪ್ರಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
3. ಕಛೇರಿ ಸಮಯದಲ್ಲಿ ನೌಕರರು ಹಾಗೂ ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ನಮೂದಿಸಿ, ಮೇಲಾಧಿಕಾರಿಗಳ ವಹಿಯಲ್ಲಿ ಸಕಾರಣವನ್ನು ಚಲನ-ವಲನ ಪೂರ್ವಾನುಮತಿಯನ್ನು ಪಡೆಯತಕ್ಕದ್ದು.
4. ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
5. ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
6. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
7. ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.
8. ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
9. ಇ-ಆಫೀಸ್ ಲಭ್ಯವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ವಯ ವಿಲೇವಾರಿ ಮಾಡುವುದು.












Click it and Unblock the Notifications