Karnataka: 5 ಪೊಲೀಸರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು, ಆಗಸ್ಟ್ 16: ಕರ್ನಾಟಕ ರಾಜ್ಯದಲ್ಲಿ ಪೊಲೀಸರ ವರ್ಗಾವಣೆ ಪ್ರಕ್ರಿಯೆ ಮುಂದುವರಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಶಾಸಕರ ಮಧ್ಯೆ ಈ ಹಿಂದೆ ಅಸಮಾಧಾನ ಇತ್ತು. ಈ ಮಧ್ಯೆ ಬುಧವಾರ ಆಗಸ್ಟ್ 16ರಂದು ರಾಜ್ಯ ಸರ್ಕಾರ ಒಟ್ಟು ಐವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಮೂವರಿಗೆ ಮಾತ್ರವೇ ಸ್ಥಳ ನಿಗದಿ ಮಾಡಲಾಗಿದೆ.
ವರ್ಗಾವಣೆಗೊಂಡ ಐವರು ಪೊಲೀಸ್ ಇನ್ಸಪೆಕ್ಟರ್‌ಗಳ ಪೈಕಿ ಬೆಂಗಳೂರು ನಗರ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಶ್ ಜಿ.ಎನ್. ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ತುಮಕೂರು ಜಿಲ್ಲೆಯ ಪಾವಗಡ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಜಯ್ ಸಾರಥಿ ಅವರು ಬೆಂಗಳೂರು ನಗರದ ಯಶವಂತಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅದೇ ರೀತಿ ಮಂಡ್ಯ ಜಿಲ್ಲೆ ಮದ್ದೂರು ವೃತ್ತದ ಮಜೋನ್ ಕುಮಾರ್ ಅವರನ್ನು ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.
ಬೆಂಗಳೂರು ನಗರದ ಕಾಮಾಕ್ಷಿಪಾಳ್ಯದ ಪೊಲೀಸ್ ಠಾಣೆ ಸಿಐಡಿಯಿಂದ ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುನೀತ್.ಬಿ.ಎನ್. ಅವರ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ಮಾಡಲಾಗಿದ್ದ ವರ್ಗಾವಣೆಗೆ ತಡೆ ನೀಡಲಾಗಿದೆ. ಇತ್ತ ಧನಂಜಯ ಅವರನ್ನು ದಾವಣಗೆರೆ ಜಿಲ್ಲೆಯಿಂದ ಬೆಂಗಳೂರು ನಗರ ಯಶವಂತಪುರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದ ಆದೇಶವನ್ನು ರದ್ದುಗೊಳಿಸಲಾಗಿದೆ. ಈ ಇಬ್ಬರು ಅಧಿಕಾರಿಗಳು ಸ್ಥಳ ನಿಯೋಜನೆ ಅಂತಿಮಗೊಳಿಸಿಲ್ಲ.

ಬೆಂಗಳೂರು ನಗರಕ್ಕೆ ಮಾಡಲಾದ ವರ್ಗಾವಣೆಯನ್ನು ರದ್ದುಪಡಿಸಲಾಗಿದೆ.
ಇತ್ತೀಚೆಗೆ 211 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದ್ದ ಸರ್ಕಾರ ಆ ದೇಶಕ್ಕೆ ಸ್ವತಃ ತಡೆ ನೀಡಿತ್ತು. ನಂತರ ಒಂದಷ್ಟು ಮಂದಿಗೆ ವರ್ಗಾವಣೆಗೆ ಕೃಪೆ ತೋರಿತ್ತು. ಶಾಕಸರ ಮಧ್ಯದಲ್ಲಿನ ಅಸಮಾಧಾನದಿಂದಲೇ ವರ್ಗಾವಣೆ ಆದೇಶಕ್ಕೆ ತಡೆ ನೀಡಲಾಗಿತ್ತು ಎಂದು ತಿಳಿದು ಬಂದಿದೆ.












Click it and Unblock the Notifications