ಕರ್ನಾಟಕಕ್ಕಿಲ್ಲ ಕರೋನಾ ಭಯ, ವದಂತಿ ಹಬ್ಬಿಸಿದ್ರೆ ಕಠಿಣ ಕ್ರಮ
ಬೆಂಗಳೂರು, ಮಾ. 04: ಕರ್ನಾಟಕಕ್ಕಿಲ್ಲ ಕರೋನಾ ಭಯ, ಕರೋನಾ ಕುರಿತು ಸುಳ್ಳು ವದಂತಿ ಹಬ್ಬಿಸಿದಲ್ಲಿ ಕಠಿಣ ಕ್ರಮ ಎಂದು ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ವದಂತಿಗಳನ್ನು ಸೃಷ್ಟಿಸಿ ಪ್ರಸಾರ ಮಾಡುವವರ ವಿರುದ್ಧ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಕ್ರಮಕೈಗೊಳ್ಳಲಾಗುವುದು ಎಂದು ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಎಚ್ಚರಿಕೆ ಕೊಟ್ಟಿದ್ದಾರೆ.
ಕೇರಳ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ವದಂತಿ ಹಬ್ಬಿಸುವರ ವಿರುದ್ಧ ಪೊಲೀಸರಲ್ಲಿ ಪ್ರಕರಣ ದಾಖಲು ಮಾಡಲಾಗುತ್ತಿದೆ. ಅದೇ ರೀತಿ ರಾಜ್ಯದಲ್ಲಿಯೂ ಪ್ರಕರಣ ದಾಖಲು ಮಾಡುತ್ತೇವೆ ಎಂದು ಪಾಂಡೆ ಎಚ್ಚರಿಕೆ ಕೊಟ್ಟಿದ್ದಾರೆ.

ಕೊರೋನಾ ವೈರಸ್ ತಡೆಯಲು ರಾಜ್ಯ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಸೋಂಕು ಪೀಡಿತ ಪ್ರದೇಶಗಳಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈ ವರೆಗೆ ಯಾರಿಗೂ ಕೊವಿಡ್-19 ವೈರಸ್ ದೃಢಪಟ್ಟಿಲ್ಲ.












Click it and Unblock the Notifications