ಗಿರೀಶ್ ಕಾರ್ನಾಡ್ ನಿಧನ: ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು, ಜೂನ್ 10: ಹಿರಿಯ ಸಾಹಿತಿ, ರಂಗಕರ್ಮಿ, ಜ್ಞಾನಪೀಠ ಪುರಸ್ಕೃತ ಗಿರೀಶ್ ಕಾರ್ನಾಡ್(81) ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ಸೋಮವಾರ ಸಾರ್ವತ್ರಿಕ ರಜೆ ಘೋಷಿಸಿದೆ.
ಹಾಗೆಯೇ ಜೂನ್ 10ರಿಂದ 12ರವರೆಗೆ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರೆಯನ್ನು ಆಚರಿಸಲಾಗುವುದು ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ, ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿದೆ.
ಗಿರೀಶ್ ಕಾರ್ನಾಡ್ ಅವರ ಅಂತ್ಯ ಸಂಸ್ಕಾರ ಬೈಯಪ್ಪನಹಳ್ಳಿಯ ಸ್ಮಶಾನದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ. ಸರ್ಕಾರಿ ಗೌರವ ಬೇಡ ಎಂದು ಕುಟುಂಬ ಮನವಿ ಮಾಡಿದರೂ ಕೂಡ ಗೌರವ ಕೊಡುವುದು ನಮ್ಮ ಕರ್ತವ್ಯ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮೂರು ಸಭೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದೂಡಿದ್ದಾರೆ, ಹಾಗೂ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಗಿರೀಶ್ ಕಾರ್ನಾಡ್ ಅವರು ಬಹು ಅಂಗ ವೈಫಲ್ಯದಿಂದ ಬಳಲುತ್ತಿದ್ದರು.

ಬೆಂಗಳೂರಿನ ಬೈಯಪ್ಪನಹಳ್ಳಿಯ ಕಲ್ಪಳ್ಳಿ ಸ್ಮಶಾನದಲ್ಲಿ ಇಂದು ಸಂಜೆ ಅಂತ್ಯಕ್ರಿಯೆಯನ್ನು ನಡೆಸಲು ತೀರ್ಮಾನಿಸಲಾಗಿದ್ದು, ಅಲ್ಲೇ ಅಂತಿಮ ದರ್ಶನಕ್ಕೂ ಅವಕಾಶ ನೀಡಲಾಗಿದೆ. ಸಮಯವನ್ನು ಇನ್ನೂ ಖಚಿತಪಡಿಸಿಲ್ಲ.
ಕಾರ್ನಾಡ್ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಯಾವುದೇ ವ್ಯವಸ್ಥೆಯನ್ನು ಏರ್ಪಡಿಸಲಾಗಿಲ್ಲ. ಕಾರ್ನಾಡ್ ಪತ್ನಿ ಸರಸ್ವತಿ ಅವರು, ಯಾರೂ ಅಪಾರ್ಟ್ ಮೆಂಟ್ ಬಳಿ ಬಾರದಂತೆ ಮನವಿ ಮಾಡಿದ್ದಾರೆ.

ಮನೆಯ ಬಳಿ ಸಾಕಷ್ಟು ಜನರು ಸೇರಿದರೆ ತೊಂದರೆ ಆಗುತ್ತದೆ ಎಂಬ ಉದ್ದೇಶದೊಂದಿಗೆ ಈ ಬೇಡಿಕೆ ಇಟ್ಟಿದ್ದಾರೆ. ಯಾವುದೇ ಧಾರ್ಮಿಕ ವಿಧಿವಿಧಾನಗಳಿಲ್ಲದೇ ಕಾರ್ನಾಡ್ ಅವರ ಅಂತ್ಯಕ್ರಿಯೆಯನ್ನು ನಡೆಸಲು ತೀರ್ಮಾನಿಸಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications