Get Updates
Get notified of breaking news, exclusive insights, and must-see stories!

Caste Census: ಸಿದ್ದರಾಮಯ್ಯ ಜಾತಿ ಗಣತಿ ವರದಿ ಸ್ವೀಕರಿಸದಿದ್ದರೆ ರಾಜ್ಯಾದ್ಯಂತ ಹೋರಾಟ: ಎಚ್ಚರಿಸಿದ್ಯಾರು

ಬೆಳಗಾವಿ, ಡಿಸೆಂಬರ್ 08: ಉತ್ತರ ಕರ್ನಾಟಕದ ಬಹುತೇಕ ರೈತರು ಕಬ್ಬು ಬೆಳೆಗಾರರಾಗಿದ್ದು, ಅವರಿಗೆ ಅನ್ಯಾಯವಾಗುತ್ತಿದೆ. ಕಬ್ಬಿನ ಕಾರ್ಖಾನೆಯ ಬಹುತೇಕ ಮಾಲೀಕರು ರಾಜಕಾರಣಿಗಳಾಗಿದ್ದು, ನೀವು ಈ ಕೂಡಲೇ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಸರಿಪಡಿಸಬೇಕು. ಸಿಎಂ ಸಿದ್ದರಾಮಯ್ಯನವರು ಜಾತಿ ಗಣತಿ ವರದಿಯನ್ನು ಸ್ವೀಕರಿಸಬೇಕು. ಸದನದಲ್ಲಿ ಚರ್ಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಶುಕ್ರವಾರ ಅಥಣಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಿರುವ ಭ್ರಷ್ಟ ರಾಜಕಾರಣಿಗಳಿಗಾಗಿ 'ಜನರು ರಾಜಕೀಯ ಬಿಟ್ಟು ತೊಲಗಿ', 'ಅಧಿಕಾರ ಬಿಟ್ಟು ತೊಲಗಿ' ಎಂದು ಹೇಳುವ ಪರಿಸ್ಥಿತಿ ಬಂದಿದೆ. ಎಎಪಿಯ ಯೋಜನೆಗಳನ್ನು ಕದ್ದು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ ಎಂದು ದೂರಿದರು.

Government If You Not Accept Caste Census, AAP Held Protests Across state: Mukhyamantri Chandru

ಚಳಿಗಾಲದ ಅಧಿವೇಶನ ವ್ಯರ್ಥವಾಗಿ ಸಾಗುತ್ತಿದೆ. ಬರಪೀಡಿತ ಪ್ರದೇಶಗಳಲ್ಲಿ ವೈಜ್ಞಾನಿಕ ಸಮೀಕ್ಷೆ ಆಗಬೇಕು. ಸರ್ವಪಕ್ಷಗಳ ನಿಯೋಗ ದೆಹಲಿಗೆ ತೆರಳಿ ತುರ್ತು ಪರಿಸ್ಥಿತಿಗೆ ಸ್ಪಂದಿಸುವಂತೆ ಕೇಂದ್ರಕ್ಕೆ ಒತ್ತಾಯಿಸಬೇಕು. ಬೆಳೆ ಹಾನಿ ಪರಿಹಾರ, ವಿಮೆಯ ತುರ್ತು ಪಾವತಿ, ಬರ ಪೀಡಿತ ಪ್ರದೇಶದ ರೈತರಿಗೆ 25 ಸಾವಿರ ರೂ. ನೀಡಬೇಕು, ಪಶು ಸಂಗೋಪನೆಯಲ್ಲಿ ತೊಡಗಿರುವ ರೈತರಿಗೆ ಪ್ರತಿ ಜಾನುವಾರಿಗೆ 5 ಸಾವಿರ ರೂ. ಪರಿಹಾರ ನೀಡಬೇಕು ಎಂದು ಬೇಡಿಕೆಗಳನ್ನು ಇಟ್ಟರು.

ಕಬ್ಬು ಬೆಳೆಗಾರರ ಸಂಕಷ್ಟ ಆಲಿಸಿ

ಕಬ್ಬಿಗೆ 3,800 ರೂ. ಬೆಂಬಲ ಬೆಲೆ ನೀಡಬೇಕು. ಕಾರ್ಖಾನೆಗಳಲ್ಲಿ ತೂಕದಲ್ಲಿ ಮೋಸವಾಗುತ್ತಿದೆ. ಹೀಗಾಗಿ ಸರ್ಕಾರದಿಂದಲೇ ವೇಬ್ರಿಡ್ಜ್ ಸ್ಥಾಪಿಸಬೇಕು. ರೈತರನ್ನು ಶೋಷಣೆ ಮಾಡಲಾಗುತ್ತಿದೆ. ಕಬ್ಬು ಬೆಳೆಗಾರರ ಸಂಕಷ್ಟವನ್ನು ಸದನದಲ್ಲಿ ಚರ್ಚಿಸಬೇಕು. ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು. ಎಲ್ಲ ಕ್ಷೇತ್ರದಲ್ಲೂ ಕನ್ನಡಕ್ಕೆ ಆದ್ಯತೆ ನೀಡುವಂತಾಗಬೇಕು ಎಂದರು.

ಬೆಲೆ ಏರಿಕೆ ನಿಯಂತ್ರಿಸಿ, ರೈತರ ಪ್ರತಿ ಕುಟುಂಬಕ್ಕೆ ಉಚಿತ ಪಡಿತರ ವಿತರಣೆ, ನರೇಗಾ ಅಥವಾ ಇತರ ಯೋಜನೆಗಳ್ನು ಹಮ್ಮಿಕೊಂಡು ಗ್ರಾಮೀಣ ಭಾಗದ ಜನರಿಗೆ ಆದಾಯ ವ್ಯವಸ್ಥೆ ಕಲ್ಪಿಸಬೇಕು. ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಂಡು, ಸರ್ಕಾರಿ ಆಸ್ಪತ್ರೆ ವ್ಯವಸ್ಥೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

Government If You Not Accept Caste Census, AAP Held Protests Across state: Mukhyamantri Chandru

ಜಾತಿಗಣತಿ ವರದಿ ಸ್ವೀಕರಿಸಬೇಕು: ಚರ್ಚಿಸಬೇಕು

ಜಾತಿ ಗಣತಿಗೆ 2013ರಲ್ಲಿ ಅನುದಾನ ಬಿಡುಗಡೆಯಾಯಿತು. 180 ಕೋಟಿ ರೂ. ವ್ಯಯಿಸಿ ಜಾತಿಗಣತಿಯನ್ನು ಮುಗಿಸಲಾಯಿತು. ಆದರೆ, ಸಿದ್ದರಾಮಯ್ಯನವರೇ ವರದಿಯನ್ನು ಒಪ್ಪಿಕೊಳ್ಳಲಿಲ್ಲ. ನಂತರ ಬಂದ ಬಿಜೆಪಿ ಸರ್ಕಾರ, ಕುಮಾರಸ್ವಾಮಿಯವರು ವರದಿಯನ್ನು ಒಪ್ಪಿಕೊಳ್ಳಲಿಲ್ಲ. ಈಗ ಸಿದ್ದರಾಮಯ್ಯ ವರದಿಯನ್ನು ಸ್ವೀಕರಿಸಲು ಮತ್ತೆ ಹಿಂದೇಟು ಹಾಕುತ್ತಿದ್ದಾರೆ.

ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ. ಜಾತಿಗಣತಿ ರಾಷ್ಟ್ರದಲ್ಲೇ ಆಗಬೇಕು. ಹೀಗಾಗಿ ಸಿದ್ದರಾಮಯ್ಯ ಅವರು ವರದಿಯನ್ನು ಸ್ವೀಕರಿಸಬೇಕು, ನಂತರ ಸದನದಲ್ಲಿ ಚರ್ಚೆಯಾಗಬೇಕು. ಮುಂದಿನ 15 ರಿಂದ 20 ದಿನಗಳಲ್ಲಿ ಜಾತಿಗಣತಿ ವರದಿಯನ್ನು ಸ್ವೀಕರಿಸದಿದ್ದರೆ ಎಎಪಿ ರಾಜ್ಯದಾದ್ಯಂತ ಹೋರಾಟ ನಡೆಸುತ್ತಿದೆ ಎಂದರು.

ದೇಶ ಒಂದು-ಧರ್ಮ ಒಂದು: ನಮ್ಮ ಆಯ್ಕೆ ತಪ್ಪು

ದೇಶವೊಂದು, ವ್ಯಕ್ತಿವೊಂದು, ಧರ್ಮವೊಂದು ಎನ್ನುವವರನ್ನು ಆಯ್ಕೆ ಮಾಡಿರುವುದು ನಮ್ಮದೇ ತಪ್ಪು. ದೆಹಲಿಯಲ್ಲಿ 8 ವರ್ಷಗಳಿಂದ ಅರವಿಂದ ಕೇಜ್ರಿವಾಲ್ ಭ್ರಷ್ಟಾಚಾರ ರಹಿತ ಸರ್ಕಾರ ನಡೆಸುತ್ತಿದ್ದಾರೆ. ಅಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆ, ಶಿಕ್ಷಣವನ್ನು ನೀಡಲಾಗುತ್ತಿದೆ. ಆದರೆ, ನಮ್ಮ ರಾಜ್ಯದಲ್ಲಿ ಆ ಕೆಲಸ ಆಗುತ್ತಿಲ್ಲ.

ಬಹುತೇಕ ಸಚಿವರು, ಶಾಸಕರೇ ಶಾಲೆಗಳನ್ನು ನಡೆಸುತ್ತಿದ್ದು, ಸರ್ಕಾರಿ ಶಾಲೆಗಳ್ನು ಮುಚ್ಚುತ್ತಿದ್ದಾರೆ. ಕುಟುಂಬ ರಾಜಕಾರಣವನ್ನು ನಿರ್ಮೂಲನೆ ಮಾಡಬೇಕೆಂದು ಪ್ರಧಾನಿ ಹೇಳಿದರು. ಆದರೆ, ಯಡಿಯೂರಪ್ಪ ಕುಟುಂಬದಲ್ಲಿ ಮೂವರು ಅಧಿಕಾರದಲ್ಲಿದ್ದಾರೆ. ಜೆಡಿಎಸ್ ಸ್ಥಿತಿಯು ಇದೇ ಆಗಿದೆ. ಕಾಂಗ್ರೆಸ್‌ನಲ್ಲೂ ಕುಟುಂಬ ರಾಜಕಾರಣವೇ ನಡೆಯುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಉಪಾಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ ಮಾತನಾಡಿ, ಕರ್ನಾಟಕದಲ್ಲೇ ಮೊಟ್ಟ ಮೊದಲ ಪುರಸಭೆಯಾದ ಅಥಣಿ ಪುರಸಭೆ ಇನ್ನೂ ಪುರಸಭೆಯಾಗಿಯೇ ಉಳಿದಿದೆ. ಇದಕ್ಕೆ ಲಕ್ಷ್ಮಣ ಸವದಿ ಉತ್ತರ ನೀಡಬೇಕು. 200 ಕೋಟಿ ರೂ. ಹೆಸ್ಕಾಂ ಹಗರಣ ಬೆಳಕಿಗೆ ಬಂತು. ಈ ಹಗರಣದಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಆದರೆ, 21 ಅಧಿಕಾರಿಗಳಿಗೆ ಪ್ರಮೋಷನ್ ನೀಡಿ ಉನ್ನತ ಹುದ್ದೆ ನೀಡಲಾಗಿದೆ ಎಂದು ಆರೋಪಿಸಿದ ಅವರು, ಅಥಣಿಯನ್ನು ಜಿಲ್ಲೆಯನ್ನಾಗಿ ಮಾಡುವಲ್ಲಿ ಪಕ್ಷಾತೀತವಾಗಿ ನಾವೆಲ್ಲರೂ ಕೈಜೋಡಿಸಬೇಕಿದೆ ಎಂದು ಕರೆ ನೀಡಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿಗಳಾದ ಅಫಾನ್ ಮಾಸ್ಟರ್, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಶಂಕರ್ ಹೆಗಡೆ, ರಾಜ್ಯ ಹಿಂದುಳಿದ ವರ್ಗದ ಘಟಕದ ಅಧ್ಯಕ್ಷರಾದ ನವೀನ್ ಚಂದ್ರ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+