ಕರ್ನಾಟಕ ಸರ್ಕಾರ: ಜಿಲ್ಲೆಗಳಿಗೆ ಕೋವಿಡ್, ಚಿಕಿತ್ಸಾ ಸೂಚನೆಗಳು
ಬೆಂಗಳೂರು, ಡಿಸೆಂಬರ್ 29: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್ ಸೋಂಕು ಉಲ್ಬಣಗೊಂಡಿದೆ. ಈ ಮಧ್ಯೆ ರಾಜ್ಯದ ಜನರು ಹೊಸ ವರ್ಷಚರಣೆಗೆ ಸಿದ್ದರಾಗಿದ್ದಾರೆ. ಇದೆಲ್ಲ ಗಮನದಲ್ಲಿಟ್ಟುಕೊಂಡು ಕೋವಿಡ್ ಏರಿಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದೆ.
ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇತ್ತೀಚೆಗೆ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆ ಬಳಿಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಚಿಕಿತ್ಸೆಗೆ ತ್ವರಿತ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಕೊರೊನಾ ವಾರ್ಡ್ ಹಾಗೂ ಐಸಿಯು ಬೆಡ್‌ಗಳನ್ನು ಮೀಸಲಿಡಬೇಕು ಎಂದು ಸೂಚಿಸಿ ಸುತ್ತೋಲೆ ಹೊರಡಿಸಿದ್ದರು.

ಹೊಸ ವರ್ಷಾಚರಣೆ ವೇಳೆ ಕೊರೊನಾ ಸೋಂಕು ಹೆಚ್ಚಾಗಬಹುದು. ಆದ್ದರಿಂದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣ ಎದುರಿಸಲು, ಸೂಕ್ತ ಚಿಕಿತ್ಸೆ ನೀಡಲು ಸಜ್ಜಾಗಬೇಕು. ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ ಮಟ್ಟಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್ ಮೀಸಲಿಡಬೇಕು.
ಐಸಿಯು ಬೆಡ್ ಮೀಸಲಿಡಲು ಸೂಚನೆ
ಜಿಲ್ಲೆಗಳ ಆಸ್ಪತ್ರೆಯಲ್ಲಿ ಕೆಲ ಐಸಿಯು ಬೆಡ್‌ಗಳನ್ನು ಮೀಸಲಿಡುವುದು ಸೇರಿದಂತೆ ಹಲವು ಸೂಚನೆಗಳನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಇಲಾಖೆ ಆಯುಕ್ತ ಡಿ.ರಂದೀಪ್ ಅವರು ನಿರ್ದೇಶಿಸಿದ್ದಾರೆ.
ಇನ್ನೂ ವ್ಯಕ್ತಿಯಲ್ಲಿ ಸೋಂಕು ಕಂಡು ಬಂದರೆ ಅವರ ಪ್ರಾಥಮಿಕ ಸಂಪರ್ಕಿತರನ್ನು ತಪಾಸಣೆಗೆ ಒಳಪಡಿಸಬೇಕು. ರೋಗಿಯು ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಸಹ ಟೆಲಿ ಐಸಿಯು ಮೂಲಕ ಕೇಂದ್ರ ಕಚೇರಿಯಿಂದ ನಿಗಾ ವಹಿಸಬೇಕು. ಜಿಲ್ಲಾ ಮಟ್ಟದಲ್ಲಿ ಕೊರೊನಾ ಸಾವಿನ ಕುರಿತು ಆಗಿಂದಾಗ್ಗೆ ಮಾಹಿತಿ, ವರದಿ ನೀಡುತ್ತಿರಬೇಕು.

ಸೋಕು ದೃಢಪಡದಿದ್ದಲ್ಲಿ ಅವರಿಗೆ ಸಿಟಿ ಸ್ಕ್ಯಾನಿಂಗ್ ಮಾಡದೇ ಸ್ಕ್ಯಾನಿಂಗ್ ಕೇಂದ್ರಗಳಿಗೆ ಸೂಚಿಸಬೇಕು. ಗುಂಪು ಗೂಡುವುದು, ಮಾಸ್ಕ್ ಧಾರಣೆ ಮಾಡಬೆಕು. ಈ ಬಗ್ಗೆ ತಿಳಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇನ್ನೂ ಜ್ವರ, ಇನ್ನಿತರ ಗುಣಲಕ್ಷಣ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಫ್ಲೋಶಾಟ್ (ಜ್ವರದ ಲಸಿಕೆ) ಹಾಕಿಸಕೊಳ್ಳುವುದು, ಹೇಗೆ ಯಾರು ಲಸಿಕೆ ಪಡೆಯಬೇಕು ಎಂಬುದ ಕುರಿತು ಸರ್ಕಾರ ಪ್ರತ್ಯೇಕ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಗುರುವಾರ 158 ಹೊಸ ಕೇಸ್ ಪತ್ತೆ
ಕರ್ನಾಟಕದಲ್ಲಿ ಗುರುವಾರ 158 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿ ಆಗಿವೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡಾ 1.89 ದಾಖಲಾಗಿದೆ. ಕಳೆದ ಒಂದು ದಿನದಲ್ಲಿ ರಾಜ್ಯದಲ್ಲಿ ಒಟ್ಟು 8350 ಮಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಗುರುವಾರ ಪ್ರಕರಣ ಹೆಚ್ಚಾದರೂ ಸಹಿತ ಪಾಸಿಟಿವಿಟಿ ದರ ಕಡಿಮೆ ಇದೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 568ಕ್ಕೆ ಹೆಚ್ಚಳವಾಗಿದೆ. ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಬಹುತೇಕವು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕಂಡು ಬಂದಿವೆ.












Click it and Unblock the Notifications