ಬಿಬಿಎಂಪಿ ಚುನಾವಣೆ ಸರ್ಕಾರ ಗೀನ್ ಸಿಗ್ನಲ್: ಬಿಗ್ ಅಪ್‌ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಮಾರ್ಚ್ 15: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ್ರೆ ಬೆಂಗಳೂರಿನ ಜನರ ಸಮಸ್ಯೆ ದೂರ ಮಾಡಲು ಬಿಬಿಎಂಪಿ ಚುನಾವಣೆ ಮಾಡ್ತಿವಿ ಅಂತ ಭರವಸೆ ನೀಡಲಾಗಿತ್ತು. ಅಲ್ಲದೇ ಪ್ರಣಾಳಿಕೆ ಕೂಡಾ ನೀಡಿದ್ರು. ಈಗ ಆ ಭರವಸೆ ಇಡೋರಿಸಕ್ಕೆ ಕಾಂಗ್ರೆಸ್ ಮುಂದಾಗಿದ್ದು. ಬಿಬಿಎಂಪಿ ಚುನಾವಣೆಗೆ ಮುನ್ಸೂಚನೆ ಸಿಕ್ಕಿದೆ. ಬಿಬಿಎಂಪಿ ಚುನಾವಣೆ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಕೆಪಿಸಿಸಿ ಕಚೇರಿ ಬಳಿ ಶನಿವಾರ ಮಾಧ್ಯಮದವರ ಜೊತೆಗೆ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಬಿಬಿಎಂಪಿ ಚುನಾವಣೆಗೆ ಸರ್ಕಾರ ಖಂಡಿತವಾಗಿ ತಯಾರಿದೆ. ಎಷ್ಟು ದಿನ ನಾವು ತಪ್ಪಿಸಿಕೊಂಡು ಇರಲು ಸಾಧ್ಯ ಎಂದು ಹೇಳಿದ ಅವರು, ಶನಿವಾರ (ಇಂದು) ಬೆಂಗಳೂರು ಮಹಾನಗರ ಪಾಲಿಕೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳ ಸಭೆಯನ್ನು ಕರೆಯಲಾಗಿದೆ. ನಂತರ ಎಲ್ಲಾ ಪಕ್ಷದವರನ್ನು ಸಭೆಗೆ ಕರೆಯಲಾಗುವುದು. ಅವರಲ್ಲಿಯೂ ಕೆಲವೊಬ್ಬರು ಅನಧಿಕೃತವಾಗಿ ಬಿಬಿಎಂಪಿ ಚುನಾವಣೆ ಕುರಿತಾಗಿ ಸಲಹೆ ನೀಡಿದ್ದಾರೆ. ಈಗ ಅಧಿಕೃತವಾಗಿ ಸಲಹೆಗಳನ್ನು ಪಡೆಯಲಾಗುವುದು ಎಂದು ಹೇಳಿದರು.

ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ, ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ ಮಾಡಿದ್ದೆವು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಮಾಡಿರುವ ತೀರ್ಮಾನದ ಬಗ್ಗೆ ಕೇಳಿದಾಗ, "ಕೇವಲ 2 ಕೋಟಿ ಮೊತ್ತಕ್ಕೆ ಮಾತ್ರ ಒಪ್ಪಿಗೆ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ನಾವು ಬೇರೆ ಯಾರ ಹಕ್ಕನ್ನು ಇಲ್ಲಿ ಕಸಿದುಕೊಳ್ಳುತ್ತಿಲ್ಲ ಅವರಿಗೂ ನಾವು ಬದುಕು ಕೊಡಬೇಕಲ್ಲವೇ? ಎಂದು ಹೇಳಿದರು.
ಕ್ಷೇತ್ರ ಪುನರ್ ವಿಂಗಡಣೆ ವಿರೋಧಿ ಸಭೆಯಲ್ಲಿ ಭಾಗವಹಿಸುತ್ತಿರುವಿರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ತಮಿಳುನಾಡಿನ ಮುಖ್ಯಮಂತ್ರಿಗಳು ಆಹ್ವಾನ ನೀಡಿದ್ದರು. ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ಮಾರ್ಚ್ 22 ರಂದು ತಮಿಳುನಾಡಿನಲ್ಲಿ ನಡೆಯುವ ಸಭೆಗೆ ಭಾಗವಹಿಸಿ ಎಂದು ನಿರ್ದೇಶನ ನೀಡಿದ್ದಾರೆ.
ಮುಖ್ಯಮಂತ್ರಿಗಳಿಗೆ ಮೊಣಕಾಲಿನ ನೋವು ಇರುವ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ಅವರು ಬರುತ್ತಿಲ್ಲ. ಪಕ್ಷ ಹಾಗೂ ಸರ್ಕಾರದ ವತಿಯಿಂದ ನಾನು ಸಭೆಯಲ್ಲಿ ಭಾಗವಹಿಸುವೆ. ಪಕ್ಷದ ನಿಲುವನ್ನು ಹೈಕಮಾಂಡ್ ಜೊತೆ ಚರ್ಚಿಸಿ ತಿಳಿಸುವೆ ಎಂದರು. ದೇಶದಲ್ಲಿ ದೊಡ್ಡ ಪ್ರಮಾಣದ ಚರ್ಚೆ ನಡೆಯುತ್ತಿದೆ. ನಾವುಗಳು ನಮ್ಮ ಹಕ್ಕುಗಳನ್ನು ಹಾಗೂ ಸಂಖ್ಯೆಗಳನ್ನು ಬಿಟ್ಟುಕೊಡಲು ತಯಾರಿಲ್ಲ. ಪಕ್ಷದ ನಿಲುವಿನ ಬಗ್ಗೆ ಬರುವ 18 ರಂದು ಚರ್ಚೆ ನಡೆಸಿ ನಿಲುವನ್ನು ತಿಳಿಸುತ್ತೇವೆ ಎಂದು ಹೇಳಿದರು.
ಮಹಿಳೆಯರಿಗಾಗಿ ನಮ್ಮ ಪಕ್ಷ ಇಷ್ಟು ಕಾರ್ಯಕ್ರಮ ನೀಡಿದೆ. ಈಗ ನೀವೆಲ್ಲರೂ ಸೇರಿ ನಮ್ಮ ಪಕ್ಷಕ್ಕೆ ಏನು ಮಾಡುತ್ತೀರಿ ಎಂದು ಅಧ್ಯಕ್ಷನಾಗಿ ಕೇಳುತ್ತೇನೆ. ನೀವು ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ಪಕ್ಷಕ್ಕೆ ಏನು ಕೊಡುಗೆ ನೀಡುತ್ತೀರಿ ಎಂಬುದು ಮುಖ್ಯ. ಸೌಮ್ಯ ರೆಡ್ಡಿ ಸೇರಿದಂತೆ ನಾನು ಎಲ್ಲರಿಗೂ ಹೇಳುವುದು ಒಂದೇ. ರಾಣಿ ಸತೀಶ್ ಅವರ ಕಾಲದಿಂದ ಇಲ್ಲಿಯವರೆಗೂ ಮಹಿಳಾ ಕಾಂಗ್ರೆಸ್ ಬಗ್ಗೆ ನನಗೆ ತೃಪ್ತಿ ಇಲ್ಲ. ನೀವು ನಿಮ್ಮ ಒತ್ತಡಗಳ ಮಧ್ಯೆ ಪಕ್ಷ ಸಂಘಟನೆಗೆ ನನ್ನ ನಿರೀಕ್ಷೆ ಮಟ್ಟದಲ್ಲಿ ಕೆಲಸ ಮಾಡಲು ಆಗಿಲ್ಲ. ಇದಕ್ಕಾಗಿ ನನಗೆ ಬೇಸರವಿಲ್ಲ. ಇಂದು ಕೂಡ ಅವಕಾಶಗಳು ನಿಮ್ಮ ಮನೆ ಬಾಗಿಲ ಮುಂದಿದೆ ಎಂದರು.












Click it and Unblock the Notifications