ʼಬಿಬಿಎಂಪಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು 'ನೀಟ್'ನಂತಹ ಉನ್ನತ ಪರೀಕ್ಷೆಗಳಲ್ಲಿ ಸಾಧನೆ ತೋರುವುದು ಯಾವಾಗ?ʼ
ಬೆಂಗಳೂರು: ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಓದಿದ 1,414 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಸ್ಪೆಷಲೈಸ್ಡ್ ಎಕ್ಸೆಲೆನ್ಸ್ (ಎಸ್ಒಎಸ್ಇ) ಶಾಲೆಯಲ್ಲಿ ವಿದ್ಯಾರ್ಹತೆ ಪಡೆದ 255 ಅಭ್ಯರ್ಥಿಗಳ ಪೈಕಿ 243 ಅಭ್ಯರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 95.2 ರಷ್ಟು ಸಾಧನೆ ಮಾಡಿದ್ದಾರೆ ಎಂದು ಎಎಪಿ ಮುಖಂಡ ಜಗದೀಶ್ ವಿ. ಸದಂ ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸರ್ಕಾರ ದೆಹಲಿಯ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶಿಕ್ಷಣ ಸಂಸ್ಥೆಗಳನ್ನಾಗಿ ಮಾರ್ಪಡಿಸಿದ್ದರ ಫಲವಿದು. ಇದೊಂದು ಮಹತ್ವದ ಶಿಕ್ಷಣ ಕ್ರಾಂತಿಯಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಸಂತಸ ವ್ಯಕ್ತ ಪಡಿಸಿದ್ದಾರೆ.

ನೀಟ್ ಫಲಿತಾಂಶದ ಹಿನ್ನೆಲೆ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜಗದೀಶ್ ಸದಂ, 2020ರಲ್ಲಿ ದೆಹಲಿ ಸರ್ಕಾರಿ ಶಾಲೆಗಳಲ್ಲಿ ಓದಿದ 569 ಅಭ್ಯರ್ಥಿಗಳಷ್ಟೇ ನೀಟ್ ಅರ್ಹತೆ ಪಡೆದಿದ್ದರು. ಕೇವಲ ನಾಲ್ಕು ವರ್ಷಗಳಲ್ಲಿ ಈ ಸಂಖ್ಯೆ 1414ಕ್ಕೆ ಏರಿಕೆಯಾಗಿದೆ. ಕೇಜ್ರಿವಾಲ್ ಅವರು ಬಡವರ ಮಕ್ಕಳೂ ಜೆಇಇ, ನೀಟ್‌ನಂತಹ ಉನ್ನತ ಪರೀಕ್ಷೆಗಳನ್ನು ಎದುರಿಸುವ ಮೂಲಕ ವೈದ್ಯಕೀಯ, ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡುವಂತಾಗಬೇಕು ಎಂಬ ಕಾರಣಕ್ಕೆ ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡುವಂತೆ ಸರ್ಕಾರಿ ಶಾಲೆಗಳನ್ನು ಬೆಳೆಸಿದ್ದಾರೆ.
ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿದ್ದರಿಂದ ವರ್ಷದಿಂದ ವರ್ಷಕ್ಕೆ ನೀಟ್ ಉತ್ತೀರ್ಣರಾದ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಪಟ್ಟಿ ಬೆಳೆಯುತ್ತ ಹೋಗುತ್ತಿದೆ. ಕಳೆದ ವರ್ಷ 1,361 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಇದು ದೇಶಕ್ಕೆ ಮಾದರಿಯಾಗಿದ್ದು, ಈ ಸಾಧನೆಯನ್ನು ಮನಗಂಡು ಬಿಬಿಎಂಪಿ ಶಾಲೆಗಳನ್ನು ಅತ್ಯುನ್ನತ ಶಿಕ್ಷಣ ಸಂಸ್ಥೆಗಳನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಸರ್ಕಾರಿ ಶಾಲಾ- ಕಾಲೇಜುಗಳು ಹಾಗೂ ಬಿಬಿಎಂಪಿ ಶಾಲೆಯ ಮಕ್ಕಳು ಎಸ್ಎಸ್‌ಎಲ್‌ಸಿ ಪರೀಕ್ಷೆಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಕನ್ನಡ ವಿಷಯದಲ್ಲೇ ಫೇಲ್ ಆಗುತ್ತಿದ್ದಾರೆ. ಆದರೂ ಎಚ್ಚೆತ್ತುಕ್ಕೊಳ್ಳದ ರಾಜ್ಯ ಸರ್ಕಾರ ಈ ಶಾಲೆಗಳಿಗೆ ಸೆಕ್ಯೂರಿಟಿ ಏಜೆನ್ಸಿಗಳ ಮೂಲಕ ಶಿಕ್ಷಕರನ್ನು ನೇಮಿಸಲು ಮುಂದಾಗುತ್ತಿದೆ.
ಮಕ್ಕಳ ಶೈಕ್ಷಣಿಕ ಪ್ರವಾಸ, ವಾರ್ಷಿಕೋತ್ಸವ, ಪರೀಕ್ಷೆ ವೆಚ್ಚಕ್ಕೆ ಸರ್ಕಾರ ನೀಡುವ ಧನಸಹಾಯವನ್ನು ಲೂಟಿ ಮಾಡಲಾಗುತ್ತಿದೆ. ಈಗಾಗಲೇ ತರಗತಿಗಳು ಆರಂಭವಾಗಿವೆ. ಆದರೆ ಶಿಕ್ಷಕರ ನೇಮಕಾತಿಯಾಗಿಲ್ಲ. ಇಂತಹ ಅಧ್ವಾನಗಳ ನಡುವೆ ಸರ್ಕಾರಿ ಶಾಲೆ ಮಕ್ಕಳು ಭವಿಷ್ಯದಲ್ಲಿ ಸಾಧನೆ ತೋರಲು ಹೇಗೆ ಸಾಧ್ಯ? ಈ ಬಾರಿ ಬಿಬಿಎಂಪಿ ಶಾಲೆಗಳಿಗೆ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಯಲ್ಲೂ ಭಾರಿ ಇಳಿಕೆಯಾಗಿದೆ.
ಒಂದು ಕಡೆ ರಾಜ್ಯದ ಶಾಸಕರೊೊಬ್ಬರು ಪ್ರತಿಷ್ಠಿತ ನೀಟ್ ಸಂಸ್ಥೆಯನ್ನು ಸ್ಥಾಪಿಸಿ ವರ್ಷಪೂರ್ತಿ ನೂರಾರು ಕೋಟಿ ಆದಾಯಗಳಿಸುತ್ತಿದ್ದರೆ ಮತ್ತೊಂದು ಕಡೆ ಖಾಸಗಿ ಸಂಸ್ಥೆಗಳ ಲಾಬಿಗೆ ಒಳಗಾಗಿರುವ ರಾಜ್ಯ ಸರ್ಕಾರ ಕಳೆಪೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳನ್ನು ವ್ಯವಸ್ಥಿತವಾಗಿ ಮುಗಿಸುತ್ತಿದೆ. ಬಡವರ ಮಕ್ಕಳ ಭವಿಷ್ಯವನ್ನ ಕಸಿದುಕೊಳ್ಳುತ್ತಿದೆ ಎಂದು ಜಗದೀಶ್ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದರು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.











Click it and Unblock the Notifications