• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದಲ್ಲಿ ರಂಜಾನ್‌ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

|

ಕರ್ನಾಟಕ, ಏಪ್ರಿಲ್‌ 13: ಕರ್ನಾಟಕದಲ್ಲಿ ರಂಜಾನ್‌ ಆಚರಣೆಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭಗಳು ಹಾಗೂ ಹಬ್ಬಗಳ ಆಚರಣೆಗೆ ಸರ್ಕಾರ ನಿಯಮಗಳನ್ನು ರೂಪಿಸಿದೆ.

ಇಫ್ತಾರ್‌ ಕೂಟ ನಡೆಸುವಂತಿಲ್ಲ, ಸಮಾಜ್‌ಗೂ ಮುನ್ನ ಐದು ನಿಮಿಷ ಮಸೀದಿ ತೆರೆಯುವುದು ಸೇರಿದಂತೆ ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದೆ.

ಅಗತ್ಯವಿದ್ದರೆ ಜುಮ್ಮಾ ನಮಾಜ್‌ನ ಸಮಯದಲ್ಲಿ ಮೂರು ಪಾಳಿ ಮಾಡಿಕೊಳ್ಳಬಹುದಾಗಿದ್ದು, ಮಧ್ಯಾಹ್ನ 12.45-1.15, 1.30-2 ಹಾಗೂ 2.30-3 ಗಂಟೆಯವರೆಗೆ ಒಟ್ಟು ಮೂರು ಪಾಳಿಯಲ್ಲಿ ಜುಮ್ಮಾ ನಮಾಜ್‌ ಮಾಡಬಹುದು.


ಉಪವಾಸ ಬಿಡುವಾಗ ಸಹ ಮಸೀದಿಗೆ ಆಹಾರ ವಸ್ತು ತರಬಾರದು, ಉಪವಾಸವನ್ನು ಮನೆಯಲ್ಲಿಯೇ ಬಿಡಬೇಕು. ಸಾಮೂಹಿಕ ಪ್ರಾರ್ಥನೆ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ಮಸೀದಿಗೆ ಬರುವಾಗ ಸರತಿ ಅನುಸರಿಸಬೇಕು, ಮಾಸ್ಕ್‌ ಕಡ್ಡಾಯ, ಪ್ರತಿ ಹೊತ್ತಿನ ನಮಾಜ್‌ ಬಳಿಕ ಸ್ಯಾನಿಟೈಸರ್‌ ಅಳವಡಿಕೆ ಕಡ್ಡಾಯವಾಗಿದೆ.ಅಲ್ಲದೆ 60 ವರ್ಷ ಮೇಲ್ಪಟ್ಟವರು, ಮಕ್ಕಳು ಮಸೀದಿಗೆ ಬರುವಂತಿಲ್ಲ ಎಂದು ಮಾಗಸೂಚಿಯಲ್ಲಿ ತಿಳಿಸಲಾಗಿದೆ.

ಇಫ್ತಾರ್‌ಗಳನ್ನು ಮನೆಯಲ್ಲೇ ಮಾಡಿಕೊಳ್ಳಬೇಕು, ಸಾಮಾಜಿಕ ಅಂತರ, ಮಾಸ್ಕ್‌ ಸೇರಿದಂತೆ ಕೊರೊನಾ ನಿಯಮಗಳನ್ನು ಪಾಲಿಸಿ ಮಸೀದಿಗಳಲ್ಲಿ ನಮಾಜ್‌ ಮಾಡಬಹುದಾಗಿದೆ. ಆದರೆ ಪ್ರಾರ್ಥನೆ ಕೂಗುವ ಐದು ನಿಮಿಷಗಳ ಮೊದಲು ಮಸೀದಿ ತೆರೆಯಬಬೇಕು.

ಅಲ್ಲದೆ ನಮಾಜ್‌ ಮಾಡಲು ಸ್ವಂತ ಚಾದರ್‌ ತರಬೇಕು, ಅಲ್ಲದೆ ನಮಾಜ್‌ ವೇಳೆ ಕನಿಷ್ಠ ಎರಡು ಮೀಟರ್‌ ಅಂತರ ಕಾಯ್ದುಕೊಳ್ಳಬೇಕು. ಎರಡು ಮೀಟರ್‌ ಅಂತರಕ್ಕೆ ಮಸೀದಿಗಳಲ್ಲಿ ಮಾರ್ಕಿಂಗ್‌ ಮಾಡಬೇಕು ಎಂದು ತಿಳಿಸಲಾಗಿದೆ.

English summary
The government of Karnataka has issued guidelines for the observance of rituals in mosques in the month of Ramzan in view of COVID-19 pandemic
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X