Rohini Sindhuri vs D Roopa : ರೋಹಿಣಿ ಸಿಂಧೂರಿ, ರೂಪಾಗೆ ಸರ್ಕಾರದಿಂದ ನೋಟಿಸ್
ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು, ಫೆಬ್ರವರಿ 21; ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿಗೆ ತಡೆ ಹಾಕಲು ಮುಂದಾಗಿದೆ. ಇಬ್ಬರೂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ ಇಬ್ಬರೂ ಅಧಿಕಾರಿಗಳಿಗೆ ಸೇವಾ ನ್ಯೂನ್ಯತೆ ಮಾಡಬಾರದು ಎಂದು ನೋಟಿಸ್ ಜಾರಿ ಮಾಡಲಾಗಿದೆ. ಮಾಧ್ಯಮಗಳ ಮುಂದೆ ಹೋಗಿ ಆರೋಪ ಪ್ರತ್ಯಾರೋಪ ಮಾಡಿರುವುದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಲಾಗಿದೆ.
ನೋಟಿಸ್‌ನಲ್ಲಿ ಏನಿದೆ?; ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದಿ ಐಪಿಎಸ್, ಐಎಎಸ್ ಅಧಿಕಾರಿಗೆ ನೋಟಿಸ್ ನೀಡಲಾಗಿದೆ. ಇನ್ನೊಬ್ಬ ಸರ್ಕಾರಿ ಅಧಿಕಾರಿಯ ವಿರುದ್ಧ ಆರೋಪ ಮಾಡಲು ಮಾಧ್ಯಮಗಳನ್ನು ಬಳಕೆ ಮಾಡಿದ್ದೀರಿ.
ನಿಮ್ಮ ನಡವಳಿಕೆಯಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ನಿಮ್ಮ ವರ್ತನೆ ಅಖಿಲ ಭಾರತೀಯ ಸೇವೆಗಳ ಉಲ್ಲಂಘನೆಯಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ವಿಚಾರದ ಬಗ್ಗೆ ಸೋಮವಾರ ಸಂಜೆ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿತ್ತು. ಅಧಿಕಾರಿಗಳ ವರ್ತನೆ ಬಗ್ಗೆ ಸಚಿವರು ಆಕ್ಷೇಪ ಎತ್ತಿದ್ದರು.

ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ್ದ ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ಅಧಿಕಾರಿಗಳ ವರ್ತನೆ ಗಮನಿಸುತ್ತಿದ್ದೇವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.
ಸೋಮವಾರ ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ್ದರು. ತಮ್ಮ ತಮ್ಮ ದೂರುಗಳನ್ನು ದಾಖಲು ಮಾಡಿದ್ದರು.
ಅಧಿಕಾರಿಗಳ ಕಿತ್ತಾಟದ ಕುರಿತು ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಈಗಾಗಲೇ ಗಲಾಟೆ ಪ್ರಕರಣದ ಬಗ್ಗೆ ಗಮನ ಹರಿಸಿದ್ದಾರೆ. ಇಬ್ಬರನ್ನೂ ಕರೆದು ಮಾತನಾಡಿದ್ದಾರೆ. ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ಶಿಸ್ತು ಕಾಪಾಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ" ಎಂದು ತಿಳಿಸಿದ್ದರು.












Click it and Unblock the Notifications