ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಸರ್ಕಾರಿ ಉದ್ಯೋಗ
ಇತ್ತೀಚೆಗೆ ಭೀಕರ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದರು. ಇವರ ನಿಧನಕ್ಕೆ ಇಡೀ ಕರ್ನಾಟಕವೇ ಕಂಬನಿ ಮಿಡಿದಿತ್ತು. ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಜನಪ್ರಿಯರಾಗಿದ್ದ ಮಹಾಂತೇಶ ಅವರ ನಿಧನದ ಹಿನ್ನೆಲೆ, ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದರು. ಕೊನೆಗೂ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಉದ್ಯೋಗ ಭಾಗ್ಯ ನೀಡಿದೆ. ಬೀಳಗಿ ಅವರ ಪುತ್ರಿಗೆ ಅನುಕಂಪದ ಹುದ್ದೆ ನೀಡಲು ಸಚಿವ ಸಂಪುಟ ಒಪ್ಪಿದೆ.
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಅವರ ಕುಟುಂಬ ಆಧಾರಸ್ತಂಭ ಕಳೆದುಕೊಂಡಿತ್ತು. ಈ ಹಿನ್ನೆಲೆ ಅವರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಬೇಕು ಎಂಬ ಆಗ್ರಹ ಬಿಜೆಪಿ ನಾಯಕರು ಹಾಗೂ ಸಾರ್ವಜನಿಕರ ವಲಯದಿಂದ ಕೇಳಿಬಂದಿತ್ತು. ಈಗ ಅವರ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಕಂಪದ ಹುದ್ದೆ ನೀಡಲು ನಿರ್ಧರಿಸಲಾಗಿದೆ. ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಗ್ರೂಪ್ ಸಿ ಹುದ್ದೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಾಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಮರಿಸಿದ್ದರು.
ಕ್ಲಾಸ್-1 ಹುದ್ದೆ ನೀಡಿ ಎಂದಿದ್ದ ವಿಜಯೇಂದ್ರ
ಬೀಳಗಿಯವರ ಕುಟುಂಬದ ಸದಸ್ಯರೊಬ್ಬರಿಗೆ ಕ್ಲಾಸ್-1 ಅಧಿಕಾರಿ ಹುದ್ದೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದರು. ಮಹಾಂತೇಶ್ ಬೀಳಗಿಯವರ ಅಕಾಲಿಕ ನಿಧನದಿಂದ ನೊಂದಿರುವ ಕುಟುಂಬದ ಕಣ್ಣೀರು ಒರೆಸಿ, ಸಾಂತ್ವನ ಹೇಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ಹಿಂದೆ ಇಂತಹ ಸಂದರ್ಭಗಳಲ್ಲಿ ಅಗಲಿದ ಅಧಿಕಾರಿಗಳ ಕುಟುಂಬ ವರ್ಗದವರಿಗೆ ಅಧಿಕಾರಿ ಹುದ್ದೆ ನೀಡಿದ ನಿದರ್ಶನಗಳಿದ್ದು, ಅದಕ್ಕೆ ಅನುಗುಣವಾಗಿ ಬೀಳಗಿಯವರ ಕುಟುಂಬದ ಒಬ್ಬರಿಗೆ ಕ್ಲಾಸ್-1 ಅಧಿಕಾರಿ ಹುದ್ದೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು. ಇದನ್ನು ವಿಶೇಷ ಪ್ರಕರಣವೆಂದು ರಾಜ್ಯ ಸರ್ಕಾರ ಪರಿಗಣಿಸಬೇಕು. ರಾಜ್ಯ ಸರ್ಕಾರ ಶೀಘ್ರದಲ್ಲಿ ಪೂರಕವಾಗಿ ಮಾನವೀಯ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ನಿರೀಕ್ಷಿಸುತ್ತೇನೆ ಎಂದಿದ್ದಾರೆ.
ಅಪಘಾತ ಸಂಭವಿಸಿದ್ದು ಹೇಗೆ?
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ನವೆಂಬರ್ 25ರಂದು ಕಲಬುರಗಿ ಬಳಿಯ ಜೇವರ್ಗಿ ಸಮೀಪದ ಗೌನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟರು. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಅವರಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾಗಿ ಕಾರಿನಲ್ಲಿದ್ದ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವನ್ನಪ್ಪಿದ್ದರು. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿತ್ತು. ದಾರಿ ಮಧ್ಯೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ರಾಮದುರ್ಗದವರಾದ ಬೀಳಗಿ ಅವರು ಧಾರವಾಡ ಎಸಿಯಾಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರಿಗೆ ಅಪಾರ ಅಭಿಮಾನಿ ಬಳಗವೂ ಇದೆ.
-
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications