ದಿವಂಗತ ಕಲ್ಲಪ್ಪ ಹಂಡಿಭಾಗ್ ಪತ್ನಿಗೆ ಸರಕಾರಿ ನೌಕರಿ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 26 : ಆತ್ಮಹತ್ಯೆಗೆ ಶರಣಾಗಿರುವ ಚಿಕ್ಕಮಗಳೂರಿನ ಮಾಜಿ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಪತ್ನಿ ವಿದ್ಯಾ ಕಲ್ಲಪ್ಪ ಹಂಡಿಭಾಗ್ ಅವರಿಗೆ ಸರಕಾರಿ ನೌಕರಿ ನೀಡಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಆದೇಶ ಹೊರಡಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ 'ಕೃಷ್ಣಾ'ದಲ್ಲಿ ವಿದ್ಯಾ ಕಲ್ಲಪ್ಪ ಹಂಡಿಭಾಗ್ ಅವರನ್ನು ಉಪ ನೋಂದಾಣಾಧಿಕಾರಿಯಾಗಿ ನೇಮಿಸಿ ಸಂಜೆ 5 ಗಂಟೆಗೆ ಆದೇಶ ಹೊರಡಿಸಲಾಗುತ್ತಿದೆ. [ಚಿತ್ರಗಳು : ಸಿದ್ದರಾಮಯ್ಯ ಭೇಟಿಯಾದ ಕಲ್ಲಪ್ಪ ಹಂಡಿಭಾಗ್ ಕುಟುಂಬ]

Government job for wife of Kallappa Handibhag

ಕಲ್ಲಪ್ಪ ಹಂಡಿಭಾಗ್ ಅವರು ಜುಲೈ 5, ಮಂಗಳವಾರ ಮುಂಜಾನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಠಾಣಾ ವ್ಯಾಪ್ತಿಯಲ್ಲಿರುವ ಮಾವನ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಂದಿಗುಂದ ಗ್ರಾಮದವರಾದ ಕಲ್ಲಪ್ಪ ಹಂಡಿಭಾಗ್ ಅವರು ಮೂರು ವರ್ಷಗಳ ಹಿಂದೆ ಮುರಗೋಡ ಗ್ರಾಮದ ವಿದ್ಯಾ ಎಂಬುವವರನ್ನು ವಿವಾಹವಾಗಿದ್ದರು. ಕಲ್ಲಪ್ಪ, ವಿದ್ಯಾ ದಂಪತಿಗೆ 1 ವರ್ಷದ ಗಂಡು ಮಗುವಿದೆ. [ಚಿಕ್ಕಮಗಳೂರು ಡಿವೈಎಸ್ ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka government has decided to appoint Vidya Handibhag as sub-registrar. The order will be handed over on Monday evening to Vidya, wife of Kallappa Handibhag, former DySP of Chikkamagalur, who committed suicide on July 5 in Muragod in Belagavi district.
Please Wait while comments are loading...