Government Jobs: ಮುಂದಿನ 6 ತಿಂಗಳಲ್ಲಿ ಎಲ್ಲಾ ಖಾಲಿ ಹುದ್ದೆಗಳ ಭರ್ತಿ: ಡಿಕೆ ಶಿವಕುಮಾರ್‌ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಮುಂದಿನ ಆರು ತಿಂಗಳೊಳಗೆ ಎಲ್ಲಾ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಘೋಷಿಸಿದ್ದಾರೆ. ಇದರಿಂದ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳಿಗೆ ಹೊಸ ಅವಕಾಶಗಳು ಲಭ್ಯವಾಗುವ ನಿರೀಕ್ಷೆ ಮೂಡಿದೆ.

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿ, ಉದ್ಯೋಗ ಆಕಾಂಕ್ಷಿ ಯುವಸಮೂಹದ ನೆಮ್ಮದಿಯ ನಾಳೆಗಳಿಗಾಗಿ "ಮುಖ್ಯಮಂತ್ರಿ ಉದ್ಯೋಗ ಸಂಕಲ್ಪ" ಆರಂಭಿಸುತ್ತಿದ್ದೇನೆ ಎಂದರು.

Government Jobs Notifications for All Vacant Posts Within Six Months Says DK Shivakumar

​ಸರ್ಕಾರಿ ಹುದ್ದೆಗಳ ಭರ್ತಿ: ಸರ್ಕಾರಿ ವಲಯದ ಖಾಲಿ ಹುದ್ದೆಗಳನ್ನು ತುಂಬುವುದು ನಮ್ಮ ಮೊದಲ ಆದ್ಯತೆ. ​ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಪೈಕಿ ಪ್ರಮುಖ 72,000 ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ​ಮುಂದಿನ ಆರು ತಿಂಗಳಲ್ಲಿ ಎಲ್ಲಾ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಗಳನ್ನು ಹೊರಡಿಸುತ್ತೇವೆ ಎಂದು ಘೋಷಿಸಿದರು.

​"ಯುವ ಉದ್ಯೋಗ ಸೇತು" ಎಂಬ ಹೊಸ ಯೋಜನೆ ಆರಂಭಿಸಲಾಗುವುದು. ಖಾಸಗಿ ವಲಯದಲ್ಲಿರುವ ಉದ್ಯೋಗದ ಅವಕಾಶಗಳನ್ನು ಯುವಜನರಿಗೆ ತಲುಪಿಸಲು ಸಮಗ್ರ ತಂತ್ರಾಂಶ ರೂಪಿಸಲಾಗುವುದು. ಈ ತಂತ್ರಾಂಶ ಉದ್ಯೋಗ ಹುಡುಕುವವರು, ಉದ್ಯೋಗ ನೀಡುವವರು ಮತ್ತು ಶಿಕ್ಷಣ ಸಂಸ್ಥೆಗಳನ್ನು ಒಂದೇ ವೇದಿಕೆಗೆ ತರಲಿದೆ. ​100 ಸರ್ಕಾರಿ ITI ಗಳನ್ನು ಉದ್ಯೋಗ ಆಧಾರಿತ ಕ್ಯಾಂಪಸ್‌ಗಳಾಗಿ ಬದಲಿಸಲಾಗುವುದು. ಖಾಸಗಿ ಕೈಗಾರಿಕೆಗಳ ಸಹಯೋಗದಲ್ಲಿ 10,000 ಯುವಕರಿಗೆ ಉದ್ಯೋಗದ ಅವಕಾಶ ಕಲ್ಪಿಸಲಾಗುವುದು.

​ಉದ್ಯೋಗ ನಿಧಿ ಎಂಬ ಹೊಸ ಯೋಜನೆಯನ್ನು ಆರಂಭಿಸಲಾಗುವುದು. ​ರಾಜ್ಯದ ಅತ್ಯಂತ ಹಿಂದುಳಿದ ಹತ್ತು ಜಿಲ್ಲೆಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ ಸರ್ಕಾರ ಪ್ರೋತ್ಸಾಹ ನೀಡಲಿದೆ. ​ಪ್ರತಿ ಹೊಸ ಉದ್ಯೋಗಕ್ಕೆ ಪ್ರತಿ ತಿಂಗಳು ಸರ್ಕಾರವೇ ತಲಾ 2500 ರೂಪಾಯಿ ಪ್ರೋತ್ಸಾಹ ಧನ ನೀಡಲಿದೆ. ​ಈ ಸೌಲಭ್ಯ ಮುಂದಿನ ಎರಡು ವರ್ಷಗಳ ಕಾಲ ಜಾರಿಯಲ್ಲಿರುತ್ತದೆ. ​ಇದರಿಂದ ಒಂದು ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.

​ರೈತರ ಅನುಭವಕ್ಕೆ ಆಧುನಿಕ ತಂತ್ರಜ್ಞಾನದ ಶಕ್ತಿಯನ್ನು ಬೆರೆಸಲು "ಮುಖ್ಯಮಂತ್ರಿ ರೈತ ಚೈತನ್ಯ" ಯೋಜನೆಯನ್ನು ಘೋಷಿಸುತ್ತಿದ್ದೇನೆ. ​ಡ್ರೋನ್ ಮತ್ತು ಉಪಗ್ರಹ ಚಿತ್ರಗಳ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುವುದು. ನೈಜ ಸಮಯದ ಮಾಹಿತಿಯ ಆಧಾರದ ಮೇಲೆ ರೈತರಿಗೆ ಬೆಳೆ, ಕೀಟ ಮತ್ತು ರೋಗದ ಬಾಧೆ ಹಾಗೂ ಮಾರುಕಟ್ಟೆಯ ಬಗ್ಗೆ ನಿಖರ ಮಾಹಿತಿ ನೀಡಲಾಗುವುದು. ​ಈ ಮಾಹಿತಿಯನ್ನು ಕೃಷಿ ಮಾರುಕಟ್ಟೆಯ ಡಿಜಿಟಲ್ ವ್ಯವಸ್ಥೆಯೊಂದಿಗೆ ಜೋಡಿಸಲಾಗುವುದು.

ರಾಜ್ಯದ ಮುಖ್ಯಮಂತ್ರಿ, ಜನರ ಸೇವಕನಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ಸಿಕ್ಕಿದೆ. ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿ, ಶಾಂತಿ, ಸೌಹಾರ್ದತೆ ಕಾಪಾಡಲು ಪ್ರಯತ್ನಿಸುವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನದ ಹೃದಯಪೂರ್ವಕ ಶುಭಾಶಯಗಳು. ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ತ್ಯಾಗ ಬಲಿದಾನ ಮಾಡಿದ ನಾಯಕರನ್ನು ಸ್ಮರಿಸಿ, ಪ್ರಜಾಪ್ರಭುತ್ವ ವ್ಯವಸ್ಥೆ, ಸ್ವಾತಂತ್ರ್ಯದಿಂದ ನಾವು ಬದುಕುತ್ತಿದ್ದೇವೆ. ರಾಜ್ಯದ ಜನರ ಪರವಾಗಿ ಧ್ವಜಾರೋಹಣ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ಎಲ್ಲಾ ವರ್ಗದ ಜನ ಈ ಸಂಭ್ರಮಾಚರಣೆ ಮಾಡಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+