'ಕರ್ನಾಟಕ: ವಿಶ್ವವಿದ್ಯಾಲಯ ಬಂದ್ ಭಾಗ್ಯ, ಮಂಡ್ಯದಲ್ಲಿ ಶಿಕ್ಷಣಕ್ಕೆ ಕೊಡಲಿ ಪೆಟ್ಟು'
ಬೆಂಗಳೂರು, ಫೆಬ್ರವರಿ 15: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ. ಬಿಜೆಪಿ ತಂದಿದ್ದ ಜನಪರ ಯೋಜನೆಗಳನ್ನು ಕೈ ಬಿಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಶನಿವಾರ ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುವ ಭಾಗ್ಯವನ್ನು ಕಾಂಗ್ರೆಸ್ ನೀಡಿದೆ. ಕಿಸಾನ್ ಸಮ್ಮಾನ್, ವಿದ್ಯಾನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ಮುಚ್ಚಿ ಹಾಕಲಾಗಿದೆ. ಈಗ ಮಾರಿ ಕಣ್ಣು ಹೋರಿ ಮೇಲೆ ಎಂಬಂತೆ, ಸಿಎಂ ಸಿದ್ದರಾಮಯ್ಯನವರ ಕಣ್ಣು ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುವಜನರು ಪದವೀಧರರಾಗುವುದನ್ನು ತಪ್ಪಿಸಲು ಈ ರೀತಿ ಮಾಡಲಾಗಿದೆ. ಯಾರೂ ಪದವೀಧರರಾಗದೇ ಇದ್ದಲ್ಲಿ ಯುವನಿಧಿ ಯೋಜನೆಯನ್ನು ನಿಲ್ಲಿಸಬಹುದು ಎಂಬುದು ಇವರ ಚಿಂತನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೇರೆ ರಾಜ್ಯ, ದೇಶಗಳ ವಿದ್ಯಾರ್ಥಿಗಳು ನಮ್ಮ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬರುತ್ತಿದ್ದಾರೆ. ಮಂಡ್ಯದ ವಿಶ್ವವಿದ್ಯಾಲಯವನ್ನು ಮುಚ್ಚಿ, ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಜಲಕ್ರೀಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಹೆಚ್ಚು ಕನ್ನಡಿಗರು ಇರುವ ಮಂಡ್ಯದಲ್ಲೇ ಶಿಕ್ಷಣಕ್ಕೆ ಕೊಡಲಿ ಪೆಟ್ಟು ಹಾಕಲಾಗಿದೆ. ಉಪನ್ಯಾಸಕರ ನೇಮಕವಿಲ್ಲ, ಅತಿಥಿ ಉಪನ್ಯಾಸರಿಗೆ ವೇತನ ಇಲ್ಲ, ಹೊಸ ಶಿಕ್ಷಣ ನೀತಿ ಜಾರಿಯಾಗಿಲ್ಲ, ಶಾಲಾ ಕೊಠಡಿಗಳ ದುರಸ್ಥಿಗೆ ಹಣವಿಲ್ಲ, ಪಠ್ಯಪುಸ್ತಕ-ಸಮವಸ್ತ್ರ ನೀಡಲು ಕಾಸಿಲ್ಲ.
ಹೊಸ ಕಾಲೇಜು ರಾಜ್ಯದಲ್ಲಿ ಆರಂಭವಾಗಿಲ್ಲ
ಸರ್ಕಾರ ರಾಜ್ಯದಲ್ಲಿ ಹೊಸ ಕಾಲೇಜುಗಳನ್ನು ಎಲ್ಲೂ ಆರಂಭಿಸಿಲ್ಲ. 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸುವಾಗ, ಅದರಲ್ಲಿ 342 ಕೋಟಿ ರೂ. ಕೊಟ್ಟರೆ ಸಾಕು. ಇಷ್ಟು ಹಣ ಕೊಡಲಾಗದೇ ಇದ್ದಲ್ಲಿ, ಮತ್ತೇಕೆ ಬಜೆಟ್ ಮಂಡಿಸಬೇಕು? 3 ಸಾವಿರ ಬಾರ್‌ಗಳನ್ನು ಮುಚ್ಚುವುದಿಲ್ಲ. ಆದರೆ ವಿಶ್ವವಿದ್ಯಾಲಯಗಳನ್ನು ಮಾತ್ರ ಮುಚ್ಚಲಾಗುತ್ತಿದೆ ಎಂದು ಅವರು ವಿವರಿಸಿದರು.
ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಬೇರೆ ರಾಜ್ಯಗಳ ವಿವಿಗಳಿಗೆ ವಲಸೆ ಹೋಗುತ್ತಾರೆ. ಇಲ್ಲಿ ಪ್ರತಿಭಾವಂತರು ಸಿಗುತ್ತಾರೆ ಎಂಬ ಕಾರಣಕ್ಕೆ ಇನ್‌ವೆಸ್ಟ್ ಕರ್ನಾಟಕಕ್ಕೆ ಎಲ್ಲರೂ ಬರುತ್ತಾರೆ. ವಿದ್ಯಾರ್ಥಿಗಳೇ ಇಲ್ಲವೆಂದ ಮೇಲೆ ಯಾವ ಉದ್ಯಮಿಗಳು ಇಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರುತ್ತಾರೆ ಎಂದು ಪ್ರಶ್ನಿಸಿದರು.
ಮೈಸೂರಿನಲ್ಲಿ ನಡೆದ ಗಲಭೆ ಪೂರ್ವನಿಯೋಜಿತವಾಗಿದೆ. ಮೂಟೆಗಳಲ್ಲಿ ಕಲ್ಲುಗಳನ್ನು ತಂದು ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ಇಷ್ಟೊಂದು ಮೂಟೆಗಳನ್ನು ತರಲು ಸಮಯ ಬೇಕಾಗುತ್ತದೆ. ಆದರೆ ಸಚಿವ ರಾಜಣ್ಣ ಪೊಲೀಸರನ್ನು ನಿಂದಿಸಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪೊಲೀಸರನ್ನು ಶ್ಲಾಘಿಸಿದ್ದಾರೆ.
ಇತ್ತ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿರ್ಲಿಪ್ತ ಮನಸ್ಥಿತಿ ಹೊಂದಿದ್ದಾರೆ. ಮಕ್ಕಳು ಕಲ್ಲು ಹೊಡೆದಿದ್ದು, ಹಿರಿಯರು ಸಮಾಧಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈ ರೀತಿಯಲ್ಲೇ ಚಿಂತಿಸಬೇಕು ಎಂದು ಕಾಂಗ್ರೆಸ್ ನಾಯಕರು ಮೊದಲೇ ಹೇಳಿಬಿಡುತ್ತಾರೆ ಎಂದು ದೂರಿದರು.
ಹುಬ್ಬಳ್ಳಿಯಲ್ಲಾದ ಗಲಭೆಯ ಪ್ರಕರಣವನ್ನು ಕೈ ಬಿಡಲಾಗಿದೆ. ಭಗವಾನ್ ಎಂಬ ಚಿಂತಕ ಶ್ರೀರಾಮನ ಬಗ್ಗೆ ಹೀನಾಯವಾಗಿ ಮಾತಾಡಿದರೂ ಹಿಂದೂಗಳು ಎಂದೂ ಕಲ್ಲು ಹೊಡೆದಿಲ್ಲ. ಕಾನೂನು ಕಾಪಾಡಬೇಕಾದ ಪೊಲೀಸರ ಕೈಯನ್ನು ಸರ್ಕಾರವೇ ಕೈ ಕಟ್ಟಿ ಹಾಕಿದೆ. ಪೊಲೀಸರನ್ನೇ ತಪ್ಪಿತಸ್ಥರನ್ನಾಗಿ ಮಾಡಿದ್ದು, ಇನ್ನು ಯಾರನ್ನಾದರೂ ಅಮಾನತು ಮಾಡುತ್ತಾರೆ. ಪೊಲೀಸರ ಆತ್ಮಸ್ಥೈರ್ಯವನ್ನು ಕುಗ್ಗಿಸಲಾಗಿದೆ.
ಈ ಘಟನೆಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ? ಸಿಸಿಟಿವಿ ಕ್ಯಾಮರಾ ನೋಡಿ ಆರ್‌ಎಸ್‌ಎಸ್ ನ ಯಾವ ಸ್ವಯಂ ಸೇವಕರು ಬಂದಿದ್ದಾರೆ ಎಂದು ತಿಳಿಸಲಿ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ ಪ್ರಚೋದನೆಯಿಂದಲೇ ಇಂತಹ ಘಟನೆಗಳು ನಡೆಯಲಿವೆ ಎಂದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 80 ಕೋಟಿ ಜನರಿಗೆ ನೀಡುತ್ತಿರುವ ಆಹಾರ ಯೋಜನೆಯನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಟೀಕಿಸಿದ್ದಾರೆ. ಉಚಿತವಾಗಿ ಅಕ್ಕಿ ನೀಡಬಾರದು ಎಂದು ಅವರು ಹೇಳಿದ್ದಾರೆ. ಆದರೆ ಇದೇ ಕಾಂಗ್ರೆಸ್ ಕರ್ನಾಟಕದಲ್ಲಿ ಉಚಿತ ಗ್ಯಾರಂಟಿಗಳನ್ನು ನೀಡುತ್ತಿದೆ. ಅಂದರೆ ಕೇಂದ್ರದಲ್ಲಿ ಕಾಂಗ್ರೆಸ್ ಒಂದು ನಿಲುವು ತಾಳಿದರೆ, ರಾಜ್ಯದಲ್ಲಿ ಮತ್ತೊಂದು ನಿಲುವು ಇದೆ. ಮತ ಬೇಕೆಂದಾಗ ಉಚಿತ ಬೇಕು, ಚುನಾವಣೆ ಮುಗಿದ ನಂತರ ಉಚಿತ ಬೇಡ ಎನ್ನುತ್ತಾರೆ. ಇದು ಇವರ ದ್ವಿಮುಖ ನೀತಿ ಎಂದು ತರಾಟೆಗೆ ತೆಗೆದುಕೊಂಡರು.
ಚಾಮರಾಜನಗರ, ಕೊಪ್ಪಳ, ಮಂಡ್ಯ ಸೇರಿದಂತೆ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳನ್ನು ಮುಂದೆ ತರಲು ವಿವಿಗಳನ್ನು ಸ್ಥಾಪಿಸಲಾಗಿದೆ. ಈಗ ಈ ಜಿಲ್ಲೆಗಳ ಬಡವರು ಮಕ್ಕಳನ್ನು ಎಲ್ಲಿಗೆ ಕಳುಹಿಸಬೇಕು? ಈಗಾಗಲೇ ಮೈಕ್ರೋ ಫೈನಾನ್ಸ್ ಸಾಲ ಮಾಡಿ ಜನರು ಬಳಲಿದ್ದಾರೆ. ಈಗ ಶಿಕ್ಷಣಕ್ಕಾಗಿ ಸಾಲ ಮಾಡಿ ಬೇರೆ ಜಿಲ್ಲೆಗಳಿಗೆ ಕಳುಹಿಸಬೇಕಿದೆ. ಇನ್ನು ಆಯಾ ಜಿಲ್ಲೆಗಳ ಜನರು ರೊಚ್ಚಿಗೆದ್ದು ಸರ್ಕಾರದ ವಿರುದ್ಧ ಪ್ರತಿಭಟಿಸಲಿದ್ದಾರೆ ಎಂದು ಎಚ್ಚರಿಸಿದರು.
ರಾಜ್ಯದ್ಲಲಿ ಹೊಸ ಹುದ್ದೆಗಳ ಸೃಷ್ಟಿ ಇಲ್ಲ: ಅಶ್ವತ್ಥ್
ಮಾಜಿ ಸಚಿವ, ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, 8 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರ ನಿರ್ಧಾರದಿಂದ ಪ್ರಗತಿಗೆ ಹಿನ್ನಡೆಯಾಗಲಿದೆ. ಕಾಂಗ್ರೆಸ್‌ನಿಂದ ಎಲ್ಲ ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದೆ. ಈ ತೀರ್ಮಾನದಿಂದ ಯುವಜನರ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಲಿದೆ. ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡಿಸುವಾಗ ಡಾ.ಬಿ.ಆರ್.ಅಂಬೇಡ್ಕರ್‌ರ ಸಂವಿಧಾನದ ಆಶಯ, ವಚನಕಾರರ ಮಾತುಗಳನ್ನು ಹೇಳಿದ್ದರು.
ಆದರೆ ಈಗ ವಿವಿಗಳನ್ನು ಮುಚ್ಚಲಾಗುತ್ತಿದೆ. ಯುವಜನರಿಗೆ ಸಮಾನ ಅವಕಾಶ ದೊರೆಯಲು ಗುಣಮಟ್ಟದ ಶಿಕ್ಷಣ ನೀಡಬೇಕು. ಜಿಲ್ಲೆಗಳು ರೂಪುಗೊಂಡು ಹಲವಾರು ವರ್ಷಗಳಾದರೂ ಅಲ್ಲಿ ಪ್ರತ್ಯೇಕ ವಿವಿಗಳಿಲ್ಲ. ಹಣ ಇಲ್ಲ ಎಂಬ ನೆಪವೊಡ್ಡಿ ವಿವಿಗಳನ್ನು ಮುಚ್ಚಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ವಿವಿಗಳನ್ನು ರೂಪಿಸುವಾಗ, ಹೊಸ ಹುದ್ದೆಗಳನ್ನು ಸೃಷ್ಟಿಸಿಲ್ಲ. ಇರುವ ಹುದ್ದೆಗಳನ್ನೇ ವರ್ಗಾಯಿಸಲಾಗಿದೆ ಎಂದು ಹೇಳಿದರು.
ಯುವಜನ ಶಿಕ್ಷಣದಿಂದ ವಂಚಿತ
2021ರ ಪ್ರಕಾರ, ಕಾಲೇಜುಗಳ ಪ್ರವೇಶಾತಿ ಪ್ರಮಾಣ ಸರಾಸರಿ ಶೇ.33 ಇದೆ. ಚಾಮರಾಜನಗರದಲ್ಲಿ ಶೇ.10, ಮಂಡ್ಯದಲ್ಲಿ ಶೇ.15, ಬಾಗಲಕೋಟೆಯಲ್ಲಿ ಶೇ.16 ಇದೆ. ಇಂತಹ ಸ್ಥಿತಿಯಲ್ಲಿ ಯುವಜನರನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲಾಗುತ್ತಿದೆ. ವಿವಿಗಳಿಂದ ಆದಾಯ ಬರಲು ಇದು ಅಂಗಡಿಗಳಲ್ಲ. ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ.
ಈ ಕ್ರಮ ಕೈಗೊಳ್ಳುವ ಮುನ್ನ ಸರ್ಕಾರ ಯಾವುದೇ ಪರಿಶೀಲನೆ ಮಾಡಿ ವರದಿ ರೂಪಿಸಿಲ್ಲ. ಬಿಜೆಪಿ ಅವಧಿಯಲ್ಲಿ ರೂಸಾ ಯೋಜನೆಯಡಿ ಅನುದಾನ ಪಡೆದು ಮಹಾರಾಣಿ ಕ್ಲಸ್ಟರ್, ಮಂಡ್ಯ ವಿವಿ ರೂಪಿಸಲಾಗಿದೆ. ಇದು ರಾಜಕೀಯ ಪ್ರೇರಿತ ಎಂದು ದೂರಿದರು.
ರಾಜ್ಯದಲ್ಲಿದೆ ರಿಯಲ್ ಎಸ್ಟೇಟ್ ಸರ್ಕಾರ
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಮೊದಲು ಒತ್ತು ನೀಡಿದ್ದು ಶಿಕ್ಷಣಕ್ಕೆ. ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡುವ ಮೊದಲು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. 4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸುವ ಸರ್ಕಾರಕ್ಕೆ 350 ಕೋಟಿ ರೂ. ಅನುದಾನ ನೀಡಲು ಆಗಲ್ಲ. ಕೇಂದ್ರ ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಣಕ್ಕಿಂತ ರಿಯಲ್ ಎಸ್ಟೇಟ್ ಮುಖ್ಯ ಎಂದು ಕಿಡಿ ಕಾರಿದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications