Get Updates
Get notified of breaking news, exclusive insights, and must-see stories!

ಈ ಜಿಲ್ಲೆಗೆ ಸಿಗಲಿದೆ ಸರ್ಕಾರಿ ವೈದ್ಯಕೀಯ ಕಾಲೇಜು: ಸಿಎಂ ಸಿದ್ದರಾಮಯ್ಯ ಆಶ್ವಾಸನೆ

ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಅಲ್ಲದೆ ವಿಜಯಪುರ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಇಂದು ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಜಯಪುರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ, ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಪಾತ್ರ ವಹಿಸಿದೆ. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದೇನೆ. ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ನನ್ನ ಮೇಲಿದೆ ಎಂದರು.

Government Medical College to Be Established in Vijayapura CM Siddaramaiah Announcement

ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು, ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆಗಳು ಎಂದರು.

₹800 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ವಿಜಯಪುರ ಜಿಲ್ಲೆಯಲ್ಲಿ ₹800 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ₹82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ₹730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದು ಹೇಳಿದರು.

ಈ ಭಾಗದಲ್ಲಿ ಸೈಕ್ಲಿಸ್ಟ್‌ಗಳಿಗಾಗಿ ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್‌ನ್ನು ಸ್ಥಾಪಿಸಲಾಗಿದೆ. ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ಸ್ಥಳೀಯ ಶಾಸಕ ಬಸನಗೌಡ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ ₹160 ಕೋಟಿ ವೆಚ್ಚದ ಮೂರು ಕಿ.ಮೀ ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದಾರೆ, ಅದನ್ನು ನೆರವೇರಿಸಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಶಿಕ್ಷಣವನ್ನು ಇನ್ನಷ್ಟು ವಿಸ್ತರಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ತಿಳಿಸಿರುವ ಅವರು, ಇನ್ನೂ ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್‌ಗಳು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಸುಳಿವು ನೀಡಿದ್ದಾರೆ. ಇದರಿಂದಾಗಿ ಅಪಘಾತಗಳು, ತುರ್ತು ಚಿಕಿತ್ಸೆಗಳು ಹಾಗೂ ಗಂಭೀರ ಕಾಯಿಲೆಗಳಿಗೆ ಜಿಲ್ಲಾಮಟ್ಟದಲ್ಲೇ ಉತ್ತಮ ಚಿಕಿತ್ಸೆ ಲಭ್ಯವಾಗಲಿದೆ.

ಮುಖ್ಯವಾಗಿ ವಿಜಯಪುರ ಜಿಲ್ಲೆಯಲ್ಲಿಯೂ ಸರ್ಕಾರಿ ವೈದ್ಯಕೀಯ ಕಾಲೇಜು ಬರುವುದರಿಂದ ಉತ್ತರ ಕರ್ನಾಟಕ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವೆ ಎರಡೂ ಇನ್ನಷ್ಟು ಸುಲಭವಾಗಿ ಲಭ್ಯವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್‌ಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆಯಿಂದ ರಾಜ್ಯದ ಆರೋಗ್ಯ ವ್ಯವಸ್ಥೆ ಮತ್ತಷ್ಟು ಬಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+