ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಆಸ್ಪತ್ರೆ ಆವರಣದ ಔಷಧಿ ಅಂಗಡಿಗಳು ಮುಚ್ಚಿದರೆ ಕಠಿಣ ಕ್ರಮ: ಡಿಕೆಶಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 27: ಇ-ಫಾರ್ಮಸಿ ವ್ಯವಸ್ಥೆ ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಷನ್ ಆಫ್ ಕೆಮಿಸ್ಟ್ ಅಂಡ್ ಡ್ರಗಿಸ್ಟ್ ಸಂಸ್ಥೆಯು ನಾಳೆ (ಸೆಪ್ಟೆಂಬರ್ 28) ಕರೆ ನೀಡುವ ಬಂದ್‌ಗೆ ಸರ್ಕಾರಿ ಔಷಧಿ ಅಂಗಡಿಗಳು ಬೆಂಬಲ ನೀಡುವಂತಿಲ್ಲ ಎಂದು ವೈದ್ಯಕೀಯ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಔಷಧಿ ಅಂಗಡಿಗಳು ಯಾವುದೇ ಕಾರಣಕ್ಕೂ ಬಂದ್ ಮಾಡುವಂತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Government Medical shops should give hassle-free services tomorrow

ಈ ಬಗ್ಗೆ ಟ್ವೀಟ್ ಸಹ ಮಾಡಿರುವ ಸಚಿವರು, ಸಾರ್ವಜನಿಕರಿಗೆ ಸೇವೆ ನೀಡದ ಸರ್ಕಾರಿ ಔಷಧಿ ಅಂಗಡಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ದೇಶಾದ್ಯಂತ ಔಷಧ ಅಂಗಡಿಗಳ ಮುಷ್ಕರ: ಶುಕ್ರವಾರ ಔಷಧ ಸಿಗಲ್ಲ ದೇಶಾದ್ಯಂತ ಔಷಧ ಅಂಗಡಿಗಳ ಮುಷ್ಕರ: ಶುಕ್ರವಾರ ಔಷಧ ಸಿಗಲ್ಲ

ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ಇ-ಫಾರ್ಮಸಿ ವ್ಯವಸ್ಥೆ ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಷನ್ ಆಫ್ ಕೆಮಿಸ್ಟ್ ಅಂಡ್ ಡ್ರಗಿಸ್ಟ್ ಸಂಸ್ಥೆಯು ನಾಳೆ ಒಂದು ದಿನದ ಬಂದ್ ಗೆ ಕರೆ ನೀಡಿದೆ. ನಾಳೆ ದೇಶದೆಲ್ಲೆಡೆ ಔಷಧಿ ಅಂಗಡಿ ತೆರೆಯುವುದಿಲ್ಲ.

ಸಚಿತ್ರ ಸುದ್ದಿ: ಆಯುಷ್ಮಾನ್ ಭಾರತ್ ಪ್ರಯೋಜನ ಪಡೆಯುವುದು ಹೇಗೆ? ಸಚಿತ್ರ ಸುದ್ದಿ: ಆಯುಷ್ಮಾನ್ ಭಾರತ್ ಪ್ರಯೋಜನ ಪಡೆಯುವುದು ಹೇಗೆ?

ಔಷಧ ಮಳಿಗೆಗಳ ಮಾಲೀಕರು ಬಂದ್ ಗೆ ಕರೆ ನೀಡಿದ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಅಗತ್ಯ ಜೀವರಕ್ಷಕ ಔಷಧವನ್ನು ದಾಸ್ತಾನು ಮಾಡಿಕೊಳ್ಳುವಂತೆ ರಾಜ್ಯದ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ. ಜಿಲ್ಲಾ, ತಾಲೂಕು, ಸಾರ್ವಜನಿಕ, ಸಮುದಾಯ ಕೇಂದ್ರ ಹಾಗೂ ಪ್ರಾಥಮಿಕ ಕೇಂದ್ರದಲ್ಲಿ ಜೀವರಕ್ಷಕ ಔಷಧ ಸಿಗಲಿದೆ.

English summary
Government medical should gives hassle-free service tomorrow said Medical education minister DK Shivakumar. He said Strict Action will be initiated against medical stores which are closed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X