Government Employees: ಹಳೆ ಪಿಂಚಣಿ ಯೋಜನೆ ಜಾರಿ ಬಗ್ಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ : ಸಂಪೂರ್ಣ ಮಾಹಿತಿ ತಿಳಿಯಿರಿ

ಬೆಂಗಳೂರು, ಆಗಸ್ಟ್‌ 20: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಸರ್ಕಾರಿ ನೌಕರರ ಬೇಡಿಕೆಯನ್ನ ಈಡೇರಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನದಿಂದ ಸರ್ಕಾರಿ ನೌಕರರು ತಮ್ಮ ಬೇಡಿಕೆಯನ್ನ ಈಡೇರಿಸಿ ಎಂದು ಹಲವು ಬಾರೀ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನೂ ಸಹ ನಡೆಸಿದ್ದಾರೆ.

2006 ರಿಂದ ಇತ್ತೀಚಿನವರೆಗೂ 2 ಲಕ್ಷದ 83 ಸಾವಿರ ಮಂದಿ ಸರ್ಕಾರಿ ಕೆಲಸಕ್ಕೆ ಸೇರಿದ್ದಾರೆ. ಇವರಿಗೆ ಎನ್​ಪಿಎಸ್​ಪಿಂಚಣಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿಯೂ ಸಹ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದತಿ ಬಗ್ಗೆ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಹೇಳಿದ್ದರು.ಎನ್​ಪಿಎಸ್​ ರದ್ದುಪಡಿಸಿದ ಇತರೆ ರಾಜ್ಯಗಳಲ್ಲಿ ಅನುಸರಿಸಲಾದ ಕ್ರಮಗಳ ಕುರಿತು ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು.

Government moves to implement old pension scheme

ರಾಜಸ್ಥಾನ, ಛತ್ತೀಸ್​ಗಡ, ಜಾರ್ಖಂಡ್​ ಸೇರಿದಂತೆ ಕೆಲವು ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ಜಾರಿಗೊಳಿಸುವುದಾಗಿ ಹೇಳಿದ್ದವು. ಪಂಜಾಬ್ ಸರ್ಕಾರ ಕೂಡ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಇತ್ತೀಚೆಗೆ ಹೇಳಿತ್ತು. ಕರ್ನಾಟಕದಲ್ಲಿಯೂ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ಜಾರಿಗೊಳಿಸಬೇಕು ಎಂಬ ಆಗ್ರಹ ಸರ್ಕಾರಿ ನೌಕರರಿಂದ ಕೇಳಿ ಬಂದಿದೆ.

ಸರ್ಕಾರಿ ನೌಕರರು ಬಹುದಿನಗಳಿಂದ ಕಾಯುತ್ತಿದ್ದ ಹಳೆ ಪಿಂಚಣಿ ಯೋಜನೆಗೆ ಕ್ಷಣಗಣನೆ ಆರಂಭವಾಗಿದೆ. ಹಳೆ ಪಿಂಚಣಿ ಯೋಜನೆ ಮರು ಜಾರಿಯಾಗಬೇಕು ಎನ್ನುವ ಸರ್ಕಾರಿ ನೌಕರರ ಬೇಡಿಕೆ ಕೊನೆಗೂ ಈಡೇರಲಿದೆ. ಚುನಾವಣೆ ವೇಳೆ ಕಾಂಗ್ರೆಸ್ ನೀಡಿರುವ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಈಗಾಗಲೇ ಸರ್ಕಾರಿ ನೌಕರರು ಎನ್‌ ಪಿ ಎಸ್‌ ಜಾರಿಗೆ ಬಂದಾಗಿನಿಂದ ಅದನ್ನು ರದ್ದುಗೊಳಿಸಿ ಮತ್ತೆ ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೆ ತರಬೇಕು ಎಂದು ಹೋರಾಡುತ್ತಲೇ ಬಂದಿದ್ದಾರೆ.

ರಾಜ್ಯದಲ್ಲಿ ಸರ್ಕಾರ ರಚನೆಯಾದಾಗಿನಿಂದ ಒಪಿಎಸ್ ಅನ್ನು ಮತ್ತೆ ಜಾರಿಗೊಳಿಸಬೇಕು ಎನ್ನುವ ಒತ್ತಡ ಸರ್ಕಾರಿ ನೌಕರರಿಂದ ಕೇಳಿ ಬರುತ್ತಲೇ ಇದೆ. ಇದೀಗ ಕೊನೆಗೂ ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆ ಈಡೇರಿಕೆಯಾಗುವ ದಿನ ಹತ್ತಿರವಾಗುತ್ತಿದ್ದು, ಹಳೆ ಪಿಂಚಣಿ ಯೋಜನೆ ಜಾರಿಗೆ ಕ್ಷಣಗಣನೆ ಶುರುವಾಗಿದೆ. ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಸಮಿತಿ ಸಭೆ ನಡೆಸಿದೆ. ಈ ಮಹತ್ವದ ಸಭೆಯಲ್ಲಿ ಹಳೆ ಪಿಂಚಣಿ ಯೋಜನೆ ಕುರಿತು ಚರ್ಚೆ ನಡೆದಿದ್ದು, ಸರ್ಕಾರ ಶೀಘ್ರದಲ್ಲಿಯೇ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+