ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯು ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಿದರೆ ಸರ್ಕಾರದಿಂದ ಎಸ್ಮಾ ಜಾರಿ

|
Google Oneindia Kannada News

ಬೆಂಗಳೂರು, ಮಾರ್ಚ್ 14: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಹಲವಾರು ಪ್ರತಿಭಟನೆ ನಡೆಸಿದ ಬಳಿಕ ಪಿಯು ಉಪನ್ಯಾಸಕರು ಇದೀಗ ಮೌಲ್ಯಮಾಪನ ಬಹಿಷ್ಕರಿಸಲು ಮುಂದಾಗಿದ್ದಾರೆ.

ಒಂದೊಮ್ಮೆ ಮೌಲ್ಯಮಾಪನ ಬಹಿಷ್ಕರಿಸಿದ್ದೇ ಆದಲ್ಲಿ ಸರ್ಕಾರದಿಂದ ಎಸ್ಮಾ ಜಾರಿ ಮಾಡುವ ಕುರಿತು ಚಿಂತನೆ ನಡೆದಿದೆ.ಮಾರ್ಚ್ 22ರಂದು ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯಮಾಪನ ನಡೆಯಬೇಕಿದ್ದು ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಪದವಿಪೂರ್ವ ಕಾಲೇಜು ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಬೇಡಿಕೆ ಈಡೇರಿಕೆಗೆ ಒತ್ತಾಯ: ಪಿಯುಸಿ ಮೌಲ್ಯಮಾಪನ ಬಹಿಷ್ಕಾರಬೇಡಿಕೆ ಈಡೇರಿಕೆಗೆ ಒತ್ತಾಯ: ಪಿಯುಸಿ ಮೌಲ್ಯಮಾಪನ ಬಹಿಷ್ಕಾರ

ಕರ್ನಾಟಕ ಪದವಿಪೂರ್ವ ಕಾಲೇಜು ಶಿಕ್ಷಕರ ಸಂಘ ಇತ್ತೀಚೆಗೆ ಸಭೆ ನಡೆಸಿ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಹೇಳಿ ಮಾರ್ಚ್ 21ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ತಿಳಿಸಿತ್ತು.

Government mulls ESMA against PU teachers over boycott threat

ಅದಕ್ಕೆ ಪ್ರತಿಯಾಗಿ ಶಿಕ್ಷಣ ಇಲಾಖೆ ಎಸ್ಮಾ ಜಾರಿಗೆ ತರಲು ಮುಂದಾಗಿದೆ. ಈ ಮಧ್ಯೆ ಮೌಲ್ಯಮಾಪನ ಬಹಿಷ್ಕರಿಸದಂತೆ ಉಪನ್ಯಾಸಕರ ಮನವೊಲಿಸಲು ಇಲಾಖೆ ಪ್ರಯತ್ನಿಸಲಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರದಿಂದ ಯಾವುದನ್ನೂ ಘೋಷಣೆ ಮಾಡಲು ಸಾಧ್ಯವಾಗುವುದಿಲ್ಲವೆಂದು ಉಪನ್ಯಾಸಕರ ಮನವೊಲಿಸುತ್ತೇವೆ. ಮುಖ್ಯಮಂತ್ರಿಗಳ ಮುಂದೆ ವಿಷಯವನ್ನು ಪ್ರಸ್ತಾಪಿಸುತ್ತೇವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

English summary
The state government is considering invoking the stringent Essential Services Maintenance Act (ESMA) against pre-university college lecturers who have threatened to boycott evaluation work as a mark of protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X