Get Updates
Get notified of breaking news, exclusive insights, and must-see stories!

11,136 ಪೌರ ಕಾರ್ಮಿಕರ ಸೇವೆ ಕಾಯಂ, ಸರ್ಕಾರದಿಂದ ಅಧಿಸೂಚನೆ: ಸಿಎಂ

ಬೆಂಗಳೂರು, ನವೆಂಬರ್ 6: ಕರ್ನಾಟಕ ರಾಜ್ಯ ಸರ್ಕಾರ 11,136 ಪೌರ ಕಾರ್ಮಿಕರಿಗೆ ಕಾಯಂ ನೌಕರಿ ನೀಡಲು ಭಾನುವಾರ ಅಧಿಸೂಚನೆ ಹೊರಡಿಸಿದೆ. ಉಳಿದವರಿಗೆ ಉಳಿದವರಿಗೆ 2 ಮತ್ತು 3ನೇ ಹಂತದಲ್ಲಿ ನೌಕರಿಯನ್ನು ಖಾಯಂ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಾನುವಾರ ನಗರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಲೆಕ್ ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ಮೊದಲ ಹಂತದಲ್ಲಿ 11,136 ಪೌರ ಕಾರ್ಮಿಕರಿಗೆ ಕಾಯಂ ನೌಕರ ನೀಡಲಾಗಿದೆ. ಬೆಂಗಳೂರು ಮತ್ತು ಬೆಂಗಳೂರಿನಾಚೆ ಇರುವ ಪೌರಕಾರ್ಮಿಕರಿಗೆ ಸರ್ಕಾರಿ ನೌಕರರನ್ನಾಗಿ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಪೌರಕಾರ್ಮಿಕರ ಆಪತ್ತು ನಿಧಿಯನ್ನು 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಸಮಿತಿ ರಚಿಸಿ ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಲಾಗಿದೆ. ದೀನದಲಿತರ ಕಲ್ಯಾಣವೇ ಸರ್ಕಾರ ಗುರಿಯಾಗಿಸಿಕೊಂಡಿದೆ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿರಬೇಕು ಎಂದರು.

ಡಾ.ಬಿ.ಆರ್.ಅಂಬೇಡ್ಕರ್‌ರನ್ನು ಸದಾ ಸ್ಮರಿಸಬೇಕು

ಡಾ.ಬಿ.ಆರ್.ಅಂಬೇಡ್ಕರ್‌ರನ್ನು ಸದಾ ಸ್ಮರಿಸಬೇಕು

ಜ್ಞಾನದ ಪ್ರತೀಕವಾದ ಗೌತಮ ಬುದ್ಧ ರಾಜ್ಯ ತ್ಯಜಿಸಿ ಜ್ಞಾನ ಪಡೆದು ಸಾಮಾಜಿಕ , ಧಾರ್ಮಿಕ ಮೌಲ್ಯಗಳನ್ನು ಜಗತ್ತಿಗೆ ಸಾರಿದರು. ಡಾ.ಬಿ.ಆರ್‌. ಅಂಬೇಡ್ಕರ್ ಅವರು ಬುದ್ಧನ ಮಾರ್ಗದಲ್ಲಿ ನಡೆದು ಸ್ವತಂತ್ರ ಭಾರತದಲ್ಲಿ ಎಲ್ಲರಿಗೂ ಸಮನಾದ ಹಕ್ಕುಗಳನ್ನು ನೀಡಿ, ಜಾಗೃತಿಯನ್ನು ಮೂಡಿಸಿ, ದೇಶದಲ್ಲಿ ಸಮಾನತೆ, ಏಕತೆ, ಪ್ರಜಾಪ್ರಭುತ್ವ ಉಳಿಸಿದವರು. ಆಧುನಿಕ ಭಾರತದ ಪ್ರಜಾಪ್ರಭುತ್ವದ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್. ಸಂವಿಧಾನವನ್ನು ರಚಿಸಿರುವ ಮಹಾತ್ಮನನ್ನು ನಾವೆಲ್ಲರೂ ಸದಾ ಕಾಲ ಸ್ಮರಿಸಬೇಕು ಎಂದರು.

ಮೀಸಲಾತಿ ಹೆಚ್ಚಳಕ್ಕೆ ಕೈ ಹಾಕದಂತೆ ಸಲಹೆ

ಮೀಸಲಾತಿ ಹೆಚ್ಚಳಕ್ಕೆ ಕೈ ಹಾಕದಂತೆ ಸಲಹೆ

ಮೀಸಲಾತಿ ಹೆಚ್ಚಳವೆಂಬ ಜೇನುಗೂಡಿಗೆ ಕೈಹಾಕಬೇಡಿ ಎಂದು ನನಗೆ ಬಹಳ ಜನ ಸಲಹೆ ನೀಡಿದ್ದರು. ಆದರೂ ಅವುಗಳನ್ನು ಲೆಕ್ಕಿಸಲಿಲ್ಲ. ಮಾನವೀಯ ಗುಣವಿಲ್ಲದವರು ಎಂದಿಗೂ ಆಡಳಿತ ನಡೆಸಬಾರದು. ಅವರ ಜನಸಂಖ್ಯೆಗೆ ಅನುಗುಣವಾಗಿ ಆ ಜನಾಂಗಗಳಿಗೆ ನ್ಯಾಯ ದೊರಕಿಸುವುದು ನಮ್ಮ ಧರ್ಮ. ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿಯವರು ನನಗೆ ಸದಾ ಕಾಲ ಪ್ರೇರಣೆಯಾಗಿದ್ದಾರೆ. ಸಾಮಾಜಿಕ ನ್ಯಾಯವನ್ನು ಕೇವಲ ಭಾಷಣವಾಗಿಸದೇ ಕಾರ್ಯರೂಪಕ್ಕೆ ತರಬೇಕೆಂಬ ನನ್ನ ಮನದಾಳದ ಭಾವನೆಯಾಗಿತ್ತು. ಮುಖ್ಯಮಂತ್ರಿಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಭಾವನೆ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಗಾಂಧೀಜಿಯವರ ಮಾತಿನಿಂತೆ ನ್ಯಾಯ ನೀಡಲಾಗಿದೆ

ಗಾಂಧೀಜಿಯವರ ಮಾತಿನಿಂತೆ ನ್ಯಾಯ ನೀಡಲಾಗಿದೆ

ಮಹಾತ್ಮ ಗಾಂಧೀಜಿ ದೀನದಲಿತರ ಬಗ್ಗೆ ನಿರ್ಣಯ ಕೈಗೊಳ್ಳುವಾಗ ಅವರ ಕಣ್ಣೀರನ್ನು ನೆನಪಿಸಿಕೊಳ್ಳಬೇಕು ಎಂದಿದ್ದರು. ಅವರ ಮಾತಿನಂತೆ ಈ ಜನಾಂಗಕ್ಕೆ ನ್ಯಾಯ ನೀಡಲು ಮೀಸಲಾತಿ ಹೆಚ್ಚಿಸಿದ್ದೇವೆ. ಈ ಕುರಿತ ಕಾನೂನು ಹೋರಾಟವನ್ನು ನಿಷ್ಟೆ, ಪ್ರಾಮಾಣಿಕತೆಯಿಂದ ಕೈಗೊಳ್ಳುತ್ತೇನೆ. ಸಂವಿಧಾನತ್ಮಕವಾದ ಹಕ್ಕುಗಳನ್ನು ನೀಡಲು ತಡ ಮಾಡಬಾರದು. ಈ ಜನಾಂಗದವರ ಬೇಡಿಕಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಂಘಟನಾ ಶಕ್ತಿಯಿಂದ ಪ್ರಜಾಪ್ರಭುತ್ವಕ್ಕೆ ಬೆಲೆ

ಸಂಘಟನಾ ಶಕ್ತಿಯಿಂದ ಪ್ರಜಾಪ್ರಭುತ್ವಕ್ಕೆ ಬೆಲೆ

ನಮ್ಮ ಹಕ್ಕನ್ನು ಪಡೆಯಲು ಶಿಕ್ಷಣ ಬಹಳ ಮುಖ್ಯ. ಸಂಘಟನೆಯಲ್ಲಿ ಶಕ್ತಿಯಿದ್ದರೆ, ಪ್ರಜಾಪ್ರಭುತ್ವಕ್ಕೆ ಬೆಲೆ ಬರುತ್ತದೆ. ನ್ಯಾಯಸಮ್ಮತವಾದ ಹೋರಾಟ ನಡೆಸುವುದು ಸಂವಿಧಾನದ ಹಕ್ಕಾಗಿದೆ. ಬಡವರಿಗೆ ದೀನ ದಲಿತರ ಒಳಿತಿಗಾಗಿ ಸರ್ಕಾರ ಕ್ರಾಂತಿಕಾರಿ ನಿರ್ಣಯಗಳನ್ನು ಕೈಗೊಂಡರೆ, ಕೆಲವರು ಗೊಂದಲ ಸೃಷ್ಟಿಸುತ್ತಾರೆ. ಅಪಸ್ವರಗಳನ್ನು ಆಡುತ್ತಿದ್ದಾರೆ. ಸಂವಿಧಾನ ಬದ್ಧವಾಗಿ ಈ ಕೆಲಸ ಮಾಡುತ್ತಿದ್ದೇವೆ. ನಗರಾಭಿವೃದ್ಧಿ, ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಗೋವಿಂದ ಕಾರಜೋಳ ಮತ್ತಿತರರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+