Government employee; ಸಾರ್ವತ್ರಿಕ ವರ್ಗಾವಣೆ ದಿನಾಂಕ ವಿಸ್ತರಣೆ

ಬೆಂಗಳೂರು, ಜೂನ್ 16: ಕರ್ನಾಟದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರ ಷರತ್ತು ಬದ್ಧ ವರ್ಗಾವಣೆಗೆ ನಿಗದಿಗೊಳಿಸಿದ್ದ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಶುಕ್ರವಾರ ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರ) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವಾ ನಿಯಮಗಳು-1) ಹೇಮಲತ ಜಿ. ಈ ಕುರಿತು ಆದೇಶ ಹೊರಡಿಸಿದ್ದಾರೆ.

Government Of Karnataka Extend Employee Transfer Date

ಈ ಆದೇಶ 2023-24ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳು ಎಂಬ ವಿಷಯ ಒಳಗೊಂಡಿದೆ. ಸರ್ಕಾರಿ ಆದೇಶ ದಿನಾಂಕ 30/05/2023 ಉಲ್ಲೇಖಿಸಿ ಈ ಆದೇಶ ಹೊರಡಿಸಲಾಗಿದೆ.

ಈ ಹಿಂದಿನ ಸರ್ಕಾರಿ ಆದೇಶದಲ್ಲಿ 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ 15/06/2023ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು.

ಸದರಿ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ಕಳಕಂಡಂತೆ ಆದೇಶಿಸಿದೆ ಎಂದು ಹೇಳಿದೆ. ದಿನಾಂಕ 16/06/2023ರ

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ 30/05/2023ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ದಿನಾಂಕ 30/06/2023 ರವರೆಗೆ ವಿಸ್ತರಿಸಿ ಆದೇಶಿಸಿದೆ ಎಂದು ಹೇಳಿದೆ.

ಹಿಂದಿನ ಆದೇಶ; ಮೇ 30ರಂದು ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರ.) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವಾ ನಿಯಮಗಳು-1) ಹೇಮಲತ ಜಿ. ಸರ್ಕಾರಿ ನೌಕರರ ವರ್ಗಾವಣೆ ಕುರಿತು ಆದೇಶ ಹೊರಡಿಸಿದ್ದರು.

ಸರ್ಕಾರಿ ಆದೇಶ ಸಂಖ್ಯೆ ದಿನಾಂಕ 7/6/2013ರ ಉಲ್ಲೇಖಿಸಿ ಈ ಆದೇಶ ಹೊರಡಿಸಲಾಗಿತ್ತು. 2023-24ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳು ಎಂಬ ವಿಷಯವನ್ನು ಈ ಆದೇಶ ಒಳಗೊಂಡಿತ್ತು.

ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ ಎಂದು ಹೇಳಿತ್ತು.

2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲು ನಿರ್ಧರಿಸಿರುವುದರಿಂದ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ ಎಂದು ತಿಳಿಸಲಾಗಿತ್ತು.

ಸರ್ಕಾರಿ ಆದೇಶ ಸಂಖ್ಯೆ 30/5/2023ರಂತೆ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು 2023-24ನೇ ಸಾಲಿಗೆ ಗ್ರೂಪ್-ಎ, ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ 01/06/2023 ರಿಂದ ದಿನಾಂಕ 15/06/2023ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ ಎಂದು ಹೇಳಲಾಗಿತ್ತು. ಈಗ ಆ ದಿನಾಂಕವನ್ನು ಜೂನ್ 30ರ ತನಕ ವಿಸ್ತರಣೆ ಮಾಡಲಾಗಿದೆ.

ಮೇ 29ರಿಂದಲೇ ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿರುವ ಕಾರಣ ಸರ್ಕಾರಿ ನೌಕರರ ವರ್ಗಾವಣೆ ನಿಯಮಗಳು ಶಿಕ್ಷಕರ ವರ್ಗಾವಣೆಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+