Get Updates
Get notified of breaking news, exclusive insights, and must-see stories!

Government Employee: ಸರ್ಕಾರಿ ನೌಕರರ ವರ್ಗಾವಣೆ, ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 11: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಯಂತೆ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಆರಂಭಿಸಿದೆ. 15 ದಿನದಲ್ಲಿ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ ಎಂದು ಮೊದಲು ಆದೇಶಿಸಲಾಗಿತ್ತು. ಈಗ ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಮತ್ತು ಅವರ ಹೆಸರಿನಲ್ಲಿ ವೀರಭದ್ರ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ಆದೇಶವನ್ನು ಹೊರಡಿಸಿದ್ದಾರೆ.

employee-transfer

ಈ ಆದೇಶ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳು ಎಂಬ ವಿಷಯ ಒಳಗೊಂಡಿದೆ. ಸರ್ಕಾರದ ಆದೇಶ ದಿನಾಂಕ 25/6/2024 ಉಲ್ಲೇಖ ಮಾಡಲಾಗಿದೆ. ಸರ್ಕಾರಿ ಆದೇಶದಲ್ಲಿ 2024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಹೇಳಿದೆ.

2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಅದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ 09/07/2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ ಎಂದು ತಿಳಿಸಿದೆ.

ವರ್ಗಾವಣೆ ದಿನಾಂಕ ವಿಸ್ತರಣೆ: ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ 25/06/2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರಾಯೋಜಿಸಲಾಗಿದೆ, ಅವಧಿಯನ್ನು ದಿನಾಂಕ 15/07/2024ರ ವರೆಗೆ ವಿಸ್ತರಿಸಿ ಆದೇಶಿಸಿದೆ ಎಂದು ತಿಳಿಸಿದೆ.

ಹಿಂದಿನ ಆದೇಶದಲ್ಲಿ ಜೂನ್ 25ರಿಂದಲೇ ಆರಂಭವಾಗುವಂತೆ 15 ದಿನದಲ್ಲಿ ಸಾರ್ವತ್ರಿಕ ವರ್ಗಾವಣೆ ಪೂರ್ಣಗೊಳ್ಳಬೇಕಿದೆ ಎಂದು ತಿಳಿಸಲಾಗಿತ್ತು. ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ಪುನರಾವಲೋಕನ ಮಾಡಲಾಗಿದೆ. ವರ್ಗಾವಣಾ ಮಾರ್ಗಸೂಚಿಗಳನ್ನು ಪರಿಷ್ಕರಿಸಿ, ಹೊಸದಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಅದನ್ನು ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿತ್ತು.

ಹೊಸದಾಗಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ 2024-25ನೇ ಸಾಲಿನಿಂದ ಜಾರಿಗೆ ಬಂದಿವೆ. ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ/ ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ ಎಂದು ಹಿಂದಿನ ಆದೇಶದಲ್ಲಿ ಸರ್ಕಾರ ಸ್ಪಷ್ಟಪಡಿಸಿತ್ತು.

ಸರ್ಕಾರಿ ನೌಕರರ 'ವರ್ಗಾವಣೆ' ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ ಕ್ಷೇತ್ರ ಇಲಾಖೆ/ ಆಯುಕ್ತಾಲಯ/ ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ಥಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ ಎಂದು ಹೇಳಿತ್ತು.

'ಚಲನವಲನ' ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳ ನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳ ನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ ಎಂದು ತಿಳಿಸಿತ್ತು.

ಅಲ್ಲದೇ ವರ್ಗಾವಣೆಗೊಂಡ ಸರ್ಕಾರಿ ನೌಕರರು ಆದೇಶದ ಪ್ರಕಾರ ಅವರಿಗೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗದೆ, ವೈದ್ಯಕೀಯ ಕಾರಣಗಳನ್ನು ನೀಡಿ ರಜೆ ಅರ್ಜಿಗಳನ್ನು ಸಲ್ಲಿಸುವ ಪ್ರಕರಣಗಳಲ್ಲಿ, ವರ್ಗಾವಣೆಗೊಂಡ ಅಂತಹ ಸರ್ಕಾರಿ ನೌಕರ, ವರ್ಗಾವಣೆ ಆದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ (as inpatient) ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ, ಅಗತ್ಯ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ರಜೆಯನ್ನು ಕೋರಿ ಮಂಡಳಿಯ ದೃಢೀಕರಣ ಪತ್ರದೊಂದಿಗೆ ಅರ್ಜಿಯನ್ನು ಸಲ್ಲಿಸಿದಲ್ಲಿ, ವೈದ್ಯಕೀಯ ಕಾರಣಗಳ ಮೇಲೆ ರಜೆಯನ್ನು ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರ ಪರಿಶೀಲಿಸಿ ರಜೆಯನ್ನು ಮಂಜೂರು ಮಾಡುವ ಬಗ್ಗೆ ನಿರ್ಣಯಿಸಬಹುದಾಗಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+