ಲಡ್ಡು ವಿವಾದ: ಕರ್ನಾಟಕದ ಎಲ್ಲ ದೇವಸ್ಥಾನಗಳಲ್ಲಿ ಹೊಸ ರೂಲ್ಸ್‌!

ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ವಿತರಿಸುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶ, ಮೀನಿನ ಎಣ್ಣೆ ಸೇರಿದಂತೆ ಇತರೆ ಕಲಬೆರಕೆ ಪದಾರ್ಥಗಳ ಬಳಕೆ ವಿವಾದವು ದೇಶದಾದ್ಯಂತ ಸಂಚಲನ ಮೂಡಿಸುತ್ತಿದೆ. ಇದರ ಬೆನಲ್ಲೇ ರಾಜ್ಯ ಸರ್ಕಾರ ಕೂಡ ಎಚ್ಚೆತ್ತುಕೊಂಡಿದ್ದು, ರಾಜ್ಯದ ಎಲ್ಲ ದೇವಾಲಯಗಳಲ್ಲಿ ಹೊಸ ನಿಯಮವನ್ನು ಜಾರಿಗೊಳಿಸಲು ಮುಂದಾಗಿದೆ.

ಇನ್ನು ರಾಜ್ಯದಲ್ಲಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಎಲ್ಲ ದೇವಸ್ಥಾನಗಳಲ್ಲಿ ಇನ್ನು ಮುಂದೆ ನಂದಿನಿ ತುಪ್ಪ ಮಾತ್ರವೇ ಬಳಸುವುದನ್ನು ಕಡ್ಡಾಯಗೊಳಿಸಿದೆ. ಕರ್ನಾಟಕ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಂಬಂಧ ಹೊಸ ಸುತ್ತೋಲೆಯನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ಪ್ರಸಾದ ವಿತರಿಸಲು ರಾಜ್ಯದ್ದೇ ಬ್ರ್ಯಾಂಡ್‌ ಆಗಿರುವ ಕೆಎಂಎಫ್‌ನ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕೆಂದು ಸೂಚನೆ ನೀಡಿದ್ದಾರೆ.

Government of Karnataka Has Instructed All Temples to use Nandini ghee

ಇದರೊಂದಿಗೆ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದದ ಪರೀಕ್ಷೆಯನ್ನು ಮಾಡಲು ಸಹ ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಸರ್ಕಾರದ ಈ ನಿರ್ಧಾರದಿಂದ ಪ್ರಸಾದದ ಗುಣಮಟ್ಟದ ನಿಯಂತ್ರಣ ಖಾತ್ರಿಗೊಳಿಸುತ್ತದೆ. ಇದರ ಜೊತೆಗೆ ರಾಜ್ಯದ ಆದಾಯವನ್ನು ಕೂಡ ಬೆಂಬಲಿಸಬಹುದು ಎಂದು ಹೇಳಲಾಗಿದೆ.

ಎಲ್ಲ ದೇವಸ್ಥಾನಗಳಲ್ಲಿ ಇನ್ನು ಮುಂದೆ ನಂದಿನಿ ತುಪ್ಪ ಮಾತ್ರವೇ ಕಡ್ಡಾಯವಾಗಿ ಬಳಸಬೇಕೆನ್ನುವ ಸಂಬಂಧ ಇಂದು ಸುತ್ತೋಲೆ ಹೊರಡಿಸಿರುವುದಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಇದಲ್ಲದೆ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ವಿತರಿಸುವ ಪ್ರಸಾದದ ಮೇಲೂ ನಿಗಾ ಇಡಲಾಗಿದ್ದು, ಅಲ್ಲಿನ ಪ್ರಸಾದವನ್ನೂ ಪರೀಕ್ಷೆ ನಡೆಸಲು ಮುಂದಾಗಿದೆ.

Government of Karnataka Has Instructed All Temples to use Nandini ghee

ಏನಿದು ವಿವಾದ?: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ತನಿಖಾ ವರದಿಯಲ್ಲೂ ಇದು ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷೆ ಮಾಡಲು ಸಮಿತಿಯೊಂದನ್ನು ಟಿಟಿಡಿ ಸ್ಥಾಪಿಸಿದೆ.

ತಿರುಮಲ ಶ್ರೀವಾರಿ ಲಡ್ಡು ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದು, ಈ ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿ ಪ್ರಸಾದ ತಯಾರಿಕೆಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಅವರು ಟೀಕಿಸಿದ್ದಾರೆ. ಈ ಆರೋಪ ಸದ್ಯ ಆಂಧ್ರಪ್ರದೇಶದಲ್ಲಿ ಸಂಚಲನ ಸೃಷ್ಟಿ ಮಾಡಿದೆ.

ಜಗನ್ ಮೋಹನ್ ಅವರ ಅಧಿಕಾರದ ಅವಧಿಯಲ್ಲಿ ಭಕ್ತರಿಗೆ ಕಳಪೆ ಲಡ್ಡೂಗಳು ಮತ್ತು ಕಳಪೆ ಗುಣಮಟ್ಟದ ಅನ್ನ ಪ್ರಸಾದವನ್ನು ವಿತರಿಸಲಾಗಿದೆ. ಆಂಧ್ರಪ್ರದೇಶದಲ್ಲಿ ಟಿಡಿಪಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಿರುಮಲ ಲಡ್ಡು ತಯಾರಿಕೆಯಲ್ಲಿ ಶುದ್ಧ ತುಪ್ಪವನ್ನು ಬಳಸಲಾಗುತ್ತಿದೆ ಎಂದು ಚಂದ್ರಬಾಬು ಅವರು ಸಮರ್ಥಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+