Government Employee: ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ

ಬೆಂಗಳೂರು, ಜೂನ್ 26: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಯಂತೆ ವರ್ಗಾವಣೆಗೆ ಅನುಮತಿ ನೀಡಿದೆ. ಶೇ 6ರಷ್ಟು ವರ್ಗಾವಣೆ ನಡೆಯಲಿದ್ದು, ಜುಲೈ 25 ರಿಂದಲೇ ಆರಂಭವಾಗುವಂತೆ 15 ದಿನದಲ್ಲಿ ಸಾರ್ವತ್ರಿಕ ವರ್ಗಾವಣೆ ಪೂರ್ಣಗೊಳ್ಳಬೇಕಿದೆ.

ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಮತ್ತು ಅವರ ಹೆಸರಿನಲ್ಲಿ ವೀರಭದ್ರ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ಆದೇಶವನ್ನು ಹೊರಡಿಸಿದ್ದಾರೆ.

Government Of Karnataka Issues Employee Transfer Guidelines

ಈ ಆದೇಶ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳು ಎಂಬ ವಿಷಯ ಒಳಗೊಂಡಿದೆ. ಪ್ರಸ್ತಾವನೆಯಲ್ಲಿ ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ವ್ಯಾಪಕವಾಗಿ ಪುನರಾವಲೋಕನ ಮಾಡಿ, ದಿನಾಂಕ 07/06/2013ರ ಸರ್ಕಾರದ ಆದೇಶದಲ್ಲಿ ಹೊರಡಿಸಲಾದ ವರ್ಗಾವಣಾ ಮಾರ್ಗಸೂಚಿಗಳನ್ನು ಪರಿಷ್ಕರಿಸಿ, ಹೊಸದಾದ ವರ್ಗಾವಣಾ ಮಾರ್ಗಸೂಚಿಗಳನ್ನು ಹೊರಡಿಸುವುದು ಅವಶ್ಯವೆಂದು ಮನಗಾಣಲಾಗಿರುವುದರಿಂದ ಈ ಕುರಿತು ಆದೇಶಿಸಿದೆ ಎಂದು ಹೇಳಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ದಿನಾಂಕ 07/06/2013ರ ಆದೇಶವನ್ನು ರದ್ದುಪಡಿಸಿ, ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವ ಬಗ್ಗೆ ಈ ಆದೇಶದಲ್ಲಿ ಸೂಚಿಸಿರುವಂತೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರವು ಇಚ್ಚಿಸುತ್ತದೆ. ಈ ಮಾರ್ಗಸೂಚಿಗಳು 2024-25ನೇ ಸಾಲಿನಿಂದ ಜಾರಿಗೆ ಬರುತ್ತವೆ. ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ/ ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವರ್ಗಾವಣೆಯ ಅಂಶಗಳು: 'ಸಕ್ಷಮ ಪ್ರಾಧಿಕಾರ' ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ.

'ವರ್ಗಾವಣೆ' ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ ಕ್ಷೇತ್ರ ಇಲಾಖೆ/ ಆಯುಕ್ತಾಲಯ/ ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ಥಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.

'ಚಲನವಲನ' ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳ ನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳ ನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.

'ಚಲನವಲನ' ಪ್ರಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪಕರಣಗಳಿಗೆ ಅನ್ವಯಿಸತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದೆ. 'ಗುಂಪು 'ಎ', 'ಬಿ', 'ಸಿ', ಮತ್ತು 'ಡಿ' ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು.

'ಜೇಷ್ಠತಾ ಘಟಕ' ಎಂದರೆ ಒಂದು ಹುದ್ದೆಗೆ ಸಂಬಂಧಿಸಿದಂತೆ ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪ್ರಾಧಿಕಾರದ ವ್ಯಾಪ್ತಿ. ವರ್ಗಾವಣಾ ಪ್ರಕ್ರಿಯೆಯು ವರ್ಗಾವಣೆ/ ಚಲನವಲನಗಳನ್ನು ಸಕ್ಷಮ ಪ್ರಾಧಿಕಾರವು ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು. ಪ್ರಸಕ್ತ 2024-25ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆ/ ಚಲನವಲನಗಳ ಸಂಖ್ಯೆಯು ಒಂದು ಜೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ 25/06/2024 ರಿಂದ ದಿನಾಂಕ 09/07/2024ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲಿ ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.

ವರ್ಗಾವಣೆ/ ಚಲನವಲನಗಳನ್ನು ಮಾಡುವಾಗ ಯಾವುದೇ ಸರ್ಕಾರಿ ನೌಕರನು ಉಳಿಯುವಂತಹ ಸಂದರ್ಭಗಳು ಉಂಟಾಗದಂತೆ ನೋಡಿಕೊಳ್ಳತಕ್ಕದ್ದು. ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಆರೋಪಗಳಿದ್ದಲ್ಲಿ ಹಾಗೂ ಆತನ ವಿರುದ್ಧ ಇಲಾಖಾ ವಿಚಾರಣೆ/ ಕ್ರಿಮಿನಲ್ ನಡವಳಿ ಪ್ರಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಸೂಕ್ಷ್ಮ ಹುದ್ದೆಗಳಿಗೆ/ ಕಾರ್ಯಕಾರಿ ಹುದ್ದೆಗಳಿಗೆ ನೇಮಿಸದೇ ಅವರು ತಮ್ಮ ವಿರುದ್ಧ ಬಾಕಿಯಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲದಿರುವಂತಹ ಕಾರ್ಯಕಾರಿಯೇತರ (non-executive) ಹುದ್ದೆಗಳಿಗೆ ನೇಮಿಸತಕ್ಕದ್ದು. ಮುಂದುವರೆದು, ಇಲಾಖಾ ವಿಚಾರಣೆ/ ಕ್ರಿಮಿನಲ್ ಮೊಕದ್ದಮೆ ಬಾಕಿ ಇರುವ ಸರ್ಕಾರಿ ನೌಕರನನ್ನು ಅವನು ಕೋರುವ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಬಾರದು.

ವರ್ಗಾವಣೆಗೊಂಡ ಸರ್ಕಾರಿ ನೌಕರರು ವರ್ಗಾವಣೆ ಆದೇಶದ ಪ್ರಕಾರ ಅವರಿಗೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗದೆ, ವೈದ್ಯಕೀಯ ಕಾರಣಗಳನ್ನು ನೀಡಿ ರಜೆ ಅರ್ಜಿಗಳನ್ನು ಸಲ್ಲಿಸುವ ಪ್ರಕರಣಗಳಲ್ಲಿ, ವರ್ಗಾವಣೆಗೊಂಡ ಅಂತಹ ಸರ್ಕಾರಿ ನೌಕರ, ವರ್ಗಾವಣೆ ಆದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ (as inpatient) ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ, ಅಗತ್ಯ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ರಜೆಯನ್ನು ಕೋರಿ ಮಂಡಳಿಯ ದೃಢೀಕರಣ ಪತ್ರದೊಂದಿಗೆ ಅರ್ಜಿಯನ್ನು ಸಲ್ಲಿಸಿದಲ್ಲಿ, ವೈದ್ಯಕೀಯ ಕಾರಣಗಳ ಮೇಲೆ ರಜೆಯನ್ನು ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರ ಪರಿಶೀಲಿಸಿ ರಜೆಯನ್ನು ಮಂಜೂರು ಮಾಡುವ ಬಗ್ಗೆ ನಿರ್ಣಯಿಸಬಹುದಾಗಿದೆ.

ಒಳರೋಗಿಯಾಗಿದ್ದವರು ಆಸ್ಪತ್ರೆಯಿಂದ ಬಿಡುಗಡೆಯಾಗಿ, ತದನಂತರ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ/ ವಿಶ್ರಾಂತಿ ಪಡೆಯುತ್ತಿದ್ದರೆ, ಅವರು ವರ್ಗಾವಣೆಗೊಂಡ ಸ್ಥಳದಲ್ಲಿ ಸೇರಿಕೆ ಕಾಲದೊಳಗೆ ಕರ್ತವ್ಯಕ್ಕೆ ಹಾಜರಾಗಿ, ರಜಾ ಅರ್ಜಿಯನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ, ರಜೆ ಮಂಜೂರು ಮಾಡಿದ ನಂತರವೇ ರಜೆ ಮೇಲೆ ತೆರಳಬಹುದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸತಕ್ಕದ್ದು.

ಸಂಬಂಧಿಸಿದ ಸರ್ಕಾರಿ ನೌಕರರು ಒಳರೋಗಿಯಾಗಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ವೈದ್ಯಕೀಯ ಕಾರಣಗಳ ಮೇಲೆ ರಜಾ ಅರ್ಜಿಯನ್ನು ಕಡ್ಡಾಯವಾಗಿ ನಿಗದಿತ ಸೇರಿಕೆ ಕಾಲದೊಳಗೆ (Within the joining time prescribed) ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರುಹಾಜರಿ ಎಂದು ಪರಿಗಣಿಸತಕ್ಕದ್ದು ಎಂದು ಹೇಳಿದೆ.

ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿ: ಒಂದು ಸ್ಥಳದಲ್ಲಿ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸಿದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ/ ಚಲನವಲನ ಮಾಡುವಂತಿಲ್ಲ.

ಎಲ್ಲಾ ಗುಂಪುಗಳ 'ಎ' ಹುದ್ದೆಗಳ ಸೇವಾವಧಿ 2 ವರ್ಷ. ಎಲ್ಲಾ ಗುಂಪುಗಳ 'ಬಿ' ಹುದ್ದೆಗಳ ಸೇವಾವಧಿ 2 ವರ್ಷಗಳು. ಎಲ್ಲಾ ಗುಂಪುಗಳ 'ಸಿ' ಹುದ್ದೆಗಳ ಸೇವಾವಧಿ 4 ವರ್ಷ ಮತ್ತು ಎಲ್ಲಾ ಗುಂಪುಗಳ 'ಡಿ' ಹುದ್ದೆಗಳ ಸೇವಾವಧಿ 2 ವರ್ಷ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+