ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರದಿಂದ ಆದೇಶ

ಕರ್ನಾಟಕ ಸರ್ಕಾರ ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿದೆ.

ಬೆಂಗಳೂರು, ಮಾರ್ಚ್ 19; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು ಕೆಲವೇ ದಿನಗಳು ಬಾಕಿ ಉಳಿದಿದೆ. ವಿವಿಧ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಅವರ ಹಲವು ಬೇಡಿಕೆಗಳಿಗೆ ಹಸಿರು ನಿಶಾನೆ ತೋರಿಸುತ್ತಿದೆ. ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.

ಶನಿವಾರ ಕರ್ನಾಟಕದ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ-1 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಷಾಹೀನ್ ಪರ್ವೀನ್ ಕೆ. ಈ ಕುರಿತು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಕುಂಬಾರ ಸಮಯದಾಯ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತು ಮಾನ್ಯ ಮುಖ್ಯಮಂತ್ರಿಯವರ ಟಿಪ್ಪಣಿ ಸಂಖ್ಯೆ:01 ಅನ್ವಯ ಈ ಆದೇಶ ಹೊರಡಿಸಲಾಗಿದೆ.

Government Of Karnataka Set Up The Kumbara Community Development Corporation

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪವರ್ಗ-2ಎ ನ ಕ್ರಮ ಸಂಖ್ಯೆ:6 ಎ ಯಿಂದ (ಕ್ಯು) ವರೆಗೆ ಕ್ರಮವಾಗಿ ಕುಂಬಾರ, ಚಕ್ರಸಾಲಿ, ಗುಣಗ, ಗಣಗಿ, ಕೊಯವ, ಕುಲ, ಕುಲಾಲ, ಕುಂಬಾರ, ಕುಂಬಾರ್ಡ್, ಕುಮಾರ, ಕಸವನ್, ಮೂಲ್ಯ, ಸಜ್ಜನ ಕುಂಬಾರ, ಖುಮಾರ, ಕುಂಭಾರ, ಖುಂಭಾರ, ಕುಲಾಲ‌ ಜಾತಿಗಳಿಗೆ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ.

ಮಾನ್ಯ ಮುಖ್ಯಮಂತ್ರಿಯವರ ಟಿಪ್ಪಣಿಯಲ್ಲಿ ಕರ್ನಾಟಕ ರಾಜ್ಯ ಕುಂಬಾರರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಆದೇಶಿಸಲಾಗಿರುತ್ತದೆ. ಪ್ರಸ್ತಾವನೆಯನ್ನು ಪರಿಶೀಲಿಸಿ ದಿನಾಂಕ 18/03/2023ರ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪವರ್ಗ-2 'ಎ' ಕ್ರಮ ಸಂಖ್ಯೆ 6 ಎ ಯಿಂದ (ಕ್ಯೂ)ವರೆಗೆ ಕ್ರಮವಾಗಿ ನಮೂದಾಗಿರುವ ಕುಂಬಾರ, ಚಕ್ರಸಾಲಿ, ಗುಣಗ, ಗಣಗಿ, ಕೊಡವ, ಕುಲ, ಕುಲಾಲ, ಕುಂಬಾರ, ಕುಂಬಾರ್ಡ್, ಕುಮಾರ, ಕಸವನ್, ಮೂಲ್ಯ, ಸಜ್ಜನ ಕುಂಬಾರ, ಖುಮಾರ, ಕುಂಭಾರ, ಖುಂಭಾರ, ಕುಲಾಲ‌ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ 'ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ'ವನ್ನು ಸ್ಥಾಪಿಸಿ ಆದೇಶಿಸಲಾಗಿದೆ.

Government Of Karnataka Set Up The Kumbara Community Development Corporation

ಹೋರಾಟವನ್ನು ನಡೆಸಿದ್ದರು; ಈ ವರ್ಷದ ಜನವರಿಯಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕುಂಬಾರ ಸಮುದಾಯದವರು ಬೃಹತ್ ಹೋರಾಟ ನಡೆಸಿದ್ದರು. ಕುಂಬಾರರ ಅಭಿವೃದ್ಧಿ ನಿಗಮ ರಚನೆ ಮಾಡಬೇಕು, ವಿಶೇಷ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಈ ಹೋರಾಟ ನಡೆದಿತ್ತು. ಕರ್ನಾಟಕ ಕುಂಬಾರರ ಯುವಸೈನ್ಯ ವತಿಯಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿತ್ತು. ತೆಲಸಂಗ ಕುಂಬಾರ ಗುರುಪೀಠದ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಚಿತ್ರದುರ್ಗದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು.

ಪ್ರತಿಭಟನೆಯ ವೇಳೆ ಕುಂಬಾರ ಸಮುದಾಯದವರು ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ 25 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇದೆ. ಸಮುದಾಯದವರು ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಸಮುದಾಯದ ಅಭಿವೃದ್ಧಿಗೆ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ನಮ್ಮ ಮನವಿಗಳಿಗೆ ಸರ್ಕಾರ ಇದುವರೆಗೂ ಸ್ಪಂದಿಸಿಲ್ಲ. ಈಗಾಗಲೇ ರಚನೆ ಮಾಡಿರುವ ಕುಂಭ ಕಲಾಭಿವೃದ್ಧಿ ಮಂಡಳಿಯನ್ನು ಪ್ರತ್ಯೇಕಿಸಿ ಕುಂಬಾರರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಸಮಯದಾಯದವರಿಗೆ ವಿಶೇಷ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಲಾಗಿತ್ತು.

ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಟ್ವೀಟ್ ಮಾಡಿದ್ದಾರೆ. ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+