Get Updates
Get notified of breaking news, exclusive insights, and must-see stories!

ಎಸ್‌ಬಿಐ, ಪಿಎನ್‌ಬಿ ಬ್ಯಾಂಕ್‌ನ ಕರ್ನಾಟಕ ಸರ್ಕಾರದ ಖಾತೆಗಳು ಕ್ಲೋಸ್, ಠೇವಣಿ ವಾಪಸ್!

ಬೆಂಗಳೂರು, ಆಗಸ್ಟ್ 14: ಕರ್ನಾಟಕ ಸರ್ಕಾರ ಬ್ಯಾಂಕ್‌ಗಳ ಠೇವಣಿ, ಹೂಡಿಕೆ ಬಗ್ಗೆ ಆದೇಶವೊಂದನ್ನು ಹೊರಡಿಸಿದೆ. ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸಬೇಕು ಮತ್ತು ಠೇವಣಿಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯಬೇಕು ಎಂದು ಸುತ್ತೋಲೆಯನ್ನು ಹೊರಡಿಸಿದೆ. ಇನ್ನು ಮುಂದೆ ಸದರಿ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳ ಹೂಡಿಕೆಗಳನ್ನು ಮಾಡಬಾರದು ಎಂದು ತಿಳಿಸಿದೆ.

ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಅನುಮೋದಿಸಲ್ಪಟ್ಟ ಸುತ್ತೋಲೆಯನ್ನು ಡಾ. ಪಿ. ಸಿ. ಜಾಫರ್, ಸರ್ಕಾರದ ಕಾರ್ಯದರ್ಶಿಗಳು, (ಆಯವ್ಯಯ ಮತ್ತು ಸಂಪನ್ಮೂಲ) ಆರ್ಥಿಕ ಇಲಾಖೆ ಹೊರಡಿಸಿದ್ದಾರೆ.

ಈ ಸುತ್ತೋಲೆ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಮತ್ತಿತರ ಸಂಸ್ಥೆಗಳು, ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು ಮತ್ತು ಠೇವಣಿಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯುವುದು ಹಾಗೂ ಇನ್ನು ಮುಂದೆ ಸದರಿ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳ ಹೂಡಿಕೆಗಳನ್ನು ಮಾಡದಿರುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

Government Of Karnataka To Close All Account At SBI And PNB

ಸುತ್ತೋಲೆಯ ವಿವರಗಳು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಪಂಜಾಬ್ ನ್ಯಾಷನಲ್ ಬ್ಯಾಂಕ್, ರಾಜಾಜಿನಗರ ಶಾಖೆಯಲ್ಲಿ ಒಂದು ವರ್ಷ ಅವಧಿಯ ನಿಶ್ಚಿತ ಠೇವಣಿಯಲ್ಲಿ ಹೂಡಿಕೆ ಮಾಡಲು ದಿನಾಂಕ 14.09.20211ರಲ್ಲಿ ಚೆಕ್ ಮೂಲಕ ರೂ. 25 ಕೋಟಿಗಳನ್ನು ಪಾವತಿಸಿತು. ಇದಕ್ಕೆ ಪ್ರತಿಯಾಗಿ ಇದೇ ಬ್ಯಾಂಕಿನ ಮತ್ತೊಂದು ಶಾಖೆಯಾದ ಶಂಕ್ರೀ ಬ್ಯಾಂಕ್, ಸೇಲಂನಿಂದ ರೂ. 12 ಕೋಟಿಗಳ ಒಂದು ನಿಶ್ಚಿತ ಠೇವಣಿಯ ರಸೀತಿಯನ್ನು ಮತ್ತು ರೂ. 13 ಕೋಟಿಗಳ ಇನ್ನೊಂದು ನಿಶ್ಚಿತ ಠೇವಣಿಯ ರಸೀತಿಯನ್ನು ನೀಡಿದರು.

ಅವಧಿ ಮುಕ್ತಾಯದ ನಂತರ ರೂ. 13 ಕೋಟಿಗಳ ಠೇವಣಿಯು ನಗದೀಕರಣವಾಯಿತು. ಆದರೆ, ಎರಡನೇ ಠೇವಣಿ ಖಾತೆಗೆ ಸಂಬಂಧಪಟ್ಟ ಹಾಗೆ ಬ್ಯಾಂಕ್ ಅಧಿಕಾರಿಗಳಿಂದ ನಡೆದಿದೆ ಎನ್ನಲಾದ ವಂಚನೆ ಪ್ರಕರಣದ ಕಾರಣದಿಂದಾಗಿ ಈ ಹಣವನ್ನು ಬ್ಯಾಂಕ್ ಇದುವರೆಗೂ ಮರುಪಾವತಿಸಿರುವುದಿಲ್ಲ. ಈ ವಿಷಯದ ಬಗ್ಗೆ ಬ್ಯಾಂಕ್ ಅಧಿಕಾರಿಗಳ ಜೊತೆ ಪತ್ರ ವ್ಯವಹಾರ ಮತ್ತು ಸಭೆಗಳನ್ನು ನಡೆಸಿದರೂ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ಈ ಪ್ರಕರಣವು ನ್ಯಾಯಾಲಯಗಳಲ್ಲಿ 10 ವರ್ಷಗಳಿಂದಲೂ ವಿಚಾರಣೆ ಹಂತದಲ್ಲಿದೆ.

ಇದೇ ರೀತಿಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ಆಗಿನ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಅವೆನ್ಯೂ ರಸ್ತೆ, ಬೆಂಗಳೂರು ಇದರಲ್ಲಿ ಆಗಸ್ಟ್ 2013 ರಲ್ಲಿ ರೂ. 10 ಕೋಟಿಗಳನ್ನು ನಿಶ್ಚಿತ ಠೇವಣಿಯಲ್ಲಿ ಹೂಡಿದ್ದರು. ಅವಧಿ ಮುಕ್ತಾಯವಾಗುವುದಕ್ಕಿಂತ ಮೊದಲೇ ಬ್ಯಾಂಕ್ ಅಧಿಕಾರಿಗಳಿಂದ ಸದರಿ ಠೇವಣಿಗೆ ಸಂಬಂಧಪಟ್ಟ ಹಣವನ್ನು ನಕಲಿ ದಾಖಲೆಗಳ ಆಧಾರದ ಮೇಲೆ ಒಂದು ಖಾಸಗೀ ಕಂಪನಿಯ ಸಾಲಕ್ಕೆ ಹೊಂದಾಣಿಕೆ ಮಾಡಲಾಯಿತು. ಈ ವಂಚನೆಯ ಪ್ರಕರಣದಲ್ಲೂ ಬ್ಯಾಂಕಿನವರ ಜೊತೆ ಪತ್ರ ವ್ಯವಹಾರ ಮತ್ತು ಸಭೆಗಳನ್ನು ನಡೆಸಿದರೂ ಸಹಾ ಹಣವನ್ನು ಮರುಪಾವತಿಸಲು ಬ್ಯಾಂಕ್‌ನವರು ಒಪ್ಪಲಿಲ್ಲ. ಈ ಪ್ರಕರಣವೂ ಸಹ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

ಈ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ಮಹಾಲೆಕ್ಕಪರಿಶೋಧಕರ ವರದಿಯಲ್ಲಿ ತೀವ್ರವಾದ ಆಕ್ಷೇಪಣೆಗಳು ಸೇರ್ಪಡೆಯಾಗಿದ್ದವು. ಈ ವಿಷಯಕ್ಕೆ ಸಂಬಂಧಪಟ್ಟ ಲೆಕ್ಕ ಪರಿಶೋಧನಾ ಕಂಡಿಕೆಗಳನ್ನು ಸಾರ್ವಜನಿಕ ಲೆಕ್ಕ ಪತ್ರಗಳ ಸಮಿತಿಯಲ್ಲಿ ಅನೇಕ ಬಾರಿ ಚರ್ಚಿಸಲಾಗಿ, ಈ ಎರಡೂ ಬ್ಯಾಂಕುಗಳ ಎಲ್ಲಾ ಶಾಖೆಗಳಲ್ಲೂ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಮತ್ತಿತರ ಸಂಸ್ಥೆಗಳು ಮಾಡಿರುವ ಎಲ್ಲಾ ರೀತಿಯ ಠೇವಣಿಗಳನ್ನು/ ಹೂಡಿಕೆಗಳನ್ನು ಹಿಂದಕ್ಕೆ ಪಡೆಯುವಂತೆ ಹಾಗೂ ಇನ್ನು ಮುಂದೆ ಸದರಿ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳನ್ನು/ ಹೂಡಿಕೆಗಳನ್ನು ನಿರ್ಬಂಧಿಸುವಂತೆ ಸಮಿತಿಯ ಸಭಾ ನಡವಳಿಗಳಲ್ಲಿ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲಾ ಶಾಖೆಗಳಲ್ಲಿ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಮತ್ತಿತರ ಸಂಸ್ಥೆಗಳು ಮಾಡಿರುವ ಎಲ್ಲಾ ರೀತಿಯ ಠೇವಣಿಗಳನ್ನು/ ಹೂಡಿಕೆಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯುವುದು ಹಾಗೂ ಇನ್ನು ಮುಂದೆ ಸದರಿ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳನ್ನು/ ಹೂಡಿಕೆಗಳನ್ನು ಮಾಡಬಾರದು ಎಂದು ಈ ಸುತ್ತೋಲೆಯ ಮೂಲಕ ತಿಳಿಸಲಾಗಿದೆ.

ಮುಂದುವರೆದು, ತಮ್ಮ ಇಲಾಖೆಯ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕಚೇರಿಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಮತ್ತಿತರ ಸಂಸ್ಥೆಗಳು ಇವುಗಳಿಗೆ ಸಂಬಂಧಿಸಿದ, ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗಳ ಎಲ್ಲಾ ಶಾಖೆಗಳಲ್ಲಿ ಹೂಡಿರುವ ಠೇವಣಿಗಳನ್ನು ಮತ್ತು ಇತರೆ ಎಲ್ಲಾ ಖಾತೆಗಳನ್ನು ಮುಕ್ತಾಯಗೊಳಿಸಿ, ಈ ಬಗ್ಗೆ ದೃಢೀಕರಣವನ್ನು ಮತ್ತು ಠೇವಣಿಗಳ ಹಾಗೂ ಖಾತೆಗಳ ವಿವರಗಳನ್ನು ಲಗತ್ತಿಸಿದ ನಮೂನೆಯಲ್ಲಿ ದಿನಾಂಕ 20.09.2024ರೊಳಗೆ ಸರ್ಕಾರದ ಉಪ ಕಾರ್ಯದರ್ಶಿ, ಆಯವ್ಯಯ ಮತ್ತು ಸಂಪನ್ಮೂಲ ಶಾಖೆ, ಆರ್ಥಿಕ ಇಲಾಖೆಗೆ ಸಲ್ಲಿಸಲು ಕೋರಲಾಗಿದೆ ಎಂದು ಸುತ್ತೋಲೆ ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+