Government Employees: ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು, ಮಾರ್ಚ್‌ 27: ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಹಿಳಾ ನೌಕರರ ಪಾತ್ರ ಕುರಿತಾದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಮಹಿಳಾ ಸರ್ಕಾರಿ ಅಧಿಕಾರಿ/ನೌಕರರಿಗೆ ದಿನಾಂಕ: 28.03.2025 ರಂದು ಒಂದು ದಿನದ ಓ.ಓ.ಡಿ. ಸೌಲಭ್ಯವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಹಿಳಾ ನೌಕರರ ಪಾತ್ರ ಕುರಿತಾದ ಕಾರ್ಯಗಾರವನ್ನು ದಿನಾಂಕ: 28.03.2025 ರಂದು ಪೂರ್ವಾಹ್ನ 10.00 ಗಂಟೆಗೆ ಬಾಲಭವನ ಆವರಣದಲ್ಲಿರುವ ಆಡಿಟೋರಿಯಂ, ಬೆಂಗಳೂರು, ಇಲ್ಲಿ ಆಯೋಜಿಸಲಾಗಿದೆ.

Government Order Granting OOD Facility To Women Government Employees

ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಮಹಿಳಾ ಸರ್ಕಾರಿ ಅಧಿಕಾರಿ/ನೌಕರರು ವಿಶೇಷ ಅನುಮತಿಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಒದಗಿಸುವ ಆಧಾರದ ಮೇಲೆ ವಿಶೇಷ ಅನುಮತಿಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದು ಎಂಬ ಷರತ್ತಿಗೊಳಪಟ್ಟು ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಮಹಿಳಾ ಸರ್ಕಾರಿ ಅಧಿಕಾರಿ/ನೌಕರರಿಗೆ ದಿನಾಂಕ: 28.03.2025 ರಂದು ಒಂದು ದಿನದ ಓ.ಓ.ಡಿ. ಸೌಲಭ್ಯವನ್ನು ಮಂಜೂರು ಮಾಡಲಾಗಿದೆ. ಈ ಸುತ್ತೋಲೆಯನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ/57/ಸೇ-3/2025, ದಿನಾಂಕ: 26.03.2025 ರಲ್ಲಿ ನೀಡಿರುವ ಸಹಮತಿಯೊಂದಿಗೆ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ಬಾಲನ್ಯಾಯ ನಿಯಮ 2025ಕ್ಕೆ ಅನುಮೋದನೆ

"ಕರ್ನಾಟಕ ರಾಜ್ಯ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ನಿಯಮಗಳು, 2025"ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ. "ಕರ್ನಾಟಕ ರಾಜ್ಯ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ನಿಯಮಗಳು, 2025"ಕ್ಕೆ ಅನುಮೋದನೆಗೆ ಪ್ರಸ್ತಾಪಿಸಲಾಗಿತ್ತು. ಕೇಂದ್ರದ ಅಧಿನಿಯಮದ ನಿರ್ದೇಶನದನ್ವಯ ಈ ನಿಯಮಗಳನ್ನು ಪ್ರಸ್ತಾಪಿಸಲಾಗಿದೆ. ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿಯಲ್ಲಿ 4 ತಿಂಗಳ ಅವಧಿಯಲ್ಲಿ ತ್ವರಿತಗತಿಯಲ್ಲಿ ನಿಯಮಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

ಕೆ.ಕೆ.ಆರ್.ಡಿ.ಬಿ ರಸ್ತೆ - ಆಡಳಿತಾತ್ಮಕ ಅನುಮೋದನೆ

"ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ 2024-25ನೇ ಸಾಲಿನ ಅಧ್ಯಕ್ಷರ ವಿವೇಚನಾ ನಿಧಿಯಡಿ ಕೈಗೊಳ್ಳಲಾಗುತ್ತಿರುವ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಎಸ್.ಎಚ್-156 ನರಿಬೋಳದಿಂದ ಗಂವ್ಹಾರ ವಯಾ ಬಿರಾಳ ಬಿ ಕಿ.ಮೀ 15.00 ರಿಂದ 36.00 ವರೆಗೆ ರಸ್ತೆ ನಿರ್ಮಾಣ ಕಾಮಗಾರಿಯ ರೂ.23.60 ಕೋಟಿಗಳ ಅಂದಾಜಿಗೆ ಮತ್ತು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಎಸ್.ಎಚ್ 171 ಕೆಲ್ಲೂರು ಬಿ ದಿಂದ ಜವಳಗಾ ಕ್ರಾಸ್ ವರೆಗೆ (ವಯಾ ನೆಲೋಗಿ, ಸೊನ್ನ, ಮುತ್ತುಖೋಡ, ಕರಭೋಸಗಾ) ಕಿ.ಮೀ 165 ರಿಂದ 193.55 ವರೆಗೆ ರಸ್ತೆ ನಿರ್ಮಾಣ ಕಾಮಗಾರಿಯ ರೂ.24.10 ಕೋಟಿಗಳ ಅಂದಾಜಿನ ಎರಡು ಕಾಮಗಾರಿಗಳ ಒಟ್ಟಾರೆ ರೂ.47.70 ಕೋಟಿಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+