Liquor Shops: ರಾಜ್ಯದಲ್ಲಿ ಮದ್ಯದಂಗಡಿ ಪರವಾನಗಿಗಳ ಇ-ಹರಾಜಿಗೆ ಅಧಿಸೂಚನೆ: ಇಲ್ಲಿದೆ ದಿನಾಂಕಗಳ ವಿವರ

Liquor Shops: ಸರ್ಕಾರಕ್ಕೆ ಪ್ರಮುಖ ಆದಾಯದ ಮೂಲವೇ ಮದ್ಯದ ಅಂಗಡಿಗಳಾಗಿವೆ. ರಾಜ್ಯದಲ್ಲಿ ಇದೀಗ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ದೃಢ ನಿರ್ಧಾರವನ್ನು ತೆಗೆದುಕೊಂಡಿದೆ. 477 ವೈನ್ ಶಾಪ್ ಹಾಗೂ 92 ಬಾರ್ ಮತ್ತು ರೆಸ್ಟೋರೆಂಟ್ ಸೇರಿದಂತೆ ಒಟ್ಟು 569 ಮದ್ಯದಂಗಡಿಗಳ ಪರವಾನಗಿಗಳ ಇ-ಹರಾಜಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಮೂಲಕ ಕೋಟಿ.. ಕೋಟಿ ಹಣ ಬಾಚಲು ಮುಂದಾಗಿದೆ. ಹಾಗಾದ್ರೆ, ಬಿಡ್‌ ಪ್ರಕ್ರಿಯೆ ಯಾವಾಗಿನಿಂದ ಆರಂಭವಾಗಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಪರಿಶಿಷ್ಟ ಜಾತಿಗೆ ಒಟ್ಟು ಶೇಕಡ 17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇಕಡ 7ರಷ್ಟು ಮೀಸಲಾತಿ ನೀಡಲಾಗಿದೆ. ಡಿಸೆಂಬರ್ 22ರಿಂದ ಹರಾಜು ಪ್ರಕ್ರಿಯೆಗೆ ನೋಂದಣಿ ಆರಂಭ ಆಗಲಿದೆ. ಜನವರಿ 13ರಿಂದ 20ರ ವರೆಗೆ ನೇರ ಹರಾಜು ಪ್ರಕ್ರಿಯೆ ನಡೆಯಲಿದೆ. ಮದ್ಯ ವ್ಯಾಪಾರಿಗಳ ತೀವ್ರ ವಿರೋಧದ ನಡುವೆಯೂ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.

Government Order issued E-Auction of 569 Liquor Shops in Karnataka Know details

ಸರ್ಕಾರಕ್ಕೆ ಮಹಿಳಾ ಆಯೋಗದ ಮನವಿ ಏನು?: ಕಳೆದ ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು, ಅಕ್ರಮ ಮದ್ಯ ಮಾರಾಟದಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ತುಂಬಾ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಮದ್ಯ ನಿಷೇಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಸರ್ಕಾರ ಹೊಸ ಪರವಾನಗಿಗಳ ಮಾರಾಟ ಮಾಡಲು ನಿರ್ಧರಿಸಿದೆ.

ರಾಜ್ಯದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಹಾಗೂ ಮದ್ಯದಂಗಡಿಗಳ ಸಂಖ್ಯೆಯೂ ಕೂಡ ಹೆಚ್ಚಾಗುತ್ತಲಿದೆ. ಈ ಬಗ್ಗೆ ಹಲವು ಜಿಲ್ಲೆಗಳಿಂದ ದೂರು ಸಲ್ಲಿಕೆಯಾಗಿವೆ. ಆದ್ದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡಬೇಕು ಎಂದು ರಾಜ್ಯ ಮಹಿಳಾ ಆಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಪತ್ರ ಬರೆದಿದ್ದು, ಕಲಬುರಗಿ, ಶಿವಮೊಗ್ಗ, ಬೀದರ್‌, ತುಮಕೂರು ಮತ್ತು ಹಾಸನ ಜಿಲ್ಲೆಗಳಿಗೆ ನಾನು ಭೇಟಿ ನೀಡಿದ್ದೆ. ಆಗ ಅಕ್ರಮ ಮದ್ಯ ಮಾರಾಟ ಮತ್ತು ಹೆಚ್ಚುತ್ತಿರುವ ಮದ್ಯದಂಗಡಿಗಳ ಬಗ್ಗೆ ಮಹಿಳೆಯರು ಅಹವಾಲುಗಳನ್ನು ಸಲ್ಲಿಕೆ ಮಾಡಿದ್ದಾರೆ. ಈ ಹಿನ್ನೆಲೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.

ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್‌ ಹಾಕಬೇಕು. ಶಾಲೆ-ಕಾಲೇಜು, ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಸರ್ಕಾರಿ ಕಚೇರಿ ಮತ್ತು ಆಸ್ಪತ್ರೆಗಳ ಸಮೀಪ ಹೊಸದಾಗಿ ಮದ್ಯದಂಗಡಿಗಳನ್ನು ಓಪಮ್‌ ಮಾಡಲು ಪರವಾನಗಿ ಕೊಡಬಾರದು. ಮದ್ಯ ಮಾರಾಟದಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಸರ್ಕಾರ 569 ಮದ್ಯದಂಗಡಿಗಳ ಇ-ಹರಾಜಿಗೆ ಅಧಿಸೂಚನೆ ಹೊರಡಿಸಿದೆ.

ಅಕ್ರಮ ಮದ್ಯ ಮಾರಾಟಕ್ಕೆ ಬೀಳದ ಬ್ರೇಕ್: ಬಳ್ಳಾರಿ, ರಾಯಚೂರು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಹಲವೆಡೆ ಸಹ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಮಕ್ಕಳು ಹಾಗೂ ಮಹಿಳೆಯರ ಮೇಲೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಅಕ್ರಮವಾಗಿ ತೆರೆದಿರುವ ಮದ್ಯದ ಅಂಗಡಿಗಳನ್ನಯ ಮುಚ್ಚಬೇಕು ಎಂದು ಮಹಿಳೆಯರು ಅಧಿಕಾರಿಗಳಿಗೆ ಹಿಂದಿನಿಂದಲ್ಲೂ ಮನವಿ ಮಾಡುತ್ತಲೇ ಬಂದಿದ್ದಾರೆ. ಬಳಿಕ ಇವುಗಳನ್ನು ಮುಚ್ಚಿದರೂ ಸಹ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಅಕ್ರಮ ಮದ್ಯ ಮಾರಾಟ ಮಾಡುತ್ತಲಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+