Government Employees: ಸರ್ಕಾರಿ ನೌಕರ ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ: ಕರ್ನಾಟಕ ಸರ್ಕಾರ ಮಹತ್ವದ ಆದೇಶ.!
ಬೆಂಗಳೂರು : ರಾಜ್ಯ ಸರ್ಕಾರಿ ನೌಕರ ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ಕುರಿತು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ದಿನಾಂಕ:01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳವಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ(1)ರಲ್ಲಿನ ಸರ್ಕಾರದ ಆದೇಶ ದಿನಾಂಕ:01/04/2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿದ್ದು, ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿರುತ್ತದೆ. ಅದರಂತೆ ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ:30/06/2024 ರೊಳಗೆ ಅಭಿಮತವನ್ನು ಪಡೆದು ಕ್ರೂಡೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿರುತ್ತದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿನ ಸರ್ಕಾರದ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಹಿಂದಿನ ಡಿಫೈನ್ಸ್ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ನೌಕರರ ಎನ್ಪಿಎಸ್ ಪ್ರಾನ್ ಖಾತೆಯಲ್ಲಿನ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.
ಅದರಂತೆ, ಮೇಲೆ ಓದಲಾದ ಕ್ರಮ ಸಂಖ್ಯೆ (3) ರಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರುಗಳನ್ನು ಹಳೆಯ ಡಿಫೈನ್ಸ್ ಪಿಂಚಣಿಗೆ ಯೋಜನೆಗೆ ಒಳಪಡಿಸಿರುವಂತೆ ನೇಮಕಾತಿ ಪ್ರಾಧಿಕಾರವಾದ ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡ(ದ) ಬೆಂಗಳೂರು ಇವರು ನಮೂನೆ-1 ಮತ್ತು ನಮೂನೆ-2 ನ್ನು ಭರ್ತಿ ಮಾಡಿ ದಿನಾಂಕ:30/11/2024 ರಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಈ ಬಗ್ಗೆ ಪರಿಶೀಲಿಸಲಾಗಿ, ಮೇಲೆ ಓದಲಾದ ಕ್ರಮ ಸಂಖ್ಯೆ (4) ರ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ನಾಗರೀಕ ಸೇವಾ (ಪರಿಶಿಷ್ಟ ಜಾತಿ ಪಂಗಡಕ್ಕೆ ಸೇರಿದ ವ್ಯಕ್ತಿಗಳಿಗೆ ಮೀಸಲಿರಿಸಿದ ತುಂಬದೇ ಇರುವ ಖಾಲಿ ಹುದ್ದೆಗಳ) (ವಿಶೇಷ ನೇಮಕಾತಿ) ನಿಯಮಗಳು 2001 ರ ಪ್ರಕಾರ ಲೋಕೋಪಯೋಗಿ ಇಲಾಖೆ ಮತ್ತು ಜಲ ಸಂಪನ್ಮೂಲ ಇಲಾಖೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ಗ್ರೂಪ್-ಸಿ ವೃಂದದ ದ್ವಿತೀಯ ದರ್ಜೆ ಸಹಾಯಕರು, ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ವಾಹನ ಚಾಲಕರು ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ತುಂಬಲು 31/10/2002 ರ ಆಹ್ವಾನಿಸಲಾಗಿರುತ್ತದೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications