Government Employees: ತುಟ್ಟಿಭತ್ಯೆ ಹೆಚ್ಚಳದ ಬಳಿಕ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ
ಬೆಂಗಳೂರು, ಅಕ್ಟೋಬರ್ 16: ಕೇಂದ್ರ ಸರ್ಕಾರ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳದ ಬಳಿಕ ರಾಜ್ಯ ಸರ್ಕಾರ ತುಟ್ಟಿಭತ್ಯೆಯನ್ನು ಪರಿಷ್ಕರಿಸುವ ಸಂಪ್ರದಾಯವಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಶೇ.3ರಷ್ಟು ಡಿಎ ಹೆಚ್ಚಳ ಮಾಡಿತ್ತು. ಇದೀಗ ದೀಪಾವಳಿಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿಭತ್ಯೆಯನ್ನು(ಡಿಎ) ಶೇ.2ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1ರಿಂದಲೇ ಅನ್ವಯವಾಗುವಂತೆ ಮೂಲವೇತನದ ಶೇ.12.25 ರಿಂದ ಶೇ.14.25ಕ್ಕೆ ಪರಿಷ್ಕರಿಸಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ. ಇನ್ನೂ ಸರ್ಕಾರದ ಈ ನಿರ್ಧಾರವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಸ್ವಾಗತಿಸಿದ್ದು, ನೌಕರರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದೀಗ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, 70 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೊಂದಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.
ಸರ್ಕಾರದ ಅಧಿಸೂಚನೆ ಸಂಖ್ಯೆ: ಆಕುಕ 223 ಸಿಜಿಇ 2025, ದಿನಾಂಕ: 17.09.2025 ರಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ವಿವಿಧ ಯೋಜನೆಯಡಿಯಲ್ಲಿ ನೊಂದಾಯಿತಗೊಂಡಿರುವ ಖಾಸಗಿ ಆಸ್ಪತ್ರೆಗಳನ್ನು "ಭಾವಿತ ನೊಂದಾವಣಿ" ಎಂದು ಪರಿಗಣಿಸಿರುವುದರಿಂದ 186 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೊಂದಾವಣೆಗೊಳಿಸಲಾಗಿರುತ್ತದೆ.
ಮುಂದುವರೆದು, ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯಗಳು ಹಾಗೂ ಇತರೆ ಮಾನದಂಡಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಪರಿಶೀಲಿಸಿಕೊಂಡು, ಆಸ್ಪತ್ರೆಗಳೊಂದಿಗೆ ಸೂಕ್ತ ಒಪ್ಪಂದ (MoU) ಮಾಡಿಕೊಳ್ಳುವ ಷರತ್ತಿಗೊಳಪಟ್ಟು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸಿರುವ ಅನುಬಂಧದಲ್ಲಿನ 70 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆಗೊಳಿಸಲಾಗಿದೆ. ಸದರಿ ಅಧಿಸೂಚನೆಯನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್ಎಂಆರ್ 2020, ದಿನಾಂಕ:02.04.2025 ರಲ್ಲಿ ನೀಡಿರುವ ಅಧಿಕಾರ ಪ್ರತ್ಯಾಯೋಜನೆಯ ಮೇರೆಗೆ ಹೊರಡಿಸಲಾಗಿದೆ.












Click it and Unblock the Notifications