Government Employees: ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ನಲ್ಲಿ ನೋಂದಣಿ ಅವಧಿ ವಿಸ್ತರಣೆ: ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ಸರ್ಕಾರದಿಂದ ನೇರವಾಗಿ ಹಾಗೂ ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ಎ', 'ಬಿ' ಮತ್ತು 'ಸಿ' ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಕಾಲಾವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಆದೇಶ ಪತ್ರದಲ್ಲಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ "ಎ", "ಬಿ" ಮತ್ತು "ಸಿ" ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು.

ಆದರೆ, ಹಲವು ಅಧಿಕಾರಿಗಳು ಹಾಗೂ ನೌಕರರು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, 'ಎ' ಮತ್ತು "ಬಿ" ಗುಂಪಿನ ಅಧಿಕಾರಿಗಳಿಗೆ ಹಾಗೂ 'ಸಿ' ಗುಂಪಿನ ನೌಕರರಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ: 16.01.2026ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.
ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನ ಕುರಿತು ಮಾಹಿತಿ
ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರು ಕೆ.ಜಿ.ಐ.ಡಿ. ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ಅವಕಾಶ ಕಲ್ಪಿಸುವ ಕುರಿತು ನೌಕರರ ಕೇಂದ್ರ ಸಂಘದ ಮನವಿ ಮಾಡಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ವೃಂದದ ಅಧಿಕಾರಿ/ನೌಕರರು ಎದುರಿಸುತ್ತಿರುವ ಈ ಕೆಳಕಂಡ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ತಮ್ಮಲ್ಲಿ ಕೋರಿದೆ.
ಕೆ.ಜಿ.ಐ.ಡಿ. ಸಂಖ್ಯೆಯನ್ನು ಹೊಂದಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ನೌಕರರ KGID ಸಂಖ್ಯೆಗೆ ಬದಲಾಗಿ Employee No. ನೀಡಲಾಗುತ್ತಿದ್ದು, KGID ಸಂಖ್ಯೆಯನ್ನೇ ನೌಕರರ Pay Slip ನಲ್ಲಿ ನಮೂದಿಸುವುದು. ಸ್ವಾಯತ್ತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ KGID. ವಂತಿಕೆ ಹಣ ಕಟಾವು ಮಾಡಲಾಗುತ್ತಿದ್ದು, ಕಟಾವು ಮಾಡಲಾದ ವಂತಿಗೆ ಹಣ ಯಾವ ಬಾಬ್ರಿಗೆ ಕಟಾವಣೆ ಮಾಡಲಾಗಿದೆ ಎಂಬುದನ್ನು Pay Slip ನಲ್ಲಿ ಸ್ಪಷ್ಟವಾಗಿ ನಮೂದಿಸುವುದು.
ಸರ್ಕಾರವು ಇತ್ತೀಚೆಗೆ ಜಾರಿಗೊಳಿಸಿರುವ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ"ಗೆ ಸೇರ್ಪಡೆಗೊಳ್ಳಲು ಸ್ವಾಯತ್ತ ಸಂಸ್ಥೆಗಳಲ್ಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರಿಗೆ ಅವಕಾಶ ಕಲ್ಪಿಸುವುದು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications