ಭರ್ಜರಿ ಗುಡ್ ನ್ಯೂಸ್: ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಆಹಾರ ಕಿಟ್.. ಏನೆಲ್ಲಾ ಇರಲಿದೆ?
Ration Card News: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳಲ್ಲಿ 'ಅನ್ನಭಾಗ್ಯ' ಕೂಡ ಒಂದಾಗಿದ್ದು, ಇದರಡಿಯಲ್ಲಿ ಉಚಿತ ಪಡಿತರ ನೀಡಲಾಗುತ್ತಿದೆ. ಆದರೆ, ಇನ್ಮುಂದೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಹಾಗಾದ್ರೆ ಇದರಲ್ಲಿ ಏನೆಲ್ಲಾ ಇರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಪಡಿತರ ಚೀಟಿದಾರರಿಗೆ ನೀಡಲಾಗುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ, ಉಳಿದ 5 ಕೆಜಿ ಅಕ್ಕಿಗೆ ಹಣವನ್ನು ಪಡಿತರ ಚೀಟಿದಾರರ ಖಾತೆಗೆ ವರ್ಗಾವಣೆ ಮಾಡುತ್ತಿತ್ತು.

ಬಳಿಕ ಹಣದ ಬದಲಾಗಿ 5 ಕೆಜಿ ಹೆಚ್ಚುವರಿ ಅಕ್ಕಿಯನ್ನೇ ನೀಡುತ್ತಿದೆ. ಇದೀಗ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಆಹಾರ ಇಲಾಖೆ ಚಿಂತನೆ ನಡೆಸಿದೆ. ಆಹಾರದ ಕಿಟ್‌ನಲ್ಲಿ ಸಕ್ಕರೆ, ಉಪ್ಪು, ತೊಗರಿ ಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ. ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಸೂಚಿಸಿದರೆ ಮಾತ್ರ ಸದ್ಯದಲ್ಲೇ ಆಹಾರ ಕಿಟ್ ನೀಡುವ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಜುಲೈ 2ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಬಗ್ಗೆ ಇಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಆಹಾರದ ಕಿಟ್‌ನಲ್ಲಿ ಏನೆಲ್ಲಾ ಇರಲಿದೆ?
* ಸಕ್ಕರೆ
* ಉಪ್ಪು
* ತೊಗರಿ ಬೇಳೆ
* ಕಾಫಿಪುಡಿ
* ಟೀ ಪುಡಿ
* ಅಡುಗೆ ಎಣ್ಣೆ
* ಗೋಧಿ












Click it and Unblock the Notifications