ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ಅಮಾನತು ರದ್ದು, ಮಾರ್ಗಸೂಚಿ
ಬೆಂಗಳೂರು, ಜೂನ್ 24: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಕರ್ತವ್ಯಲೋಪದ ಆರೋಪದಡಿ ಅಮಾನತ್ತಿನಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಅಮಾನತು ತೆರವುಗೊಳಿಸುವ ಕುರಿತು ಆದೇಶ ಹೊರಡಿಸಲಾಗಿದೆ.
ಈ ಕುರಿತು ಬಿ. ಬಿ. ಕಾವೇರಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ಈ ಪತ್ರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯಲೋಪದ ಆರೋಪದಡಿಯಲ್ಲಿ ಅಮಾನತುಗೊಂಡಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಅಮಾನತು ತೆರವುಗೊಳಿಸಿ ಅಗತ್ಯವಿರುವ ಶಾಲೆಗೆ ಸ್ಥಳ ನಿಯುಕ್ತಿಗೊಳಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.

2023-24ನೇ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಕುರಿತಂತೆ ವಿಸ್ತ್ರತವಾದ ಮಾರ್ಗಸೂಚಿ ಸಹಿತ ವೇಳಾಪಟ್ಟಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆದರೆ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮ 2021ರ ನಿಯಮ 3ರ ಉಲ್ಲಂಘನೆಯ ಆರೋಪದಡಿಯಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು 1957ರ ನಿಯಮ-10 (1)(ಡಿ) ರನ್ವಯ ಕೆಲವು ಶಿಕ್ಷಕರುಗಳನ್ನು ಕರ್ತವ್ಯಲೋಪದ ಆರೋಪದಡಿಯಲ್ಲಿ ಆಯಾ ವ್ಯಾಪ್ತಿಯ ಸಕ್ಷಮ ಶಿಸ್ತು ಪ್ರಾಧಿಕಾರಿಗಳು ಅಮಾನತ್ತುಗೊಳಿಸಿರುವ ಪ್ರಕರಣಗಳು ಕಂಡುಬಂದಿರುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಅಲ್ಲದೇ ಕೆಲವು ಉಪನಿರ್ದೇಶಕರುಗಳು ನಿಯಮಬಾಹಿರವಾಗಿ ವ್ಯತಿರಿಕ್ತ ಬೋಧನಾ ವಿಷಯದ ಹುದ್ದೆಗೆ ಮತ್ತು ವರ್ಗಾವಣಾ ಕಾಯ್ದೆಯ ಸೆಕ್ಷನ್-3ರಡಿಯಲ್ಲಿ ವಿವರಿಸಿರುವಂತೆ ಜಿಲ್ಲೆಯಲ್ಲಿ ಅತೀ ಹೆಚ್ಚು ಖಾಲಿ ಹುದ್ದೆಗಳಿರುವ ತಾಲ್ಲೂಕಿಗೆ ಸ್ಥಳ ನಿಯುಕ್ತಿಗೊಳಿಸದೇ ಆಯಾ ವಲಯದಲ್ಲಿನ ಕಡಿಮೆ ಖಾಲಿ ಹುದ್ದೆಗಳಿರುವ ತಾಲ್ಲೂಕಿಗೆ ಹಾಗೂ ಅಂತಹ ಶಾಲೆಯಲ್ಲಿ ಶಿಕ್ಷಕರ ಅಗತ್ಯತೆ ಇಲ್ಲದಿದ್ದರೂ ವರ್ಗಾವಣಾ ಕಾಯ್ದೆಯನ್ನು ಉಲ್ಲಂಘಿಸಿ ಸ್ಥಳ ನಿಯುಕ್ತಿಗೊಳಿಸಿರುವ ಪ್ರಕರಣಗಳು ಬೆಳಕಿಗೆ ಬಂದಿರುತ್ತದೆ.
ಕರ್ತವ್ಯಲೋಪವೆಸಗಿ ಅಮಾನತ್ತುಗೊಂಡ ಶಿಕ್ಷಕರ ಪಟ್ಟಿಯನ್ನು ಸೂಕ್ತ ಕಾರಣಗಳೊಂದಿಗೆ ಮಾನ್ಯ ಆಯುಕ್ತರ ಅನುಮೋದನೆಗೆ ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿತ್ತು. ಆದರ ಕೆಲವು ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ) ಇವರುಗಳು ಮಾತ್ರ ಅಮಾನತ್ತುಗೊಂಡ ಶಿಕ್ಷಕರ ಪಟ್ಟಿಯನ್ನು ಕಳುಹಿಸಿ ಅಮಾನತ್ತು ತೆರವುಗೊಳಿಸಿ ಸ್ಥಳ ನಿಯುಕ್ತಿಗೊಳಿಸುವ ಸಂಬಂಧ ಮಾರ್ಗದರ್ಶನ ಕೋರಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ, ಪ್ರಸ್ತಾವನೆಯನ್ನು ಪರಿಶೀಲಿಸಿದೆ ಎಂದು ಪತ್ರ ಹೇಳಿದೆ.
ಅದರಂತೆ ಅಂತಹ ಜಿಲ್ಲೆಗಳ ಉಪನಿರ್ದೇಶಕರುಗಳ ಕಛೇರಿಗೆ ಪ್ರತ್ಯೇಕವಾಗಿ ಅಮಾನತು ತೆರವುಗೊಳಿಸಿ ಸ್ಥಳ ನಿಯುಕ್ತಿಗೊಳಿಸಲು ಅನುಮತಿಯನ್ನು ನೀಡಲಾಗಿತ್ತು. ಉಳಿದಂತೆ ಇನ್ನುಳಿದ ಜಿಲ್ಲೆಗಳಲ್ಲಿಯೂ ಸಹ ಅಮಾನತುಗೊಂಡ ಶಿಕ್ಷಕರು ಅಮಾನತ್ತಿನಲ್ಲೇ ಮುಂದುವರೆದಿರಬಹುದಾದ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಅಂತಹ ಶಿಕ್ಷಕರ ಅಮಾನತು ತೆರವುಗೊಳಿಸಿ, ಶಾಲೆಗಳಿಗೆ ಸ್ಥಳ ನಿಯುಕ್ತಿಗೊಳಿಸುವ ಸಂಬಂಧ ಮಾರ್ಗದರ್ಶನ ನೀಡಲಾಗಿದೆ.
ಮಾರ್ಗದರ್ಶನಗಳು
* ಜಿಲ್ಲೆಯಲ್ಲಿ ಅಮಾನತುಗೊಂಡಿರುವ ಶಿಕ್ಷಕರನ್ನು ಕಡ್ಡಾಯವಾಗಿ ಶೇ 25ಕ್ಕಿಂತ ಹೆಚ್ಚಿನ ಖಾಲಿ ಹುದ್ದೆಗಳು ಇರುವ ತಾಲ್ಲೂಕಿಗೆ ಅಥವಾ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಖಾಲಿ ಹುದ್ದೆಗಳಿರುವ ತಾಲ್ಲೂಕಿನಲ್ಲಿನ ಮಕ್ಕಳ ಸಂಖ್ಯೆ ಹೆಚ್ಚಾಗಿರುವ 'ಸಿ' ವಲಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಖಾಲಿ ಹುದ್ದೆಗೆ ಮಾತ್ರ ಕಡ್ಡಾಯವಾಗಿ ಸ್ಥಳ ನಿಯುಕ್ತಿಗೊಳಿಸತಕ್ಕದ್ದು.
* ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧನವಾಗಿದ್ದು, ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳಲ್ಲಿ ಅಮಾನತ್ತನ್ನು ತೆರವುಗೊಳಿಸಲು ಅವಕಾಶವಿರುವುದಿಲ್ಲ. ನ್ಯಾಯಾಂಗ ಬಂಧನದಲ್ಲಿರುವ ಶಿಕ್ಷಕರನ್ನು ಅಮಾನತ್ತು ತೆರವುಗೊಳಿಸಿ ನಿಯುಕ್ತಿಗೊಳಿಸುವಂತಿಲ್ಲ.
* ಕೆಲವು ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರನ್ನು ನಕಲಿ ನೇಮಕಾತಿ ಕುರಿತಂತೆ ಅಮಾನತ್ತುಗೊಳಿಸಲಾಗಿದ್ದು ಪ್ರಸ್ತುತ ವಿಚಾರಣೆ ಹಂತದಲ್ಲಿರುವ ಪ್ರೌಢಶಾಲಾ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಸ್ಥಳನಿಯುಕ್ತಿಗೊಳಿಸುವಂತಿಲ್ಲ.
* ಚುನಾವಣೆ ಸಮಯದಲ್ಲಿ ಜನಪ್ರತಿನಿಧಿ ಕಾಯ್ದೆಯಡಿಯಲ್ಲಿ ಅಮಾನತ್ತುಗೊಂಡ ಶಿಕ್ಷಕರ ಮರು ಸ್ಥಳನಿಯುಕ್ತಿಯು ಸಂಬಂಧಿಸಿದ ಚುನಾವಣಾಧಿಕಾರಿ/ ಜಿಲ್ಲಾಧಿಕಾರಿಗಳ ನಿರ್ಧಾರಕ್ಕೆ ಒಳಪಟ್ಟಿರುತ್ತದೆ.
* ಅಮಾನತ್ತು ಆದೇಶಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತಂದಿರುವ ಶಿಕ್ಷಕರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಕಂಡಿಕೆವಾರು ಉತ್ತರ ಮತ್ತು ಆಕ್ಷೇಪಣಾ ಹೇಳಿಕೆಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿ ತಡೆಯಾಜ್ಞೆ ತೆರವುಗೊಳಿಸುವ ಕುರಿತಂತೆ ತುರ್ತು ಕ್ರಮಗಳನ್ನು ಕೈಗೊಳ್ಳತಕ್ಕದ್ದು.
* ಅನಧಿಕೃತ ಗೈರುಹಾಜರಾಗಿರುವ ಶಿಕ್ಷಕರುಗಳನ್ನು ಯಾವುದೇ ಕಾರಣಕ್ಕೂ ಅಮಾನತ್ತುಗೊಳಿಸಿ ಸ್ಥಳ ನಿಯುಕ್ತಿಗೊಳಿಸತಕ್ಕದ್ದಲ್ಲ. ಈ ಕುರಿತಂತೆ ದಿನಾಂಕ 26/02/2024 ರಲ್ಲಿ ವಿಸ್ತ್ರತವಾದ ಸುತ್ತೋಲೆಯನ್ನು ಹೊರಡಿಸಲಾಗಿತ್ತು. ಒಂದು ವೇಳೆ ಅನಧಿಕೃತ ಗೈರು ಹಾಜರಾಗಿರುವವರನ್ನು ಅಮಾನತ್ತುಗೊಳಿಸಿದಲ್ಲಿ ಜೀವನಾಧಾರ ಭತ್ಯೆ ಪಾವತಿಯಿಂದ ಸರ್ಕಾರಕ್ಕೆ ಆಗುವ ನಷ್ಟವನ್ನು ಸಂಬಂಧಪಟ್ಟವರಿಂದ ವಸೂಲಾತಿ ಮಾಡುವುದರ ಜೊತೆಯಲ್ಲಿ ಅಂತಹ ಪ್ರಾಧಿಕಾರದ ವಿರುದ್ಧ ಶಿಸ್ತು ಕಮಗಳನ್ನು ಕೈಗೊಳ್ಳಲಾಗುವುದು.
ಜಿಲ್ಲೆಯಲ್ಲಿ ಉಪನಿರ್ದೇಶಕರು (ಆಡಳಿತ) ಕ್ಷೇತ್ರಶಿಕ್ಷಣಾಧಿಕಾರಿಗಳು ಶಿಕ್ಷಕರುಗಳನ್ನು ಅಮಾನತ್ತುಗೊಳಿಸಲಾಗಿದ್ದರೂ ಸಹ ಅಮಾನತ್ತುಗೊಂಡ ಶಿಕ್ಷಕರ ಸ್ಥಳ ನಿಯುಕ್ತಿ ಕುರಿತಂತೆ ಸಕ್ಷಮ ಪ್ರಾಧಿಕಾರಿಗಳು ಉಪನಿರ್ದೇಶಕರು (ಆಡಳಿತ) ಇವರೇ ಆಗಿರುವುದರಿಂದ ಅಮಾನತ್ತು ತೆರವುಗೊಳಿಸುವ ಸಂಬಂಧ ಮೇಲೆ ತಿಳಿಸಿರುವಂತೆ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳತಕ್ಕದು ಹಾಗೂ ಕೈಗೊಂಡ ಕ್ರಮದ ಕುರಿತ ವರದಿಯನ್ನು ಆಯಾ ವಿಭಾಗದ ವಿಭಾಗೀಯ ಸಹನಿರ್ದೇಶಕರು, ಬೆಂಗಳೂರು, ಮೈಸೂರು, ಕಲಬುರ್ಗಿ ಮತ್ತು ಬೆಳಗಾವಿ ವಿಭಾಗ ಇವರಿಗೆ ಸಲ್ಲಿಸಲು ತಿಳಿಸಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ












Click it and Unblock the Notifications