ತಳ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗ ನೀಡಲು ಸರ್ಕಾರ ಆದ್ಯತೆ: ಸಿಎಂ
ಬೆಂಗಳೂರು, ಅಕ್ಟೋಬರ್ 09: ಶಿಕ್ಷಣ ಮತ್ತು ಉದ್ಯೋಗ ಇವುಗಳು 21ನೇ ಶತಮಾನದ ಅವಶ್ಯಕತೆಗಳಲ್ಲಿ ಪ್ರಮುಖವಾದವು. ಇವುಗಳನ್ನು ಸರ್ಕಾರ ತಳಸಮುದಾಯಗಳಿಗೆ ಒದಗಿಸುವಲ್ಲಿ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾನುವಾರ ವಿಧಾನಸೌಧದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಪುರಸ್ಕೃತರಿಗೆ 'ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ' ಪ್ರದಾನ ಮಾಡಿ ಮಾತನಾಡಿದರು.
ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಗೆ ಸಂಕಲ್ಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಬ್ ಕಾ ಸಾಥ್-ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಆಶಯವನ್ನು ಸಾಕಾರಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ವಿಧಾನಸೌಧದಿಂದ ಹೊರಡುವ ಪ್ರತಿಯೊಂದು ಆದೇಶವೂ ಸಾಮಾಜಿಕ ನ್ಯಾಯ, ಸಮಾನ ಅವಕಾಶಗಳಿಂದ ಕೂಡಿದ್ದು, ಅವುಗಳು ತಳಸಮುದಾಯ ಏಳಿಗೆಗೆ ಪೂರಕವಾಗಿರಲಿವೆ ಎಂದು ಹೇಳಿದರು.
ಸಮಾಜದಲ್ಲಿ ಎಲ್ಲ ವರ್ಗದವರೂ ಅಣ್ಣತಮ್ಮಂದಿರಂತೆ ಬಾಳುವ ಮೂಲಕ ಮಹರ್ಷಿ ವಾಲ್ಮೀಕಿಯವರಿಗೆ ಗೌರವ ಸಲ್ಲಿಸಬೇಕು. ಎಲ್ಲರಿಗೂ ಸಮಾನ ಅವಕಾಶ ನೀಡುವುದೇ ರಾಮರಾಜ್ಯ. ಮಹರ್ಷಿ ವಾಲ್ಮೀಕಿ ಸೇರಿದಂತೆ ಗೌತಮ ಬುದ್ಧರು, ಶರಣ ಬಸವಣ್ಣನವರು ಹಾಗೂ ಸಂವಿಧಾನವೂ ಸಹ ಸಮಾನತೆಯನ್ನೆ ಪ್ರತಿಪಾದಿಸಿದೆ. ಇದೇ ಹಾದಿಯಲ್ಲಿ ಹೆಜ್ಜೆ ಇಟ್ಟಾಗ ಮಾತ್ರವೇ ಯಶಸ್ಸು ದೊರೆಯುತ್ತದೆ. ಇಚ್ಛಾಶಕ್ತಿಯಿಂದ ಮುನ್ನಡೆದಾಗ ಯಶಸ್ಸು ನಮ್ಮದಾಗುತ್ತದೆ. ಎಸ್‌ಸಿ, ಎಸ್‌ಟಿ ಜನಾಂಗಗಳಿಗೆ ನ್ಯಾಯ ದೊರೆಯುವಂತಾಗಬೇಕು. ಎಲ್ಲರಿಗೂ ವ್ಯವಸ್ಥೆಯಲ್ಲಿ ಸಮಾನದ ಅವಕಾಶ ನೀಡಬೇಕು ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಕನಸು ನನಸು
ಮಠಮಾನ್ಯಗಳ ಶ್ರೀಗಳು, ಸ್ವಾಮೀಜಿಗಳು ತುಳಿತಕ್ಕೊಳಗಾದ ಜನಾಂಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. 101 ಡಾ.ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್ ಗಳನ್ನು ಹಾಗೂ 5 ಮೆಗಾ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುತ್ತಿದೆ. 28,000 ಕೋಟಿ ಹಣ ಎಸ್‌ಸಿ, ಎಸ್ ಟಿ ಕಾರ್ಯಕ್ರಮಗಳಿಗೆ ನೀಡಲಾಗಿದೆ. 6,000 ಕೋಟಿ ರೂ. ಎಸ್‌ಸಿ, ಎಸ್‌ಟಿ ಇಲಾಖೆಗಳಿಗೆ ನೀಡಲಾಗಿದೆ. ತಳ ಸಮುದಾಯಗಳು ಭೂಮಿ ಪಡೆಯಲು 20 ಲಕ್ಷ ರೂ, ಮನೆ ನಿರ್ಮಾಣಕ್ಕೆ 2ಲಕ್ಷ ರೂ. ಬಡ ಪರಿಶಿಷ್ಟ ಜಾತಿ, ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ.
ಪ್ರತಿ ಕ್ಷೇತ್ರದಲ್ಲಿ ನೂರು ಯುವಕರಿಗೆ 10 ಲಕ್ಷ ರೂ. ಸ್ವಯಂ ಉದ್ಯೋಗಕ್ಕಾಗಿ ಒದಗಿಸಲಾಗುತ್ತಿದ್ದು, ಬಾಬು ಜಗಜೀವನರಾಮ್ ಹೆಸರಿನಲ್ಲಿ ಅನುದಾನ ನೀಡಲಾಗುತ್ತಿದೆ. ಈ ಮೂಲಕ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕನಸನ್ನು ನನಸು ಮಾಡುವ ಕೆಲಸ ಮಾಡಲಾಗುತ್ತಿದೆ . ಮುಂದಿನ ದಿನಗಳಲ್ಲಿ ಇನ್ನಷ್ಟು ನಿಮ್ಮ ಪರ ಕೆಲಸ ಮಾಡಲು ಆಶೀರ್ವದಿಸಿ ಎಂದು ಕೋರಿದರು.

ಮೀಸಲಾತಿ ಹೆಚ್ಚಳಕ್ಕೆ ಪ್ರೇರಣೆ
ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ತೀರ್ಮಾನ ಕೈಗೊಳ್ಳಲು ನಿಮ್ಮ ಸಮುದಾಯದ ಪ್ರೀತಿ, ವಿಶ್ವಾಸ, ನನಗೆ ಪ್ರೇರಣೆಯಾಗಿದೆ. ಮಹರ್ಷಿ ವಾಲ್ಮೀಕಿ ಸೇರಿದಂತೆ ಅನೇಕ ಮಹನೀಯರು ನನಗೆ ಸ್ಪೂರ್ತಿಯಾಗಿದ್ದಾರೆ. ಕಠಿಣ ಪರಿಶ್ರಮ ನಡೆಸುವವರ ಬದುಕನ್ನು ಹತ್ತಿರದಿಂದ ಕಂಡಿದ್ದೇನೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಬೇಕು. ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ಹಾಗೂ ಅಡಿ ಯವರಿಗೆ ಅಭಿನಂದನೆ ಸಲ್ಲಿಸಬೇಕು ಎಂದರು.

ವಾಲ್ಮೀಕಿ ಶ್ರೇಷ್ಠ ಮಾನವತಾವಾದಿ
ವಾಲ್ಮೀಕಿ ಶ್ರೇಷ್ಠ ಮಾನವತಾವಾದಿ. ಪರಿವರ್ತನೆಯ ಸಂಕೇತವಾಗಿರುವ ಅವರು ತಮ್ಮ ಹಿಂದಿನ ಬದುಕು ಪರಿವರ್ತನೆ ಮಾಡಿಕೊಂಡು ಇಡೀ ವಿಶ್ವಕ್ಕೇ ಪರಿವರ್ತನೆಯ ಸಂದೇಶ ಸಾರಿದರು. ಅವರು ರಚಿಸಿದ ರಾಮಾಯಣ ಎಂತವರ ಮನಸ್ಸನ್ನು ಮುಟ್ಟುತ್ತದೆ. ವಿಶ್ವದ ಶ್ರೇಷ್ಠ 10 ಗ್ರಂಥಗಳಲ್ಲಿಯೇ ಅತ್ಯಂತ ಶ್ರೇಷ್ಠ ಗ್ರಂಥ ರಾಮಾಯಣ. ಶ್ರೀರಾಮ ಅಂದ್ರೆ ನ್ಯಾಯ, ನೀತಿ, ಧರ್ಮ, ಎಲ್ಲ ಗುಣಗಳ ಸಂಕೇತ .ರಾಮನಿಗೆ ಸರಿಸಾಟಿ ಯಾರೂ ಇಲ್ಲ. ತಂದೆ ಮಗನ ಸಂಬಂಧ, ಅಣ್ಣ ತಮ್ಮಂದಿರ ಸಂಬಂಧ ,ಪತಿ ಪತ್ನಿ ಸಂಬಂಧ, ಗುರು ಶಿಷ್ಯರ ರಾಮ ಆಂಜನೇಯನ ಸಂಬಂಧ ಗಳನ್ನು ತಿಳಿಯಬೇಕೆಂದರೆ ರಾಮಾಯಣ ಓದಬೇಕು. ಆದರ್ಶಗಳೇ ತುಂಬಿರುವ ಧರ್ಮ ಗ್ರಂಥ ವಾಲ್ಮೀಕಿ ಬರೆದ ರಾಮಾಯಣ ಎಂದು ತಿಳಿಸಿದರು.

ಯಾರಿಗೂ ಗುಲಾಮರಾಗುವುದು ಬೇಡ.
ವಾಲ್ಮೀಕಿ ಸಮುದಾಯದವರು ಯಾರಿಗೂ ಕಡಿಮೆ ಇಲ್ಲ. ವಿದ್ಯೆ, ಬುದ್ಧಿ, ಶಕ್ತಿ, ಸಾಹಸದಲ್ಲಿ ಯಾವುದರಲ್ಲಿಯೂ ಕಡಿಮೆ ಇಲ್ಲ. ಬೇಡರ ಕಣ್ಣಪ್ಪನಂತ ಭಕ್ತ ಯಾರಿದ್ದಾರೆ. ವಾಲ್ಮೀಕಿ ಸಮುದಾಯದವರು ಸ್ವಾಭಿಮಾನಿಗಳು. ನೀವು ಯಾರಿಗೂ ಗುಲಾಮರಾಗುವುದು ಬೇಡ. ರಾಜ್ಯವಾಳಿದ ಮದಕರಿ ನಾಯಕನ ಶೌರ್ಯ, ಒನಕೆ ಓಬವ್ವ, ಸುರಪುರದ ರಾಜಾ ವೆಂಕಟಪ್ಪ ನಾಯಕರು ಅವರ ಸಾಧನೆಗಳು ಅಪಾರ. ವಾಲ್ಮೀಕಿ ಜನಾಂಗದ ಪ್ರೀತಿ, ವಿಶ್ವಾಸ, ನಂಬಿಕೆ, ನಿಮ್ಮ ಪ್ರೀತಿಗೆ ನಾನು ಸೋತಿದ್ದೇನೆ. ಇದು ನಿಮ್ಮ ಹೊರಾಟದ ಗೆಲುವು ಎಂದು ಮುಖ್ಯಮಂತ್ರಿ ಹೇಳಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಭೋವಿ ಮಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ, ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ, ಸಚಿವ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಶಾಸಕ ರಾಜುಗೌಡ ಇನ್ನಿತರರು ಪಾಲ್ಗೊಂಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications