ಲೋಕಾಯುಕ್ತ ಹಗರಣ, ಸಿದ್ದರಾಮಯ್ಯ ಹೇಳುವುದೇನು?

ಬೆಳಗಾವಿ, ಜು.02 : ಲೋಕಪಾಲ್ ಮಾದರಿಯಲ್ಲಿಯೇ ಲೋಕಾಯುಕ್ತ ಕಾಯ್ದೆಗೆ ಬದಲಾವಣೆ ತಂದು ಅಗತ್ಯ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಾಯುಕ್ತದಲ್ಲಿನ ಹಗರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿದೆ ಎಂದು ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ ಮೂರನೇ ದಿನದ ಕಲಾಪದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ಮಾಧ್ಯಮಗಳ ವರದಿಯ ಬಗ್ಗೆ ಸದನದಲ್ಲಿ ವಿಶೇಷ ಚರ್ಚೆ ನಡೆಯಿತು. ಚರ್ಚೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಉತ್ತರ ನೀಡಿದರು. [ಲೋಕಾಯುಕ್ತದಲ್ಲೇ ಭ್ರಷ್ಟಾಚಾರ, ಮುಂದೇನು?]

siddaramaiah,

ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ, ಶಾಸಕರಾದ ಕೆ.ಆರ್.ರಮೇಶ್ ಕುಮಾರ್, ವೈ.ಎಸ್.ವಿ ದತ್ತ, ಎನ್. ಚೆಲುವರಾಯ ಸ್ವಾಮಿ ಮುಂತಾದವರು ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. [ಅಶ್ವಿನ್ ರಾವ್ ವಿರುದ್ಧ ಎಫ್ ಐಆರ್]

ಚರ್ಚೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಾಯುಕ್ತ ಸಂಸ್ಥೆಯ ಬಗ್ಗೆ ವಿಧಾನ ಸಭೆಯಲ್ಲಿ ವ್ಯಕ್ತವಾದ ಎಲ್ಲಾ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಲಿಸಿದ್ದು, ಈ ಕುರಿತಂತೆ ತಜ್ಞರ ಅಭಿಪ್ರಾಯ ಪಡೆದು ಸಮಗ್ರ ಬದಲಾವಣೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. [ಲೋಕಾ ಹಗರಣದ ತನಿಖೆಗೆ ಎಸ್ ಐಟಿ]

ಎಸ್‌ಐಟಿ ರಚನೆ ಮಾಡಲಾಗಿದೆ : ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆಗೆ ನಡೆಸಲು ಕಮಲ್ ಪಂತ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ. ಇದರ ವರದಿ ಬಂದ ಬಳಿಕ ಸೂಕ್ತ ಬದಲಾವಣೆ ತರಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. [ಬುಧವಾರದ ಕಲಾಪದ ಮುಖ್ಯಾಂಶಗಳು]

ಹಿಂದೆಯೇ ಪ್ರಸ್ತಾವನೆ ಇತ್ತು : ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು, ಲೋಕಾಯುಕ್ತಕ್ಕೆ ತಿದ್ದುಪಡಿ ತರಲು ಒಂದು ವರ್ಷದ ಹಿಂದೆಯೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಆದರೆ, ಮಾಧ್ಯಮಗಳು ಹಾಗೂ ಸಾರ್ವಜನಿಕ ವಲಯಗಳಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಲು ತಿದ್ದುಪಡಿ ಮಾಡಲಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾದಾಗಿದ್ದರಿಂದ, ಸರ್ಕಾರ ಈ ಬಗ್ಗೆ ಅನಿವಾರ್ಯವಾಗಿ ಮೌನ ವಹಿಸಬೇಕಾಯಿತು ಎಂದು ಸದನಕ್ಕೆ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+