Winter Session: ಉತ್ತರ ಕರ್ನಾಟಕ ಸಮಸ್ಯೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧ: ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 16: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರನ್ನು ಪ್ರಶ್ನಿಸಿದರು.

Government ready to give answers on North Karnataka issue and Waqf Board Siddaramaiah

ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ವನ್ನು ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ವಿಜಯೇಂದ್ರ ಅವರ ಮೇಲೆ ಮಾಡಿರುವ ಆರೋಪ ಸುಳ್ಳು: ಛಲವಾದಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನೀವು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ಮೇಲೆ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ನಿರಾಧಾರವಾಗಿವೆ. ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿಯವರ ಹೇಳಿಕೆಯ ಪ್ರಕಾರ, ವಿಜಯೇಂದ್ರ ಅವರು ಯಾವುದೇ ಹಣದ ಬೇಡಿಕೆ ಇಟ್ಟಿಲ್ಲ. ಹಿಂದಿನ ನಿಮ್ಮ ಕಾಂಗ್ರೆಸ್‌ ಸರ್ಕಾರದ ಕಾಲದಲ್ಲೇ ಈ ಪ್ರಕರಣವನ್ನು ಸಮರ್ಥವಾಗಿ ಮುಚ್ಚಿಹಾಕಲು ಕಾಂಗ್ರೆಸ್‌ನ ಕೆಲವರು ಕೋಟಿಗಟ್ಟಲೆ ಲಂಚ ನೀಡಲು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ ಎಂದು ವಿಧಾನ ಪರಿಷತ್‌ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ನೀವು ಯಾವ ರೀತಿ ಸತ್ಯವನ್ನು ವಕ್ರ ಮಾಡಿ, ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಯತ್ನಿಸುತ್ತೀರೋ ಅದು ಎಲ್ಲರಿಗೂ ಚೆನ್ನಾಗಿ ಗೊತ್ತಾಗಿದೆ. ನೀವು ರಾಜಕೀಯ ಹಿತಾಸಕ್ತಿಗಳಿಗಾಗಿ ಸುಳ್ಳು ಮತ್ತು ತಪ್ಪಾಗಿ ಪ್ರಚಾರವನ್ನು ಮಾಡುವುದು ನಿಲ್ಲಿಸಿ. ನೀವು ಸಿಬಿಐ ತನಿಖೆಗೆ ಈ ಪ್ರಕರಣವನ್ನು ವಹಿಸಿದರೆ ನಿಮ್ಮ ಕಪಟ ನಾಟಕ ಮತ್ತು ಪ್ರಕರಣದ ಸತ್ಯಾಸತ್ಯತೆ ಹೊರಬರುತ್ತದೆ. ಆಧಾರವಿಲ್ಲದ ಆರೋಪಗಳ ಮೂಲಕ ನಿಮ್ಮ ರಾಜಕೀಯ ಚಾತುರ್ಯವನ್ನು ತೋರಿಸುವ ಬದಲು ನೈತಿಕತೆ ಮತ್ತು ಪ್ರಾಮಾಣಿಕತೆಗೆ ಆದ್ಯತೆ ನೀಡಿ.

ನೀವು ಹಿಟ್ ಅಂಡ್ ರನ್ ರಾಜಕಾರಣವನ್ನು ಬಿಡಿ. ಇದು ನಿಮಗೆ ಶೋಭೆ ತರುವುದಿಲ್ಲ. ನೀವು ಈಗ ಸತ್ಯವನ್ನು ಅರಿತು ಸಮುದಾಯಗಳ ನಡುವಿನ ಸಾಮರಸ್ಯವನ್ನು ಕಾಪಾಡುವುದು ಬಹಳ ಮುಖ್ಯವಾಗಿದೆ. ಇಲ್ಲವಾದರೆ, ಇತಿಹಾಸವೇ ನಿಮಗೆ ಒಂದು ದಿನ ಕಠಿಣ ಪಾಠ ಕಲಿಸುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+