Kundapur Kannada: ಕುಂದಾಪ್ರ ಭಾಷಾ ಅಭಿವೃದ್ಧಿಗಾಗಿ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು, ಜುಲೈ. 14: ಕರ್ನಾಟಕ ರಾಜ್ಯ ಸರಕಾರವು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಂದ ಕನ್ನಡ ಅಧ್ಯಯನ ಪೀಠವನ್ನು ಸ್ಥಾಪಿಸಲು 50 ಲಕ್ಷ ರೂಪಾಯಿ ಅನುದಾನ ನೀಡಿ ಆದೇಶಿಸಿದೆ. ರಾಜ್ಯ ಸರ್ಕಾರ ಜುಲೈ 11ರಂದು ಈ ಕುರಿತು ಷರತ್ತುಗಳನ್ನು ವಿಧಿಸಿ ಆದೇಶ ಹೊರಡಿಸಿದೆ.
ಎರಡು ವರ್ಷಗಳ ಹಿಂದೆ ಅಂದರೆ, 2022ರ ಮೇ 16ರ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ನಿರ್ಣಯ ಮತ್ತು ಕರ್ನಾಟಕ ರಾಜ್ಯ ಕಾಯಂ ಹಿಂದುಳಿದ ವರ್ಗಗಳ ಆಯೋಗದ ಅಂದಿನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. 2024ರ ಫೆಬ್ರುವರಿ 26ರಂದು ಪತ್ರ ಬರೆದು ಒಂದು ಕೋಟಿ ಐವತ್ತು ಲಕ್ಷ ಬಿಡುಗಡೆ ಮಾಡುವಂತೆ ಕೋರಿದ್ದರು. ಸದ್ಯ ರಾಜ್ಯ ಸರ್ಕಾರ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಂದಾಪುರ ಕನ್ನಡ ಅಧ್ಯಯನ ಪೀಠ ಸ್ಥಾಪನೆಗೆ 50 ಲಕ್ಷ ಬಿಡುಗಡೆ ಮಾಡಿದೆ.

ಆದೇಶ ಪ್ರತಿಯಲ್ಲಿ ಇರುವುದೇನು?
ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕುಂದ ಕನ್ನಡ ಭಾಷೆ ಅಧ್ಯಯನ ಪೀಠ ಸ್ಥಾಪನೆಗೆ ದಿನಾಂಕ:16.05.2022ರಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ವಿಶ್ವವಿದ್ಯಾಲಯದ ಆಂತರಿಕ ಸಂಪನ್ಮೂಲದಿಂದ ಕುಂದ ಕನ್ನಡ ಭಾಷೆ ಅಧ್ಯಯನ ಪೀಠ ಸ್ಥಾಪಿಸಲು ರೂ.25.00ಲಕ್ಷಗಳನ್ನು ಮೀಸಲಿಡಲು ನಿರ್ಣಯಿಸಲಾಗಿರುವುದರಿಂದ ವಿಶ್ವವಿದ್ಯಾಲಯದಲ್ಲಿ ಉದ್ದೇಶಿತ ಅಧ್ಯಯನ ಪೀಠ ಸ್ಥಾಪಿಸಲು ಅನುಮೋದನೆ ನೀಡಲು ಕುಲಸಚಿವರು, ಮಂಗಳೂರು ವಿಶ್ವವಿದ್ಯಾಲಯ ಇವರು ಕೋರಿರುತ್ತಾರೆ.
ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಡಿ ಬರುವ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಇರಬೇಕಾದ ಪೀಠಗಳ ಸಂಖ್ಯೆಯನ್ನು ನಿರ್ಧರಿಸುವ ಸಂಬಂಧ ಕಾರ್ಯನೀತಿಯನ್ನು ರೂಪಿಸುವ ಬಗ್ಗೆ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ತಿಳಿಸಲಾಗಿದೆ.
ಮೇಲೆ ಕ್ರಮಾಂಕ (1)ರಲ್ಲಿ ಓದಲಾದ ಪತ್ರದಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಈ ಸಂಬಂಧ ತಜ್ಞರ ಸಮಿತಿಯನ್ನು ರಚಿಸಿ, ಅವರಿಂದ ವರದಿಯನ್ನು ಪಡೆದಿದ್ದು, ಕಾರ್ಯನಿರ್ವಾಹಕ ಸಮಿತಿ ಸಭೆಯಲ್ಲಿ ಸದರಿ ವಿಷಯವನ್ನು ಮುಂದಿನ ಸಾಮಾನ್ಯ ಸಭೆಯಲ್ಲಿ ಮಂಡಿಸಲು ತೀರ್ಮಾನಿಸಲಾಗಿರುವುದರಿಂದ ಹಾಗೂ ಪ್ರಸ್ತುತ ಸರ್ಕಾರದ ಹಂತದಲ್ಲಿ ಪರಿಷತ್ತಿನ ಸಾಮಾನ್ಯ ಸಭೆಯ ಸಮಿತಿ ರಚನೆಯಾಗುತ್ತಿರುವುದರಿಂದ ಸಾಮಾನ್ಯ ಸಭೆಯ ಅನುಮೋದನೆ ಪಡೆದು ತರುವಾಯದಲ್ಲಿ ವರದಿ ಮಾಡಿರುತ್ತಾರೆ.

ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿಯಲ್ಲಿ 2024-25ನೇ ಸಾಲಿನಲ್ಲಿ ಲೆಕ್ಕ ಶೀರ್ಷಿಕೆ: 2202-03-102-0-52-ವಿಶ್ವವಿದ್ಯಾಲಯಗಳ ಅಭಿವೃದ್ಧಿ ಅನುದಾನ-103ರಡಿ ಒದಗಿಸಲಾದ ರೂ.850.00ಲಕ್ಷಗಳಲ್ಲಿ ರೂ.50.00ಲಕ್ಷಗಳನ್ನು ಮಂಗಳೂರು ವಿಶ್ವವಿದ್ಯಾಲಯದಲ್ಲಿ "ಕುಂದ ಕನ್ನಡ ಭಾಷೆಯ ಅಧ್ಯಯನ ಪೀಠ" ಸ್ನಾಪನೆಗೆ ಬಿಡುಗಡೆಗೊಳಿಸುವಂತೆ ತಿಳಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಲೆಕ್ಕ ಶೀರ್ಷಿಕೆ 2202-03-102-0-52-2 - ವಿಶ್ವವಿದ್ಯಾಲಯ ಅಭಿವೃದ್ಧಿ ಅದ್ಯಾಯನ 103ರ ಅಡಿಯಲ್ಲಿ ಒದಗಿಸಲಾದ ರೂ.850.00ಲಕ್ಷಗಳಲ್ಲಿ ರೂ.50.00ಲಕ್ಷಗಳನ್ನು ಮಂಗಳೂರು ವಿಶ್ವವಿದ್ಯಾಲಯದಲ್ಲಿ 'ಕುಂದ ಕನ್ನಡ ಭಾಷೆಯ ಅಧ್ಯಯನ ಪೀಠ" ಸ್ಥಾಪಿಸಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಬಿಡುಗಡೆಗೊಳಿಸಿ ಆದೇಶಿಸಿದೆ.
ಕುಂದ ಕನ್ನಡ ಭಾಷೆ ಅಧ್ಯಯನ ಪೀಠ ಸ್ಥಾಪಿಸಲು ಷರತ್ತುಗಳು
1. ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಡಿ ಬರುವ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಇರಬೇಕಾದ ಪೀಠಗಳ ಸಂಖ್ಯೆಯನ್ನು ನಿರ್ಧರಿಸುವ ಸಂಬಂಧ ಕಾರ್ಯನೀತಿಯನ್ನು ರೂಪಿಸುವ ಬಗ್ಗೆ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ತಿಳಿಸಲಾಗಿದ್ದು, ಪೀಠ ಸ್ಥಾಪನೆ ಬಗ್ಗೆ, ಸದರಿ ಸಂಸ್ಥೆಯು ನೀಡುವ ವರದಿಯಂತೆ ಅನುಷ್ಠಾನ/ಸ್ಥಾಪಿಸುವ ವರತ್ತಿಗೆ ಒಳಪಟ್ಟಿರುತ್ತದೆ.
2. ಆರ್ಥಿಕ ಮಿತವ್ಯಯ ಆದೇಶ ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ಹೊರಡಿಸುವ ಆದೇಶಗಳನ್ನು ಪಾಲಿಸುವುದು.
3. ಅನುದಾನ ಬಿಡುಗಡೆಗೆ ಸಂಬಂಧಿತ ಬಿಲ್ಲನ್ನು ಸಂಬಂಧಿತ ಕಾಲೇಜು ಶಿಕ್ಷಣ ಇಲಾಖೆಯ ಆಯಾ ಪ್ರಾದೇಶಿಕ ಜಂಟಿ ನಿರ್ದೇಶಕರುಗಳು, ಸಲ್ಲಿಸಿದ ಬಿಲ್ಲುಗಳಿಗೆ ಮೇಲು ರುಜು ಮಾಡಲು ಸರ್ಕಾರದ ಉಪ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಇವರನ್ನು ಅಧಿಕೃತಗೊಳಿಸಲಾಗಿದೆ. ಸದರಿ ಸಹಾಯಾನುದಾನದ ಬಿಲ್ಲುಗಳನ್ನು ಸರ್ಕಾರದ ಆದೇಶ ಸಂಖ್ಯೆ ಎಫ್4 2 ಎಫ್‌ಆರ್‌ಸಿ 2003, ದಿನಾಂಕ:27.12.2004ರ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ಅನುದಾನದ ಬಿಲ್ಲುಗಳಿಗೆ ಕಾಲೇಜು ಶಿಕ್ಷಣ ಇಲಾಖೆಯ ಸಂಬಂಧಿತ ಪ್ರಾದೇಶಿಕ ಜಂಟಿ ನಿರ್ದೇಶಕರುಗಳು ಸರ್ಕಾರದ ಉಪ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಇವರ ಮೇಲು ರುಜುವಿನೊಂದಿಗೆ ರಾಜ್ಯ ಹುಜೂರು ಖಜಾನಾಧಿಕಾರಿಗಳಿಗೆ/ಜಿಲ್ಲಾ ಖಜಾನಾಧಿಕಾರಿಗಳಿಗೆ ಕಳುಹಿಸಿ ಚೆಕನ್ನು ವಡೆದು ಸಂಬಂಧಿತ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳಿಗೆ ಕಳುಹಿಸತಕ್ಕದ್ದು.
4. ಸಂಬಂಧಿತ ವಿಶ್ವವಿದ್ಯಾಲಯಕ್ಕೆ 2024-25ನೇ ಸಾಲಿಗೆ ಬಿಡುಗಡೆ ಮಾಡಲಾದ ಅನುದಾನದ ಮೊತ್ತದ ಓಚರ್ ಸಂಖ್ಯೆ ಇತ್ಯಾದಿ ವಿವರಗಳನ್ನು ಸಂಬಂಧಿಸಿದ ಖಜಾನೆಯಿಂದ ಪಡೆದು ಮಹಾಲೇಖಪಾಲರ ಕಛೇರಿಯ ಅಂಕಿಗಳೊಂದಿಗೆ ಮರು ಹೊಂದಾಣಿಕೆ ಮಾಡಿ ರೆಕಾನ್ನಿಲಿಯೇಷನ್ (Reconciliation) ಪ್ರಮಾಣ ಪತ್ರವನ್ನು ಸಲ್ಲಿಸುವುದು ಇದಕ್ಕೆ ಸಂಬಂಧಿಸಿದ ಯಾವುದೇ ಲೋಪದೋಷಗಳಿದ್ದಲ್ಲಿ ಸರಿಪಡಿಸಿಕೊಳ್ಳತಕ್ಕದ್ದು, ಅಲ್ಲದೆ ಮಹಾಲೇಖಪಾಲರು ವೆಚ್ಚಗಳನ್ನು ಪ್ರವರ್ಗೀಕರಿಸುವಾಗ ಮತ್ತು ಮರುಹೊಂದಾಣಿಕೆ ಮಾಡುವ ಸಂದರ್ಭಗಳಲ್ಲಿ ಸಂಬಂಧಿಸಿದ ವಿಶ್ವವಿದ್ಯಾಲಯವು ಪರಿಶೀಲಿಸುವುದು.
5. ಸದರಿ ಅನುದಾನವನ್ನು ಬಿಡುಗಡೆ ಮಾಡಿರುವ ಉದ್ದೇಶಕ್ಕಾಗಿ ಮಾತ್ರ ನಿಯಮಾನುಸಾರ ಅರ್ಹತೆಯಂತೆ ಬಳಸತಕ್ಕದ್ದು. ಅನುದಾನವನ್ನು ಬೇರೆ ಯಾವುದ ಉದ್ದೇಶಪ್ಪ/ಉಪಯೋಗಕ್ಕೆ ಬಳಸಿದ್ದಲ್ಲಿ ನೇರವಾಗಿ ಸಂಬಂಧಪಟ್ಟ ಕುಲಸಚಿವರು (ಆಡಳಿತ) (Registrar, Administration) ಹಾಗೂ ಸಂಬಂಧಪಟ್ಟ ಆರ್ಥಿಕ ಅಧಿಕಾರಿ (Finance Officer) ಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಹಾಗೂ ಅವರಿಂದಲೇ ಮೊತ್ತವನ್ನು ವಸೂಲಾತಿ ಮಾಡಲಾಗುವುದು.
6. ಅನುದಾನದ ಬಳಕೆಯಲ್ಲಿ ಯಾವುದೇ ರೀತಿಯ ಪುನರಾವರ್ತನ ಆಗಬಾರದು. ವಿವಿಧ ಕಂತುಗಳಲ್ಲಿ ಬಿಡುಗಡೆ ಆಗಿರುವ ಅನುದಾನವನ್ನು ಹಾಗೂ ಬಳಕೆಯ ವಿವರಗಳನ್ನು ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಕಡ್ಡಾಯವಾಗಿ ಕುಲಸಚಿವರು (ಆಡಳಿತ) ಅಳವಡಿಸತಕ್ಕದ್ದು.
7. ನಿಗಧಿತ ಈ ಅನುದಾನವನ್ನು ಬೇರೆ ಕಾರ್ಯಕ್ರಮಕ್ಕೆ ಬಳಸಿಕೊಂಡಲ್ಲಿ ದುರ್ಬಳಕೆ ಮಾಡಿಕೊಂಡಲ್ಲಿ ಹಾಗೂ ಅಗತ್ಯಕ್ಕಿಂತ ಹೆಚ್ಚುವರಿ ಸಳದಲ್ಲಿ ನಿಯಮಾನುಸಾರ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಇವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
8. ಅನುದಾನ ಬಳಕೆ ಮಾಡಲು ಸಾಧ್ಯವಾಗದಿದ್ದಲ್ಲಿ ನಿಯಮಾನುಸಾರ ಸರ್ಕಾರಕ್ಕೆ ಅಧ್ಯರ್ಪಣೆ ಮಾಡತಕ್ಕದು.
9. ಅನುದಾನದ ಬಳಕಗೆ ನಿಗಧಿತ ನಮೂನೆಯಲ್ಲಿ ಬಳಕೆ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
ಈ ಆದೇಶವನ್ನು ಸರ್ಕಾರದ ಆದೇಶ ಸಂಖ್ಯೆ ಎಫ್‌ಡಿ 02 ಟಿಎಫ್‌ಪಿ 2024, ದಿನಾಂಕ: 01.04.2024ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರತ್ಯಾಯೋಜಿಸಿರುವ ಆರ್ಥಿಕ ಅಧಿಕಾರದನ್ವಯ ಹಾಗೂ ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ: ಆಇ 222 ವೆಚ್ಚ-8/2024, ದಿನಾಂಕ: 10.06.2024ರಲ್ಲಿನ ಸಹಮತಿಯಂತೆ ಹೊರಡಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications