ತಮಿಳುನಾಡಿಗೆ ನೀರು ಬಿಡುವಂತೆ ಸಿಎಂ ಕುಮಾರಸ್ವಾಮಿ ಸೂಚನೆ
ಬೆಂಗಳೂರು, ಜೂನ್ 16: ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆಯಾಗಿರುವ ಕಾರಣ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿನ್ನೆಯೇ (ಜೂನ್ 16) ಸೂಚಿಸಿದ್ದಾರೆ.
ಕುಮಾರಸ್ವಾಮಿ ಅವರು 20 ಸಾವಿರ ಕ್ಯೂಸೆಕ್ ನೀರನ್ನು ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಬಿಡಲು ಸೂಚಿಸಿದ್ದು, ಅದರಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿದ್ದಾರೆ.
ಈ ಬಾರಿ ಮುಂಗಾರು ಅತ್ಯುತ್ತಮವಾಗಿ ಆಗಿರುವುದರಿಂದ ತಮಿಳುನಾಡು ಹಾಗೂ ಕರ್ನಾಟಕದ ಮಧ್ಯೆ ನೀರು ಹಂಚಿಕೆ ಸುಗಮವಾಗಲಿದೆ ಎಂಬ ಅಭಿಪ್ರಾಯವನ್ನು ಕುಮಾರಸ್ವಾಮಿ ಅವರು ಹಂಚಿಕೊಂಡಿದ್ದಾರೆ.

ಮುಂಗಾರು ಇದೇ ರೀತಿ ಮುಂದುವರೆದರೆ ಕಾವೇರಿ ನದಿ ನೀರು ಪ್ರಾಧಿಕಾರದ ಆಜ್ಞೆಯಂತೆ ತಮಿಳುನಾಡಿಗೆ 10 ಕ್ಯೂಸೆಕ್ ನೀರನ್ನು ಸುಲಭವಾಗಿ ನಾವು ಕೊಡಬಹುದು ಎಂಬ ಆಶಾಭಾವವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.
2,284 ಅಡಿಗಳಷ್ಟು ಎತ್ತರವಿರುವ ಕಬಿನಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 2,280 ಇದ್ದು ಜಲಾಶಯ ಬಹುತೇಕ ಭರ್ತಿಯಾಗಿದೆ. ನಿನ್ನೆ ಒಟ್ಟು 35000 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ.
ತಮಿಳುನಾಡಿಗೆ ನೀರು ಬಿಟ್ಟಿರುವ ಬಗ್ಗೆ ಇತ್ತೀಚೆಗಷ್ಟೆ ಕುಮಾರಸ್ವಾಮಿ ಅವರನ್ನು ಭೇಟಿ ಆಗಿದ್ದ ಕಮಲ್ ಹಾಸನ್ ಟ್ವೀಟ್ ಮಾಡಿದ್ದು, ಧನ್ಯವಾದಗಳನ್ನು ತಿಳಿಸಿದ್ದಾರೆ. ಎರಡೂ ರಾಜ್ಯಗಳ ನಡುವೆ ಇಂತಹಾ ಅನೇಕ ಮುಚ್ಚಿದ ಬಾಗಿಲುಗಳು ತೆರೆದುಕೊಳ್ಳಬೇಕಿದೆ ಎಂದಿದ್ದಾರೆ.












Click it and Unblock the Notifications