ಸರ್ಕಾರಿ ಶಾಲಾ ಮಕ್ಕಳ ಶೂ ಮತ್ತು ಸಾಕ್ಸ್ ಖರೀದಿಗೆ ಹಣ ಬಿಡುಗಡೆ: ಸರ್ಕಾರ ಹಾಕಿರುವ ಷರತ್ತುಗಳೇನು?
ಬೆಂಗಳೂರು, ಜೂನ್. 01: 2024-25ನೇ ಸಾಲಿಗೆ ಮಕ್ಕಳಿಗೆ ಶಾಲೆಗಳು ಆರಂಭವಾಗಿವೆ. ಇದರ ಬೆನ್ನಲ್ಲೇ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ ಖರೀದಿ ಮಾಡುವ ಬಗ್ಗೆ ಸರ್ಕಾರ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 42.65 ಲಕ್ಷ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಒಟ್ಟು ರೂ.121.00 ಕೋಟಿಗಳ ವೆಚ್ಚದಲ್ಲಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಪಾದರಕ್ಷೆ ವಿತರಿಸಬೇಕಾಗಿದೆ.

ಶೂ ಮತ್ತು ಸಾಕ್ಸ್ ಖರೀದಿಗೆ ಇರುವ ನಿಯಮ ಮತ್ತು ಷರತ್ತುಗಳು
1. ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಪಾದರಕ್ಷೆಯನ್ನು ಸ್ಥಳೀಯವಾಗಿ ಖರೀದಿಸಿ, ವಿತರಣೆ ಮಾಡುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ)ಗೆ ವಹಿಸುವುದು.
2. ಒಂದು ಜೊತೆ ಕಪ್ಪು ಬಣ್ಣದ ಶೂ ಗಳನ್ನು ಹಾಗೂ ಎರಡು ಜೊತೆ ಬಿಳಿ ಬಣ್ಣದ ಸಾಕ್ಸ್‌ಗಳನ್ನು ಖರೀದಿಸಿ ವಿತರಿಸುವುದು. ಸ್ಥಳೀಯ ವಾತಾವರಣಕ್ಕೆ ಅನುಗುಣವಾಗಿ ಶೂ ಮತ್ತು ಸಾಕ್ಸ್‌ಗಳ ಬದಲಾಗಿ ಪಾದರಕ್ಷೆಗಳನ್ನು ಖರೀದಿಸಿ ವಿತರಿಸುವುದು.
3. ಶೂ ಮತ್ತು ಸಾಕ್ಸ್‌ಗಳ ಖರೀದಿ ಪ್ರಕ್ರಿಯೆ ಪ್ರಾರಂಭಿಸುವ ಮುನ್ನ ಎಸ್.ಡಿ.ಎಂ.ಸಿ.ಯು ಕೆಳಕಂಡಂತೆ ಖರೀದಿ ಸಮಿತಿಯನ್ನು ರಚಿಸತಕ್ಕದ್ದು.
ಶೂ ಮತ್ತು ಸಾಕ್ಸ್ ಅಥವಾ ಪಾದರಕ್ಷೆ ಖರೀದಿ ಸಮಿತಿ
* ಎಸ್.ಡಿ.ಎಂ.ಸಿ. ಅಧ್ಯಕ್ಷರು (ಸಮಿತಿಯ ಅಧ್ಯಕ್ಷರು)
* ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರು (ಸದಸ್ಯ ಕಾರ್ಯದರ್ಶಿ)
* ಸದಸ್ಯರಾಗಿ ಎಸ್.ಡಿ.ಎಂ.ಸಿ. ನಾಮನಿರ್ದೇಶಿತ ಮೂವರು ಸದಸ್ಯರು ಇರಬೇಕು. ಅದರಲ್ಲಿ ಇಬ್ಬರು ಮಹಿಳಾ ಸದಸ್ಯರು ಕಡ್ಡಾಯವಾಗಿ ಇರುವುದು.
4. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಸಭೆ ನಡೆಸಿ ಶೂ ಮತ್ತು ಸಾಕ್ಸ್ ಅಥವಾ ಪಾದರಕ್ಷೆ ಖರೀದಿ ಸಮಿತಿಯ ಸದಸ್ಯರನ್ನು ಆಯ್ಕೆಗೊಳಿಸಬೇಕು. ಈ ಉದ್ದೇಶಕ್ಕಾಗಿ ನಡೆಸುವ ಎಸ್.ಡಿ.ಎಂ.ಸಿ. ಸಭೆಯಲ್ಲಿ ಕನಿಷ್ಟ ಅರ್ಧದಷ್ಟು ಸದಸ್ಯರು ಹಾಜರಿರತಕ್ಕದ್ದು ಹಾಗೂ ಸಮಿತಿಯ ನಡಾವಳಿಯನ್ನು ವಲಯ ಸಂಪನ್ಮೂಲ ವ್ಯಕ್ತಿಗಳು ಅಥವಾ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು (ಬಿ.ಆರ್.ಪಿ ಅಥವಾ ಸಿ.ಆರ್.ಪಿ) ಇಲಾಖೆಯ ಅಂತರ್ಜಾಲ ತಾಣದಲ್ಲಿ ದಾಖಲಿಸತಕ್ಕದ್ದು.

5. ಹೆಚ್ಚಿನ ಶಾಲೆಗಳಲ್ಲಿ ಖರೀದಿ ವೆಚ್ಚವು ಐದು ಲಕ್ಷಕ್ಕಿಂತ ಕಡಿಮೆ ಆಗುವುದರಿಂದ ಅಂತಹ ಶಾಲೆಗಳು ಮೂರು ಸಂಸ್ಥೆಗಳಿಂದ ಕೊಟೇಶನ್ ಪಡೆದು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮದ ಪ್ರಕಾರವಾಗಿ (ಕೆ.ಟಿ.ಟಿ.ಪಿ ಆಕ್ಟ್ 1999) ಖರೀದಿ ಪ್ರಕ್ರಿಯೆಯನ್ನು ನಿರ್ವಹಿಸುವುದು. ಕನಿಷ್ಠ ಮೂರು ಸಂಸ್ಥೆಗಳಿಂದ ದರಪಟ್ಟಿಗಳನ್ನು ಹೊಂದಿರಲೇಬೇಕು. ಖರೀದಿ ಮಾಡುವಂತಹ ಸಂಸ್ಥೆಯು ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನೋಂದಣಿಯಾಗಿರಬೇಕು ಹಾಗೂ ಜಿಎಸ್‌ಟಿ ಸಂಖ್ಯೆ ಹೊಂದಿರಬೇಕು.
6. ಶೂ ಗಳ ಮೇಲ್ಪದರು ಪಾಲಿವಿನೈಲ್ (ಪಿ.ವಿ.ಸಿ) ಕೋಟೆಡ್ ವಿಸ್ಕೋಸ್/ಪಾಲಿಯೆಸ್ಟರ್/ ಪಾಲಿಯೆಸ್ಟರ್ ಕಾಟನ್ ಫ್ಯಾಬ್ರಿಕ್ 1.5 ಎಂಎಂ ಹೊಂದಿದ ಮತ್ತು ಎಕ್ಸೆಂಡೆಡ್ ಪಾಲಿವಿನೈಲ್ ಕ್ಲೋರೈಡ್ (ಪಿ.ವಿ.ಸಿ] ಸೋಲ್ ಹೊಂದಿದ ಹಾಗೂ ಪಾದರಕ್ಷೆಯ ಒಳಪದರು (Insock) ಬಟ್ಟೆ/ಫ್ಯಾಬ್ರಿಕ್‌ನಿಂದ ಕೂಡಿರುವುದನ್ನು (ಅಂದಾಜು 0.8 ಎಂ.ಎಂ ದಪ್ಪ) ಖರೀದಿಸುವುದು. ಎಸ್.ಡಿ.ಎಂ.ಸಿ.ಗಳು ಪಾದರಕ್ಷೆಗಳನ್ನು ಖರೀದಿಸಲು ತೀರ್ಮಾನಿಸಿದಲ್ಲಿ ವೆಲ್‌ಕ್ರೋ ಪಾದರಕ್ಷೆಗಳನ್ನು (Velcro Sandals) ಮತ್ತು ಲೈನಿಂಗ್ ಸಾಕ್ಸ್ ಖರೀದಿಸಿ ವಿತರಿಸುವುದು.
7. ಪ್ರತಿಯೊಂದು ತಾಲ್ಲೂಕಿನಲ್ಲಿ ಕನಿಷ್ಠ ಶೇ.5ರಷ್ಟು ಶಾಲೆಗಳಲ್ಲಿನ ಶೂ ಮತ್ತು ಸಾಕ್ಸ್ ಗುಣಮಟ್ಟವನ್ನು ಯಾದೃಚ್ಚಿಕವಾಗಿ ಪರೀಕ್ಷಿಸಲು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಒಂದು ಸಮಿತಿಯನ್ನು ರಚಿಸಲು ಕ್ರಮಕೈಗೊಳ್ಳುವುದು.
8. ಹಿಂದಿನ ಸಾಲುಗಳಲ್ಲಿ ಕಳಪೆ ಗುಣಮಟ್ಟದ ಮತ್ತು ನಕಲಿ ಬ್ರಾಂಡೆಡ್ ಶೂ ಮತ್ತು ಸಾಕ್ಸ್ ಸರಬರಾಜಾಗಿರುವ ಬಗ್ಗೆ ಸರ್ಕಾರದ ಹಂತದಲ್ಲಿ ಸಾಕಷ್ಟು ದೂರುಗಳು ಸ್ವೀಕೃತವಾಗಿರುತ್ತವೆ. ಆದ್ದರಿಂದ ಪ್ರಸ್ತುತ ಸಾಲಿನಲ್ಲಿ ಜಾಗರೂಕತೆಯಿಂದ ಪರಿಶೀಲಿಸಿ, ರಾಷ್ಟ್ರಮಟ್ಟದ ಹೆಸರಾಂತ ಕಂಪನಿಗಳ ಪ್ರತಿಷ್ಠಿತ ಬ್ರಾಂಡ್‌ಗಳ ಅಧಿಕೃತ ಮಾರಾಟಗಾರರಿಂದ ISO CERTIFIED ಶೂ ಮತ್ತು ಸಾಕ್ಸ್ ಅಥವಾ ಪಾದರಕ್ಷೆಗಳನ್ನು ಖರೀದಿಸತಕ್ಕದ್ದು.
ಅನಧಿಕೃತ ಮಾರಾಟಗಾರರಿಂದ ನಕಲಿ ಬ್ರಾಂಡ್/ಕಳಪೆ ಗುಣಮಟ್ಟದ ಶೂ ಮತ್ತು ಸಾಕ್ಸ್ ಅಥವಾ ಪಾದರಕ್ಷೆಗಳನ್ನು ಖರೀದಿಸಿರುವ ಬಗ್ಗೆ ದೂರುಗಳು ವರದಿಯಾದಲ್ಲಿ ತಪಾಸಣೆಗೆ ಒಳಪಡಿಸಿ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರು/ಕ್ಷೇತ್ರ ಶಿಕ್ಷಣಾಧಿಕಾರಿಗಳು/ಉಪನಿರ್ದೇಶಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವುದು.
9, ಶೂ ಮತ್ತು ಸಾಕ್ಸ್ಗಳನ್ನು ವಿದ್ಯಾರ್ಥಿಗಳ ಹಾಜರಾತಿಯನ್ನು ಗಮನಿಸಿ. ಅದಕ್ಕೆ ತಕ್ಕಂತೆ ಎಸ್.ಡಿ.ಎಂ.ಸಿ ಅನುಮೋದಿತ ಸಮಿತಿಯು ಸ್ಥಳೀಯವಾಗಿ (ತಾಲ್ಲೂಕು/ಜಿಲ್ಲಾ) ಖರೀದಿಸುವುದು. ವಲಯ/ಕ್ಲಸ್ಟರ್ ಅಥವಾ ಜಿಲ್ಲಾ ಮಟ್ಟದಲ್ಲಿ ಕೇಂದ್ರೀಕೃತ ವ್ಯವಸ್ಥೆಯಡಿ ಖರೀದಿ ಪ್ರಕ್ರಿಯೆ ನಡೆಸುವುದನ್ನು ನಿರ್ದಿಷ್ಟವಾಗಿ ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ ಕೇಂದ್ರೀಕೃತ ಖರೀದಿ ಪ್ರಕ್ರಿಯೆ ನಡೆಸತಕ್ಕದ್ದಲ್ಲ.
10. ಶೂ ಮತ್ತು ಸಾಕ್ಸ್ ಅಥವಾ ಪಾದರಕ್ಷೆ ಖರೀದಿಸುವ ಶಾಲೆಗಳು/ಶಾಲಾ ಖರೀದಿ ಸಮಿತಿಯು ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಹಾಗೂ ಅದರಡಿಯಲ್ಲಿ ಹೊರಡಿಸಲಾದ ನಿಯಮಗಳನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.
11. 2024-25ನೇ ಸಾಲಿನಲ್ಲಿ ಈ ಕೆಳಕಂಡ ದರದಲ್ಲಿ ಎಸ್.ಡಿ.ಎಂ.ಸಿಗಳು ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಅಥವಾ ಪಾದರಕ್ಷೆಗಳನ್ನು ಖರೀದಿಸುವುದು. ಅಗತ್ಯವಾದ ಅನುದಾನಗಳನ್ನು ಎಸ್.ಡಿ.ಎಂ.ಸಿ.ಗಳ ಜಂಟಿ ಬ್ಯಾಂಕ್ ಖಾತೆಗೆ ಈ ಕಚೇರಿಯಿಂದ ಬಿಡುಗಡೆ ಮಾಡಲಾಗುವುದು.
ಅ) 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ : ತಲಾ ರೂ. 265/-
ಆ) 6 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ : ತಲಾ ರೂ. 295/-
ಇ) 9 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ : ತಲಾ ರೂ. 325/-
ಆದಾಗ್ಯೂ, ಸೇವಾ ದೃಷ್ಟಿಯಿಂದ ದಾನಿಗಳು, ಖಾಸಗಿ ಸಂಸ್ಥೆಗಳು ಈ ಉದ್ದೇಶಕ್ಕಾಗಿ ಹೆಚ್ಚುವರಿ ಹಣ ನೀಡಿದಲ್ಲಿ, ಇದನ್ನೂ ಬಳಸಿಕೊಂಡು ಇನ್ನೂ ಉತ್ತಮ ಗುಣಮಟ್ಟದ ಶೂ ಮತ್ತು ಸಾಕ್ಸ್ಗಳನ್ನು ಖರೀದಿಸಿ ವಿತರಿಸಬಹುದು.
12. ಎಸ್.ಡಿ.ಎಂ.ಸಿ.ಯವರು ವಿದ್ಯಾರ್ಥಿಗಳ ಪಾದದ ಅಳತೆ ಪಡೆದು ನೋಂದಾಯಿತ ವಿತರಕರಿಂದ ದರಪಟ್ಟಿ ಪಡೆದು, ಗುಣಮಟ್ಟದ ಪಾದರಕ್ಷೆಗಳನ್ನು ಖರೀದಿಸಲು ಕ್ರಮ ವಹಿಸುವುದು. ಯಾವುದೇ ಕಾರಣಕ್ಕೂ ಖರೀದಿ ಪ್ರಕ್ರಿಯೆಯನ್ನು ವಿಳಂಬ ಮಾಡತಕ್ಕದ್ದಲ್ಲ.
13. ನಿಯಮಾನುಸಾರ ಖರೀದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಖರೀದಿ ಬಳಕೆ ಪ್ರಮಾಣ ಪತ್ರವನ್ನು ಮತ್ತು ಖರೀದಿ ಸ್ವೀಕೃತಿಗಳನ್ನು ಸಂಬಂಧಿತ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಒದಗಿಸುವುದು ಮತ್ತು ಈ ವೆಚ್ಚಗಳನ್ನು ಆಡಿಟ್‌ಗೆ ಒಳಪಡಿಸುವುದು.
14. ಸಂಬಂಧಿತ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು ಕಾರ್ಯಕ್ರಮದ ಅನುಷ್ಠಾನ ಮೇಲುಸ್ತುವಾರಿ ನೋಡಿಕೊಳ್ಳುವುದು. ಗುಣಮಟ್ಟದ ಶೂ ಮತ್ತು ಸಾಕ್ಸ್ ಅಥವಾ ಪಾದರಕ್ಷೆಗಳು ಖರೀದಿಯಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಈ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು. ಆಯಾ ತಾಲ್ಲೂಕು ಮತ್ತು ಜಿಲ್ಲೆಯ ಶಾಲಾವಾರು ಬಳಕೆ ಪ್ರಮಾಣ ಪತ್ರಗಳನ್ನು, ಪೂರ್ಣ ಕ್ರೋಢೀಕೃತ ವರದಿಯೊಂದಿಗೆ ನಿಗದಿತ ಸಮಯದೊಳಗೆ ಈ ಕಛೇರಿಗೆ ಸಲ್ಲಿಸುವುದು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications