ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ನಿಯಮ ತಿದ್ದುಪಡಿಗೆ ಚಿಂತನೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 16: ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನಿಯಮಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯ ಸಚಿವ ಸಂಪುಟದ ಮೂರು ದಶಕಗಳ ಹಳೆಯ ಡಾ. ಸರೋಜಿನಿ ಮಹಿಷಿ ಸಮಿತಿಯ ಶಿಫಾರಸ್ಸನ್ನು ಜಾರಿಗೆ ತರಲು ನಿರ್ಧರಿಸಿದೆ.

ಶಿಫಾರಸಿಗೆ ಇದುವರೆಗೆ ಯಾವುದೇ ಕಾನೂನು ಅಡೆತಡೆಗಳು ಎದುರಾಗಿಲ್ಲ. ಕರ್ನಾಟಕದಲ್ಲಿ ಸ್ಥಾಪನೆ ಮಾಡಿರುವ ಕಂಪೆನಿ, ಕೈಗಾರಿಕೆಗಳು ಸರ್ಕಾರದಿಂದ ಯಾವುದೇ ರೀತಿಯ ರಿಯಾಯಿತಿ ಪಡೆಯುತ್ತಿದ್ದರೆ ಅಲ್ಲಿ ಕನ್ನಡಿಗರಿಗೆ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಮೀಸಲಾತಿ ನೀಡಬೇಕಾಗಿದೆ , ಅದಕ್ಕೆ ಸರ್ಕಾರ ಕಾನೂನಾತ್ಮಕವಾಗಿ ಬಲ ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಜಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಸಂಖ್ಯೆ 1961ಕ್ಕೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸಚಿವ ಸಂಪುಟ ಸಮಿತಿ ಖಾಸಗಿ ಸಂಸ್ಥೆಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳ ನೇಮಕಾತಿಯಲ್ಲಿ ಶೇಕಡಾ 100ರಷ್ಟು ಮೀಸಲಾತಿಯನ್ನು ಕನ್ನಡಿಗರಿಗೆ ನೀಡಬೇಕು ಎಂಬ ಶಿಫಾರಸನ್ನು ಜಾರಿಗೆ ತರಲು ಮುಂದಾಗಿದೆ.

government set to make it law to give Kannadigas priority in private sector jobs

ಸರ್ಕಾರದಿಂದ ಪ್ರೋತ್ಸಾಹ ಧನ, ತೆರಿಗೆ, ವಿದ್ಯುತ್ ದರ ರಿಯಾಯಿತಿ ಪಡೆಯುವ ಕಂಪನಿಗಳಲ್ಲಿ ಹುದ್ದೆಗಳು ಲಭ್ಯವಿದ್ದಲ್ಲಿ ಕನ್ನಡಿಗರಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ಸಿ ಮತ್ತು ಡಿ ದರ್ಜೆ ಕೆಲಸ ಕೊಡಬೇಕಿದೆ. ವಿಕಲಚೇತನರಿಗೆ ಶೇಕಡಾ 5 ರಷ್ಟು ಮೀಸಲಾತಿ ಕಲ್ಪಿಸಲಾಗುವುದು. ಕರ್ನಾಟಕ ಔದ್ಯೋಗಿಕ ಕೈಗಾರಿಕೆ ಉದ್ಯೋಗಗಳ ನಿಯಮಾವಳಿಗಳು ಅನುಮೋದನೆ ನೀಡಲಾಗಿದೆ.

ಪೂರ್ಣ ಪ್ರಮಾಣದ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕೆಂಬ ಪ್ರಯತ್ನಕ್ಕೆ ಪೂರ್ಣ ಸಮ್ಮತಿ ಸಿಗದ ಹಿನ್ನೆಲೆಯಲ್ಲಿ ಆದ್ಯತೆ ಮೇಲೆ ಉದ್ಯೋಗ ಕಲ್ಪಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಆದರೆ ಸರ್ಕಾರದ ಈ ನಿಯಮಗಳಿಂದ ಐಟಿ/ಬಿಟಿ ಮತ್ತು ಇತರ ತಾಂತ್ರಿಕ ವಲಯದ ಸಂಸ್ಥೆಗಳಿಗೆ ವಿನಾಯ್ತಿ ಇದೆ. ಕಂಪೆನಿ ಮತ್ತು ಕೈಗಾರಿಕೆಗಳಲ್ಲಿ ಅವಕಾಶ, ಸಾಧ್ಯತೆ ಮತ್ತು ಹುದ್ದೆಗಳನ್ನು ನೋಡಿಕೊಂಡು ಇದನ್ನು ಕಡ್ಡಾಯವಾಗಿ ಕಾನೂನಾಗಿ ಜಾರಿಗೆ ತರುವ ಬಗ್ಗೆ ನಿರ್ಧರಿಸಲಿರುವುವುದಾಗಿ ತಿಳಿಸಿದರು.

English summary
In a move aimed at Kannadigas residing in the state, the Karnataka cabinet has decided to introduce recommendations made in the Sarojini Mahishi Committee report of 1986, to give 100% reservation for Kannadigas in Group C and D jobs in private establishments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X