ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊರ ರಾಜ್ಯದಲ್ಲಿರುವ ಕರ್ನಾಟಕದ ಕಾರ್ಮಿಕರಿಗಾಗಿ ಸಹಾಯವಾಣಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 30 : ಲಾಕ್ ಡೌನ್‌ನಿಂದಾಗಿ ವಿವಿಧ ಉದ್ಯಮಗಳು ಸ್ಥಗಿತವಾಗಿದೆ. ಹಲವು ಕಾರ್ಮಿಕರು ತಮ್ಮ ಊರಿಗೆ ಮರಳಿದ್ದಾರೆ. ಇನ್ನೂ ಅನೇಕರು ಇರುವಲ್ಲಿಯೇ ಸಿಕ್ಕಿ ಹಾಕಿಕೊಂಡಿದ್ದಾರೆ. ಕೆಲಸವೂ ಇಲ್ಲ, ವೇತನವೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ವಿವಿಧ ರಾಜ್ಯಗಳ ಕಾರ್ಮಿಕರು ಕರ್ನಾಟಕದಲ್ಲಿ ಸಿಲುಕಿಕೊಂಡಿದ್ದಾರೆ. ಹಾಗೆಯೇ ಕರ್ನಾಟಕದ ಕಾರ್ಮಿಕರು ವಿವಿಧ ರಾಜ್ಯಗಳಲ್ಲಿ ಇದ್ದಾರೆ. ಕರ್ನಾಟಕದ ಕಾರ್ಮಿಕರ ಸಹಾಯಕ್ಕಾಗಿ ಸರ್ಕಾರ ಸಹಾಯವಾಣಿ ಆರಂಭಿಸಿದೆ.

ವೇತನ ಕಡಿತ, ಕೆಲಸದಿಂದ ಕಿತ್ತು ಹಾಕಿದರೆ ಕಾರ್ಮಿಕರು ದೂರು ಕೊಡಿ ವೇತನ ಕಡಿತ, ಕೆಲಸದಿಂದ ಕಿತ್ತು ಹಾಕಿದರೆ ಕಾರ್ಮಿಕರು ದೂರು ಕೊಡಿ

ಈಗ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು ತವರು ರಾಜ್ಯಕ್ಕೆ ವಾಪಸ್ ಆಗಲು ಅನುಮಿತಿ ನೀಡಿದೆ. ವೈದ್ಯಕೀಯ ಪರೀಕ್ಷೆ ಮುಗಿಸಿಕೊಂಡು ರಾಜ್ಯ ಮಾಡುವ ಸಾರಿಗೆ ವ್ಯವಸ್ಥೆ ಮೂಲಕ ಕಾರ್ಮಿಕರು ಪ್ರಯಾಣ ಮಾಡಬಹುದಾಗಿದೆ.

ವಲಸೆ ಕಾರ್ಮಿಕರು ಊರಿಗೆ ಹೋಗಲು ಮಹಾರಾಷ್ಟ್ರ ಸರ್ಕಾರ ಅನುಮತಿ ವಲಸೆ ಕಾರ್ಮಿಕರು ಊರಿಗೆ ಹೋಗಲು ಮಹಾರಾಷ್ಟ್ರ ಸರ್ಕಾರ ಅನುಮತಿ

Government Set Up Helpline For Migrant Workers

ಕರ್ನಾಟಕ ಸರ್ಕಾರ ಹೊರ ರಾಜ್ಯದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗಾಗಿ ಅವರಿಗೆ ಊಟ, ಔಷಧಿ ಸೇರಿದಂತೆ ಅಗತ್ಯ ಸೇವೆಗಳನ್ನು ಪೂರೈಕೆ ಮಾಡಲು ಸಹಾಯವಾಣಿಯನ್ನು ಆರಂಭಿಸಿದೆ. ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರು ಈ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.

ನಡೆದುಕೊಂಡೆ ಊರ ಕಡೆ ಮುಖ ಮಾಡಿದ ವಲಸೆ ಕಾರ್ಮಿಕರು ನಡೆದುಕೊಂಡೆ ಊರ ಕಡೆ ಮುಖ ಮಾಡಿದ ವಲಸೆ ಕಾರ್ಮಿಕರು

ಕಾರ್ಮಿಕರು ಕರೆ ಮಾಡಬೇಕಾದ ನಂಬರ್ 080-22636800

ಲಾಕ್ ಡೌನ್ ಪರಿಣಾಮ ಉದ್ಯಮಗಳು ನಷ್ಟ ಅನುಭವಿಸುತ್ತಿವೆ. ಕರ್ನಾಟಕದಲ್ಲಿ ಹಲವು ಉದ್ಯಮಗಳಲ್ಲಿ ಕಾರ್ಮಿಕರನ್ನು ಕೆಲಸದಿಂದ ಕಿತ್ತು ಹಾಕಲಾಗುತ್ತಿದೆ. ವೇತನ ಕಡಿತಗೊಳಿಸಲಾಗುತ್ತಿದೆ. ಈ ಬಗ್ಗೆ ದೂರು ನೀಡಲು ಸಹ ಆನ್‌ಲೈನ್ ಮೂಲಕ ವ್ಯವಸ್ಥೆ ಮಾಡಲಾಗಿದೆ.

English summary
Karnataka government set up helpline for migrant workers who were in various states due to lock down.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X