Ration Card: ಇಂತಹ ಪಡಿತರಚೀಟಿದಾರರಿಗೆ ಎದುರಾಯ್ತು ಬೆಲೆ ತೆರಬೇಕಾದ ಪರಿಸ್ಥಿತಿ
Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇದರಲ್ಲೂ ಬಿಪಿಎಲ್, ಎಪಿಎಲ್ ಸೇರಿದಂತೆ ಹಲವು ವಿಧಗಳಿವೆ. ಮತ್ತೊಂದೆಡೆ ಈಗಾಗಲೇ ಅನಹರ್ರ ಬಳಿಯಿರುವ ಕಾರ್ಡ್‌ಗಳನ್ನು ರದ್ದುಪಡಿಸಲು ಸರ್ಕಾರ ಮುಂದಾಗಿದೆ. ಈ ನಡುವೆಯೇ ಮತ್ತೊಂದು ಮಹತ್ವದ ಕಾರ್ಯಕ್ಕೂ ಮುಂದಾಗಿದೆ. ಹಾಗಾದ್ರೆ ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಮುಂದಾಗಿದ್ದು, ಅಂತಹವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಬಡವರ ಬಿಪಿಎಲ್ ಕಾರ್ಡ್‌ಗಳನ್ನು ಸಹ ರದ್ದುಪಡಿಸಿದ್ದಾರೆ ಎಂದು ಹಲವು ಜಿಲ್ಲೆಗಳಲ್ಲಿ ಜನರು ಆಕ್ರೋಶ ಹೊರಹಾಕಿದ್ದರು. ಅಷ್ಟೇ ಅಲ್ಲದೆ, ಪ್ರತಿಭಟನೆಗಳನ್ನು ಸಹ ಮಾಡಿದ್ದರು. ಬಳಿಕ ಎಚ್ಚತ್ತ ಸರ್ಕಾರ ಇದನ್ನು ಸರಿದೂಗಿಸುವುದಾಗಿ ಭರವಸೆ ನೀಡಿತ್ತು. ಈ ನಡುವೆಯೇ ಮತ್ತೊಂದು ಮತ್ತೊಂದು ಮಹತ್ವದ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ.

ಒಂದೇ ಮನೆಗೆ ಸೇರಿದವರು ವಿಭಿನ್ನ ಹೆಸರುಗಳಲ್ಲಿ ಎರಡು ರೇಷನ್ ಕಾರ್ಡ್ ಹೊಂದಿರುವ ಪ್ರಕರಣಗಳು ಬೆಳಕಿಗೆ ಬಂದ ಹಿನ್ನಲೆ ಸರ್ಕಾರ ಇದೀಗ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಈ ಕುರಿತು ಪರಿಶೀಲನೆ ಪ್ರಾರಂಭ ಮಾಡಿದೆ.
ಕೆಲವರು ಅನರ್ಹರು ಸಹ ಸಹ ಪಡಿತರ ಚೀಟಿಗಳನ್ನು ಹೊಂದಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಲಿದೆ. ಇದೀಗ ಸರ್ಕಾರ ಇಂತಹವರಿಗೆ ಕಡಿವಾಣ ಹಾಕಲು ಮುಂದಾಗಿದೆ. ಆರ್ಥಿಕವಾಗಿ ಸದೃಢರಾದರೂ ಕೂಡ ಪಡಿತರ ಚೀಟಿಗಳನ್ನು ಪಡೆದು ಸಬ್ಸಿಡಿ ಅಕ್ಕಿಯನ್ನು ಖಾಸಗಿ ಬಳಕೆ ಅಥವಾ ಮಾರುಕಟ್ಟೆಗೆ ಮಾರಾಟ ಮಾಡುತ್ತಿರುವ ಘಟನೆಗಳು ಕೂಡ ಇದೀಗ ಸರ್ಕಾರದ ಗಮನ ಸೆಳೆದಿವೆ. ಈ ಹಿನ್ನೆಲೆ ಫಲಾನುಭವಿಗಳಿಗೆ ನ್ಯಾಯ ದೊರಕಿಸುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಇಂತಹ ಎರಡು ಕಾರ್ಡ್‌ಗಳನ್ನು ಹೊಂದಿರುವವರು ತಾವಾಗಿಯೇ ಕಾರ್ಡ್ ಅನ್ನು ಹಿಂತಿರುಗಿಸಬೇಕು ಎಂದು ಸರ್ಕಾರ ಈ ಹಿಂದೆಯೇ ಸೂಚನೆ ನೀಡಿತ್ತು. ಆದರೆ, ತುಂಬಾ ಜನರು ಇನ್ನೂ ಇಂತುರಿಗಿಸಿಯೇ ಇಲ್ಲ. ಸ್ಪಂದನೆ ಸಿಗದ ಹಿನ್ನೆಲೆ ಇದೀಗ ಸರ್ಕಾರದಿಂದಲೇ ನೇರವಾಗಿ ಎರಡೂ ಕಾರ್ಡ್‌ಗಳನ್ನು ರದ್ದು ಮಾಡುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.
ಹೊಸ ಪಡಿತರ ಚೀಟಿ ಪಡೆಯಲು ಸಾರ್ವಜನಿಕರಿಗೆ ಸಂಪೂರ್ಣ ಅವಕಾಶ ಇಲ್ಲ. ಕೇವಲ ವೈದ್ಯಕೀಯ ತುರ್ತು ಪರಿಸ್ಥಿತಿಯ ವೇಳೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆರೋಗ್ಯ ಸಂಬಂಧಿತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಪಾಲ್ಗೊಳ್ಳಲು, ಈ ರೀತಿಯ ಆಧಾರಿತ ದಾಖಲೆ ಇರುವವರಿಗೆ ಮಾತ್ರ ಅರ್ಜಿ ಅವಕಾಶ ಒದಗಿಸಲಾಗಿದೆ.
ಸದ್ಯ ಹೊಸ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇಲ್ಲ. ಹಳೆಯ ಬಾಕಿ ಅರ್ಜಿಗಳ ಪರಿಶೀಲನೆಯ ನಂತರವೇ ಹೊಸ ಅರ್ಜಿಗಳನ್ನು ಪರಿಗಣೆಗೆ ತೆಗೆದುಕೊಳ್ಳಲಾಗುವುದು ಎಂಬುದಾಗಿ ಆಹಾರ ಸಚಿವರು ತಿಳಿಸಿದ್ದಾರೆ. ಅಲ್ಲದೆ, ಒಂದು ಮನೆಯಲ್ಲಿ ಅತ್ತೆ ಹೆಸರಿನಲ್ಲಿ ಒಂದು ಕಾರ್ಡ್, ಸೊಸೆ ಹೆಸರಿನಲ್ಲಿ ಮತ್ತೊಂದು, ಸೋದರರ ಹೆಸರಿನಲ್ಲಿ ಇನ್ನೊಂದು ಎಂಬಂತೆ ಕಾರ್ಡ್‌ಗಳನ್ನು ಪಡೆದು ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಅಕ್ರಮವಾಗಿ ಪಡೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಪಡಿತರ ಚೀಟಿಯ ನಿಜವಾದ ಉದ್ದೇಶವನ್ನು ಕಾಪಾಡಬೇಕು ಎಂಬ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತಿದೆ. ಇದರಿಂದ ಎಲ್ಲ ಅರ್ಹ ಫಲಾನುಭವಿಗಳು ನಿಯಮಿತವಾಗಿ ಪಡಿತರ ಪಡೆಯಲು ಸಹಾಯ ಆದಂತಾಗಲಿದೆ. ಒಟ್ಟಿನಲ್ಲಿ ಅಕ್ರಮವಾಗಿ ಪಡೆದಿರುವಂತಹ ಕಾರ್ಡ್‌ಗಳಿಗೆ ಕಡಿವಾಣ ಹಾಕಿ ಅರ್ಹರಿಗೆ ಅನುಕೂಲ ಆಗುವಂತೆ ಮಾಡಿಕೊಡುವುದು ಈ ನಿರ್ಧಾರದ ಉದ್ದೇಶವಾಗಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications