Siddaramaiah: ರಾಜ್ಯದಲ್ಲಿ HMPV ವೈರಸ್‌ನ ಎರಡು ಪ್ರಕರಣ ಪತ್ತೆ: ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು?
ಬೆಂಗಳೂರು, ಜನವರಿ 6 : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ನಕ್ಸಲರ ಶರಣಾಗತಿಗೆ ಸರ್ಕಾರ ಸಿದ್ಧವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಲಿ ಎಂದು ಕರೆ ನೀಡಿದ್ದೇನೆ ಹಾಗೂ ನಕ್ಸಲರ ಮನ:ಪರಿವರ್ತನೆಯಾಗಿ ಶರಣಾಗುವ ಸಾಧ್ಯತೆಯಿದೆ. ಸಮಾಜದ ಮುಖ್ಯವಾಹಿನಿಗೆ ಅವರನ್ನು ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.
ಕೇಂದ್ರ ಸಚಿವ ಹೆಚ್ ಡಿ.ಕುಮಾರಸ್ವಾಮಿಯವರು ರಾಜ್ಯಸರ್ಕಾರದ ಕಮೀಷನ್ ಪ್ರಮಾಣ ಶೇ. 60 ಕ್ಕೆ ತಲುಪಿದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಕಮೀಷನ್ ಆರೋಪವನ್ನು ಗುತ್ತಿಗೆದಾರ ಸಂಘದ ಅಧ್ಯಕ್ಷರು ಕೆಂಪಯ್ಯನವರು ಮಾಡಿದ್ದರು. ಬಿಜೆಪಿಯವರು ಕಮೀಷನ್ ತೆಗೆದುಕೊಂಡಿರುವುದಾಗಿ ಕೆಂಪಯ್ಯನವರು ಆರೋಪಿಸಿದ್ದಾಗಿ ತಿಳಿಸಿದರು.
ಇನ್ನೂ ಕರ್ನಾಟಕದಲ್ಲಿ ಎಚ್‌ಎಂಪಿ ವೈರಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಸೂಚನೆ ಮೇರೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಮೊಹಮ್ಮದ್ ಮೊಹಸೀನ್, ನಿರ್ದೇಶಕರಾದ ಡಾ. ಬಿ.ಎಲ್. ಸುಜಾತಾ ರಾಥೋಡ್ ಅವರ ನೇತೃತ್ವದಲ್ಲಿ ಎಲ್ಲ ಜಿಲ್ಲಾ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಹಾಗೂ ಇತರೆ ಪರಿಣಾಮಕಾರಿ ಕ್ರಮಗಳ ಬಗ್ಗೆ ಈ ವೀಡಿಯೋ ಕಾನ್ಸರೆನ್ಸ್ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.
ರಾಜ್ಯದಲ್ಲಿ ಎಂಟು ತಿಂಗಳ ಮಗುವಿನಲ್ಲಿ ಎಚ್ ಎಂವಿ ವೈರಸ್ ಪತ್ತೆಯಾಗಿರುವ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಈಗಾಗಲೇ ನಮ್ಮ ಆರೋಗ್ಯ ಸಚಿವರು ಕೆಲಸ ಮಾಡುತ್ತಿದ್ದಾರೆ. ಯಾರೂ ಸಹ ಆತಂಕಪಡುವ ಅವಶ್ಯಕತೆಯಿಲ್ಲ. ಸರ್ಕಾರ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications