ಮುಜರಾಯಿ ದೇವಾಲಯಗಳಲ್ಲಿ ಸರ್ಕಾರದಿಂದ ಸಾಮೂಹಿಕ ವಿವಾಹ

ಬೆಂಗಳೂರು, ಅಕ್ಟೋಬರ್ 15 : ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ವಿವಾಹ ಆಯೋಜಿಸಲು ಚಿಂತನೆ ನಡೆದಿದೆ. 2020ರ ಮಾರ್ಚ್‌ ವೇಳೆಗೆ ಈ ಕಾರ್ಯಕ್ರಮಕ್ಕೆ ಚಾಲನೆ ಸಿಗುವ ನಿರೀಕ್ಷೆ ಇದೆ.

ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಈ ಕುರಿತು ಮಾಹಿತಿ ನೀಡಿದರು. "ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಮೂಲಕ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಇದರಿಂದ ಬಡವರಿಗೆ ಸಹಕಾರಿಯಾಗಲಿದೆ" ಎಂದರು.

ಇಲಾಖೆ ವ್ಯಾಪ್ತಿಗೆ ಒಳಪಡುವ 'ಎ' ದರ್ಜೆಯ ದೇವಾಲಯಗಳಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ 'ಎ' ದರ್ಜೆಯ 109 ದೇವಾಲಯಗಳಿವೆ. ಇವುಗಳಲ್ಲಿ 100 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸಲು ಅಗತ್ಯ ಮೂಲ ಸೌಕರ್ಯಗಳಿವೆ.

marriage

ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ಜೋಡಿಗಳಿಗೆ ವಧು-ವರರಿಗೆ ವಸ್ತ್ರ, 8 ಗ್ರಾಂ ಚಿನ್ನದ ಮಾಂಗಲ್ಯ ಹಾಗೂ ಆರ್ಥಿಕ ಸಹಾಯ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಈ ಕಾರ್ಯಕ್ರಮ ಆಯೋಜಿಸಲು ದಾನಿಗಳು ಮತ್ತು ಸಂಘ ಸಂಸ್ಥೆಗಳ ಸಹಾಯವನ್ನು ಪಡೆಯಲು ಸರ್ಕಾರ ಮುಂದಾಗಿದೆ.

ಸಾಮೂಹಿಕ ವಿವಾಹದಲ್ಲಿ ಪ್ರತಿ ಜೋಡಿಗೆ ಸುಮಾರು 25 ರಿಂದ 30 ಸಾವಿರ ರೂ. ಖರ್ಚಾಗಲಿದೆ. ಈ ವೆಚ್ಚವನ್ನು ಆಯಾ ದೇವಾಲಯದ ಆದಾಯದಿಂದಲೇ ಭರಿಸಲಾಗುತ್ತದೆ. ಉದ್ಯಮಿಗಳ ನೆರವು ಪಡೆಯಲು ಉದ್ದೇಶಿಸಲಾಗಿದೆ.

ರಾಜ್ಯದ ದೇವಾಲಯಗಳ ಪೈಕಿ 2018-19ನೇ ಸಾಲಿನಲ್ಲಿ ಕುಕ್ಕೆ ಸುಬ್ರಮಣ್ಯ ರಾಜ್ಯದ ಶ್ರೀಮಂತ ದೇವಾಲಯವಾಗಿದೆ. ವಾರ್ಷಿಕ 92 ಕೋಟಿ ಆದಾಯ ದೇವಾಲಯದಲ್ಲಿ ಸಂಗ್ರಹವಾಗಿದೆ. ಪ್ರತಿನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಭೇಟಿ ಕೊಡುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+